AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ 76ನೇ ಜನ್ಮದಿನ: ಯೂಟ್ಯೂಬ್‌ನಲ್ಲಿ 3 ಕೋಟಿ, ಇನ್‌ಸ್ಟಾಗ್ರಾಮ್‌ನಲ್ಲಿ 10 ಕೋಟಿ; ವಿಶ್ವದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ನಾಯಕ ನರೇಂದ್ರ ಮೋದಿ

ಪ್ರಧಾನಿ ಮೋದಿ ಅವರ 76ನೇ ಜನ್ಮದಿನದ ಹಿನ್ನೆಲೆಯಲ್ಲಿ ಬಿಜೆಪಿ ದೇಶಾದ್ಯಂತ ಬೃಹತ್ ಆಚರಣೆಗಳನ್ನು ಘೋಷಿಸಿದೆ. ಮತ್ತೊಂದೆಡೆ, ಮೋದಿ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಜಾಗತಿಕ ದಾಖಲೆಗಳನ್ನು ಮುರಿಯುತ್ತಿದ್ದಾರೆ. ಯೂಟ್ಯೂಬ್‌ನಲ್ಲಿ 3 ಕೋಟಿ ಚಂದಾದಾರರು ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ 10 ಕೋಟಿ ಹಿಂಬಾಲಕರನ್ನು ಹೊಂದಿರುವ ಮೋದಿ, ಡಿಜಿಟಲ್ ವಿಶ್ವದಲ್ಲಿ ಪ್ರಮುಖ ರಾಜಕಾರಣಿಯಾಗಿ ಹೊರಹೊಮ್ಮಿದ್ದಾರೆ. ಇದು ಅವರ ನಾಯಕತ್ವದ ಜನಪ್ರಿಯತೆಯನ್ನು ಪ್ರತಿಬಿಂಬಿಸುತ್ತದೆ.

ಪ್ರಧಾನಿ ಮೋದಿ 76ನೇ ಜನ್ಮದಿನ: ಯೂಟ್ಯೂಬ್‌ನಲ್ಲಿ 3 ಕೋಟಿ, ಇನ್‌ಸ್ಟಾಗ್ರಾಮ್‌ನಲ್ಲಿ 10 ಕೋಟಿ; ವಿಶ್ವದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ನಾಯಕ ನರೇಂದ್ರ ಮೋದಿ
ನರೇಂದ್ರ ಮೋದಿ ಸಾಮಾಜಿಕ ಜಾಲತಾಣImage Credit source: Tv9 kannada
ಅಕ್ಷಯ್​ ಪಲ್ಲಮಜಲು​​
|

Updated on: Sep 16, 2026 | 1:55 PM

Share

ದೆಹಲಿ, ಸೆ.16: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ 76ನೇ ಜನ್ಮದಿನದ ಹೊಸ್ತಿಲಲ್ಲಿದ್ದು, ಈ ಐತಿಹಾಸಿಕ ಸಂದರ್ಭವನ್ನು ಸಂಭ್ರಮಿಸಲು ಭಾರತೀಯ ಜನತಾ ಪಾರ್ಟಿ (BJP) ದೇಶಾದ್ಯಂತ ಬೃಹತ್ ಅಭಿಯಾನಗಳನ್ನು ಘೋಷಿಸಿದೆ. ಮತ್ತೊಂದೆಡೆ, ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಒಂದರ ಮೇಲೊಂದರಂತೆ ಜಾಗತಿಕ ದಾಖಲೆಗಳನ್ನು ಮುರಿಯುವ ಮೂಲಕ ‘ಡಿಜಿಟಲ್ ಜಗತ್ತಿನ ಕಿರೀಟವಿಲ್ಲದ ಸುಲ್ತಾನ’ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. “ಸೆಪ್ಟೆಂಬರ್ 17 ರ ಸಾಯಂಕಾಲ 6 ಗಂಟೆಯಿಂದ ಬೆಳಿಗ್ಗೆ 7 ಗಂಟೆಯ ನಡುವೆ ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ‘ಆಶೀರ್ವಾದದ ದೀಪ’ ಹಚ್ಚಿ ಪ್ರಧಾನಿಯವರನ್ನು ಹಾರೈಸಬೇಕು,” ಎಂದು ನಿತಿನ್ ನವೀನ್ ವೀಡಿಯೊ ಸಂದೇಶ ನೀಡಿದ್ದಾರೆ. 2014 ರಿಂದ ಭಾರತವು ಪರಿವರ್ತನಾತ್ಮಕ ಬದಲಾವಣೆಗಳನ್ನು ಕಂಡಿದ್ದು, 2047 ರ ವೇಳೆಗೆ ವಿಕಸಿತ ಭಾರತ ಕಟ್ಟುವತ್ತ ಹೆಜ್ಜೆ ಇಡುತ್ತಿದೆ ಎಂದು ಬಿಜೆಪಿ ಹೇಳಿದೆ. ಇದರ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ.

ಯೂಟ್ಯೂಬ್‌ನಲ್ಲಿ 30 ಮಿಲಿಯನ್, ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಗಡಿ ದಾಟಿದ ಮೋದಿ

ಸಾಮಾಜಿಕ ಜಾಲತಾಣಗಳ ಜಾಗತಿಕ ರಂಗದಲ್ಲಿ ಪ್ರಧಾನಿ ಮೋದಿ ತಮ್ಮ ನಾಯಕತ್ವದ ಕ್ರಾಂತಿಯನ್ನೇ ಸೃಷ್ಟಿಸಿದ್ದಾರೆ. ಪ್ರಧಾನಿ ಮೋದಿ ಅವರ ಯೂಟ್ಯೂಬ್ ಚಾನೆಲ್ ಸಬ್‌ಸ್ಕ್ರೈಬರ್ಸ್‌ ಸಂಖ್ಯೆ 3 ಕೋಟಿ ಗಡಿ ದಾಟಿದ್ದು, ಜಗತ್ತಿನ ಯಾವುದೇ ಪ್ರಭಾವಿ ನಾಯಕನಿಗಿಂತ ಬಹು ಎತ್ತರದಲ್ಲಿದ್ದಾರೆ. ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸೋನಾರೊ (ಎರಡನೇ ಸ್ಥಾನ) ಅವರ ಸಬ್‌ಸ್ಕ್ರೈಬರ್ಸ್‌ ಸಂಖ್ಯೆ ಮೋದಿ ಅವರ ನಾಲ್ಕನೇ ಒಂದು ಭಾಗದಷ್ಟಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗಿಂತ 7 ಪಟ್ಟು ಹೆಚ್ಚು ಹಾಗೂ ಭಾರತದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗಿಂತ 3 ಪಟ್ಟು ಹೆಚ್ಚು ಯೂಟ್ಯೂಬ್ ಸಬ್‌ಸ್ಕ್ರೈಬರ್‌ಗಳನ್ನು ಮೋದಿ ಹೊಂದಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಇನ್‌ಸ್ಟಾಗ್ರಾಮ್‌ನಲ್ಲಿ 10 ಕೋಟಿ ಫಾಲೋವರ್ಸ್ ಹೊಂದಿದ ವಿಶ್ವದ ಮೊದಲ ರಾಜಕಾರಣಿ ಎಂಬ ಐತಿಹಾಸಿಕ ದಾಖಲೆ ಬರೆದಿದ್ದರು.

ಕೇಂದ್ರ ಸಚಿವರ ಸೋಶಿಯಲ್ ಮೀಡಿಯಾ ಪ್ರಪೋರ್ಟ್: ಪ್ರಧಾನಿ ಮೋದಿ ಫಸ್ಟ್

ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಮೇ 1 ರಿಂದ ಆಗಸ್ಟ್ 15, 2026 ರವರೆಗಿನ ಅವಧಿಯ ಸಚಿವರ ಸೋಶಿಯಲ್ ಮೀಡಿಯಾ ಪರ್ಫಾರ್ಮೆನ್ಸ್ ವರದಿಯನ್ನು ಪ್ರಸ್ತುತಪಡಿಸಲಾಗಿದ್ದು, ಈ ಪಟ್ಟಿಯಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರೇ ಅಗ್ರಸ್ಥಾನದಲ್ಲಿದ್ದಾರೆ. ಇನ್‌ಸ್ಟಾಗ್ರಾಮ್, ಎಕ್ಸ್ (ಟ್ವಿಟರ್) ಹಾಗೂ ಫೇಸ್‌ಬುಕ್‌ನಲ್ಲಿ ಅವರ ದಿನನಿತ್ಯದ ಪೋಸ್ಟ್‌ಗಳು, ಸರಾಸರಿ ಇಂಗೇಜ್‌ಮೆಂಟ್, ಲೈಕ್ಸ್ ಹಾಗೂ ಫಾಲೋವರ್ಸ್ ಆಧಾರದ ಮೇಲೆ ಈ ಶ್ರೇಯಾಂಕ ನೀಡಲಾಗಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಗಳ ನಂತರ ಕೇಂದ್ರ ಸರ್ಕಾರವು ಯುವಕರನ್ನು ತಲುಪಲು ‘ಜನ್-ಝಿ’ (Gen Z) ಹಾಗೂ ಸೃಷ್ಟಿಕರ್ತರ (Creators) ಶೈಲಿಯ ಕಿರು ವೀಡಿಯೊಗಳು ಮತ್ತು ‘ಸ್ನ್ಯಾಪ್‌ಚಾಟ್’ (Snapchat) ನಂತಹ ಪ್ಲಾಟ್‌ಫಾರ್ಮ್‌ಗಳನ್ನು ವ್ಯಾಪಕವಾಗಿ ಬಳಸಿಕೊಳ್ಳುತ್ತಿದೆ.

ಇದನ್ನೂ ಓದಿ: ಸ್ವಚ್ಛ ಭಾರತದಿಂದ ಪಿಎಂ ಇಂಟರ್ನ್‌ಶಿಪ್‌ವರೆಗೆ: ಪ್ರಧಾನಿ ಮೋದಿ ಘೋಷಿಸಿದ ಪ್ರಮುಖ ಯೋಜನೆಗಳ ವಿವರ ಇಲ್ಲಿದೆ

ವಿದ್ಯಾರ್ಥಿಗಳಿಗೆ ನೀಡಿದ ವೀಡಿಯೊ ಸಂದೇಶಕ್ಕೆ 300 ಮಿಲಿಯನ್ ವೀವ್ಸ್;

ನೀಟ್​​​​​ ಪರೀಕ್ಷೆ ಅಕ್ರಮದ ವಿರೋಧ ಜಂತರ್​ ಮಂತರ್​​​ನಲ್ಲಿ ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಅವರು ರಾತ್ರಿ 12 ಗಂಟೆಗೆ ಇನ್ಸ್ಟಾಗ್ರಾಮ್​​​ ರೀಲ್ಸ್​​​​​ನಲ್ಲಿ ಮಾಡಿದರು. ಈ ರೀಲ್ಸ್​​​​​ನಲ್ಲಿ ಪ್ರಧಾನಿ ಮೋದಿ ಅವರು ವಿದ್ಯಾರ್ಥಿಗಳ ಹಲವು ಪ್ರಮುಖ ಆತಂಕ ಹಾಗೂ ಕಾಳಜಿಗಳಿಗೆ ಸ್ಪಂದಿಸಿ, ಸರ್ಕಾರ ಕೈಗೊಳ್ಳಲಿರುವ ಕ್ರಮಗಳ ಕುರಿತು ವೀಡಿಯೊ ಸಂದೇಶವೊಂದನ್ನು ಹಂಚಿಕೊಂಡಿದ್ದರು. ಈ ವಿಡಿಯೋ ಕೆಲವೇ ಗಂಟೆಗಳಲ್ಲಿ ಈ ಏಕೈಕ ವೀಡಿಯೊ 300 ಮಿಲಿಯನ್ (30 ಕೋಟಿ) ವೀಕ್ಷಣೆಗಳನ್ನು (Views) ಹಾಗೂ 16 ಮಿಲಿಯನ್ (1.6 ಕೋಟಿ) ಲೈಕ್ಸ್‌ಗಳನ್ನು ಗಳಿಸಿ ಹೊಸ ದಾಖಲೆ ಬರೆದಿತ್ತು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!