ದೆಹಲಿ, ಸೆ.26: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ಅವರು 91ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಮನಮೋಹನ್ ಸಿಂಗ್ 10 ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದವರು. ಇನ್ನು ಮನಮೋಹನ್ ಸಿಂಗ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು X (ಹಿಂದಿನ ಟ್ವಿಟರ್) ಮೂಲಕ ಶುಭಾಶಯ ತಿಳಿಸಿದ್ದಾರೆ. ಮನಮೋಹನ್ ಸಿಂಗ್ ಹೀಗಿನ ಪಾಕಿಸ್ತಾನದ ಗಾಹ್ದಲ್ಲಿ 1932 ರಲ್ಲಿ ಜನಿಸಿದರು. 2004-14ರವರೆಗೆ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು.
ಪ್ರಧಾನಿ ಮೋದಿ ಅವರು Xನಲ್ಲಿ ಮನಮೋಹನ್ ಸಿಂಗ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಬಗ್ಗೆ ಹೆಚ್ಚಿಗೆ ತಿಳಿಯದಿರುವ ಮಾಹಿತಿ ನಿಮಗಾಗಿ ಇಲ್ಲಿದೆ
1991-1996ರ ಅವಧಿಯಲ್ಲಿ ಆಗಿನ ಪ್ರಧಾನಿ ಪಿ.ವಿ.ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ಡಾ. ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಂತರದ ಸಮಾಜವಾದಿ ನೇತೃತ್ವದ ಸರ್ಕಾರದಲ್ಲಿ ಆರ್ಥಿಕ ಸುಧಾರಣೆಗಳ ಪ್ರಮುಖ ವಾಸ್ತುಶಿಲ್ಪಿಯಾಗಿ ಕಾರ್ಯನಿರ್ವಹಿಸಿದರು. ನಂತರ 2004ರಿಂದ 2014ರವರೆಗೆ ಅಂದರೆ 10 ವರ್ಷಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದೀಗ ಪ್ರಸ್ತುತ ರಾಜ್ಯಸಭೆಯ ಸದಸ್ಯರಾಗಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ