AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮರನಾಥ ಯಾತ್ರಿಕರಿಗೆ ಪ್ರಧಾನಿ ಮೋದಿ ಪತ್ರ: ಭಕ್ತರ ಮನ ಗೆದ್ದ ‘ಐದು ಪ್ರತಿಜ್ಞೆಗಳು’

ಅಮರನಾಥ ಯಾತ್ರಿಕರಿಗೆ ಪ್ರಧಾನಿ ಮೋದಿ ಪತ್ರ ಬರೆದಿದ್ದು, ಯಾತ್ರೆಯನ್ನು ಸ್ವಚ್ಛ, ಸುರಕ್ಷಿತ ಹಾಗೂ ಅರ್ಥಪೂರ್ಣವಾಗಿಸಲು 'ಐದು ಪ್ರತಿಜ್ಞೆಗಳು' ಅನುಸರಿಸುವಂತೆ ಕರೆ ನೀಡಿದ್ದಾರೆ. ಸ್ವಚ್ಛತೆ, ಸುರಕ್ಷತೆ, ಸ್ಥಳೀಯ ಉತ್ಪನ್ನಗಳಿಗೆ ಬೆಂಬಲ, ಪರಿಸರ ಸಂರಕ್ಷಣೆ ಮತ್ತು ರಾಷ್ಟ್ರ ಪ್ರಥಮ ಎಂಬುದು ಈ ಪ್ರತಿಜ್ಞೆಗಳ ಸಾರವಾಗಿದೆ. ವಿಕಸಿತ ಭಾರತ ನಿರ್ಮಾಣದಲ್ಲಿ ಯಾತ್ರಿಕರ ಪಾತ್ರ ಮಹತ್ವದ್ದು ಎಂದು ಮೋದಿ ಹೇಳಿದ್ದು, ಭಕ್ತರ ಮನ ಗೆದ್ದಿದೆ.

ಅಮರನಾಥ ಯಾತ್ರಿಕರಿಗೆ ಪ್ರಧಾನಿ ಮೋದಿ ಪತ್ರ: ಭಕ್ತರ ಮನ ಗೆದ್ದ 'ಐದು ಪ್ರತಿಜ್ಞೆಗಳು'
ಅಮರನಾಥ ಯಾತ್ರೆ
ನಯನಾ ರಾಜೀವ್
|

Updated on: Jul 05, 2026 | 8:21 AM

Share

ನವದೆಹಲಿ, ಜುಲೈ 05: ಈ ವರ್ಷದ ಪವಿತ್ರ ಅಮರನಾಥ ಯಾತ್ರೆ(Amarnath Yatra)ಗೆ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಯಾತ್ರಿಕರಿಗೆ ವಿಶೇಷವಾದ ಎರಡು ಪುಟಗಳ ಪತ್ರವೊಂದನ್ನು ಬರೆದಿದ್ದಾರೆ. ಭಕ್ತರಿಗೆ “ಹರ ಹರ ಮಹಾದೇವ್” ಮತ್ತು “ಜೈ ಬಾಬಾ ಬರ್ಫಾನಿ” ಘೋಷಣೆಗಳೊಂದಿಗೆ ಶುಭಾಶಯ ಕೋರಿದ್ದಾರೆ.

ಪ್ರಧಾನಿ ಮೋದಿ ಕರೆ ನೀಡಿರುವ ಆ ‘ಐದು ಪ್ರತಿಜ್ಞೆಗಳು’ ಯಾವುವು? ಸ್ವಚ್ಛತೆ: ಇಡೀ ಯಾತ್ರಾ ಮಾರ್ಗದಲ್ಲಿ ನೈರ್ಮಲ್ಯವನ್ನು ಕಾಪಾಡುವುದು ಮತ್ತು ಎಲ್ಲೂ ಕಸ ಹಾಕದೆ ಸ್ವಚ್ಛತೆಗೆ ಆದ್ಯತೆ ನೀಡುವುದು.

ಸುರಕ್ಷತಾ ನಿಯಮಗಳ ಪಾಲನೆ: ಮಳೆ, ಶೀತ ಮತ್ತು ಜಾರುವ ರಸ್ತೆಗಳಿರುವುದರಿಂದ ಆಡಳಿತ ಮಂಡಳಿ ನೀಡುವ ಸುರಕ್ಷತಾ ಸಲಹೆಗಳು ಹಾಗೂ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು.

ಸ್ಥಳೀಯ ಉತ್ಪನ್ನಗಳಿಗೆ ಬೆಂಬಲ (ವೋಕಲ್ ಫಾರ್ ಲೋಕಲ್): ಜಮ್ಮು ಮತ್ತು ಕಾಶ್ಮೀರದ ಬಡ ಕುಟುಂಬಗಳು ಹಾಗೂ ಯುವಕರ ಜೀವನೋಪಾಯಕ್ಕೆ ನೆರವಾಗಲು, ಯಾತ್ರೆಯ ಒಟ್ಟು ವೆಚ್ಚದ ಕನಿಷ್ಠ ಶೇಕಡಾ 10 ರಷ್ಟನ್ನು ಅಲ್ಲಿನ ಸ್ಥಳೀಯ ವಸ್ತುಗಳನ್ನು ಖರೀದಿಸಲು ಬಳಸಬೇಕು.

ಪರಿಸರ ಸಂರಕ್ಷಣೆ (ಏಕ್ ಪೆಡ್ ಮಾ ಕೆ ನಾಮ್): ಯಾತ್ರೆ ಮುಕ್ತಾಯವಾಗುವ ‘ರಕ್ಷಾ ಬಂಧನ’ದ ದಿನದಂದು ಸಹೋದರ ಅಥವಾ ಸಹೋದರಿಗೆ ಒಂದು ಸಸಿಯನ್ನು ಉಡುಗೊರೆಯಾಗಿ ನೀಡುವ ಮೂಲಕ ಪರಿಸರ ಬೆಳೆಸುವುದು.

ರಾಷ್ಟ್ರ ಪ್ರಥಮ (ನೇಷನ್ ಫಸ್ಟ್): ಯಾತ್ರೆ ಮುಗಿದ ಮೇಲೂ “ರಾಷ್ಟ್ರವೇ ಮೊದಲು” ಎಂಬ ಭಾವನೆಯೊಂದಿಗೆ ವರ್ಷವಿಡೀ ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿಭಾಯಿಸಿ, ‘ವಿಕಸಿತ ಭಾರತ’ ನಿರ್ಮಾಣಕ್ಕೆ ಕೊಡುಗೆ ನೀಡುವುದು.

ಮತ್ತಷ್ಟು ಓದಿ: ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ

ಸೇವೆಗೆ ಪ್ರಧಾನಿ ಶ್ಲಾಘನೆ ಅಮರನಾಥ ದೇವಾಲಯ ಮಂಡಳಿ, ಜಮ್ಮು-ಕಾಶ್ಮೀರ ಆಡಳಿತ ಸೇರಿದಂತೆ ಯಾತ್ರೆಯ ಯಶಸ್ಸಿಗೆ ಶ್ರಮಿಸುತ್ತಿರುವ ಭಾರತೀಯ ಸೇನೆ, ಸಿಆರ್‌ಪಿಎಫ್, ಪೊಲೀಸ್, ಐಟಿಬಿಪಿ, ಬಿಎಸ್‌ಎಫ್, ಎನ್‌ಡಿಆರ್‌ಎಫ್, ವೈದ್ಯರು ಮತ್ತು ಸ್ವಯಂಸೇವಕರ ನಿಸ್ವಾರ್ಥ ಸೇವೆಯನ್ನು ಪ್ರಧಾನಿ ಮೋದಿ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಸವಾಲಿನ ಪರ್ವತ ಹಾದಿಯಲ್ಲಿ ನೆರವಾಗುವ ಸ್ಥಳೀಯ ಕುದುರೆ ಮಾಲೀಕರು ಮತ್ತು ಪಲ್ಲಕ್ಕಿ ಹೊರುವವರ ಕೊಡುಗೆಯನ್ನು ಅವರು ವಿಶೇಷವಾಗಿ ಸ್ಮರಿಸಿದ್ದಾರೆ.

ಕೊನೆಯಲ್ಲಿ, ಬಾಬಾ ಅಮರನಾಥರ ಆಶೀರ್ವಾದ ಎಲ್ಲರ ಮೇಲಿರಲಿ, ನಿಮ್ಮ ಪ್ರಯಾಣವು ಸುರಕ್ಷಿತ ಹಾಗೂ ಮಂಗಳಕರವಾಗಿರಲಿ ಎಂದು ಪ್ರಧಾನಿ ಮೋದಿ ಶುಭ ಹಾರೈಸಿದ್ದಾರೆ.

ಪ್ರಧಾನಿ ಮೋದಿ ಪ್ರತಿಜ್ಞೆಗೆ ಜನರ ಪ್ರತಿಕ್ರಿಯೆ

ನಮ್ಮ ನಗರಗಳ ಮೆಟ್ರೋ ರೈಲನ್ನು ಜನರು ಕೇವಲ ಸರ್ಕಾರಿ ಸೇವೆಯಾಗಿ ನೋಡದೆ, ಜವಾಬ್ದಾರಿಯಿಂದ ಕಾಪಾಡಿಕೊಳ್ಳುವಂತೆ, ಅಮರನಾಥದ ಸೌಲಭ್ಯಗಳನ್ನೂ ಭಕ್ತರು ತಮ್ಮದೇ ಎಂಬ ಭಾವನೆಯಿಂದ ನೋಡಬೇಕು ಎಂದು ಭಕ್ತರು ಕೂಡ ಕರೆ ನೀಡಿದ್ದಾರೆ. ಯಾತ್ರೆಯ ಮಾರ್ಗದಲ್ಲಿ ಭಕ್ತರು ಈ ಪತ್ರವನ್ನು ಕೈಯಲ್ಲಿ ಹಿಡಿದು ಪ್ರಧಾನಿಯವರ ಸಂದೇಶಕ್ಕೆ ಕೃತಜ್ಞತೆ ಸಲ್ಲಿಸುತ್ತಿರುವುದು ಕಂಡುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ
ಚಾಮರಾಜನಗರ ಆದಿವಾಸಿಗಳಿಗೆ ಆಹಾರ ಕಿಟ್ ಸ್ಥಗಿತ
ಚಾಮರಾಜನಗರ ಆದಿವಾಸಿಗಳಿಗೆ ಆಹಾರ ಕಿಟ್ ಸ್ಥಗಿತ
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು
ಬಿಗ್ ಬಾಸ್ ಕನ್ನಡ: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ
ಬಿಗ್ ಬಾಸ್ ಕನ್ನಡ: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ