AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha Train Accident: ರೈಲು ದುರಂತದಿಂದ ಆಘಾತವಾಗಿದೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ; ಪ್ರಧಾನಿ ಮೋದಿ

ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi), ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಗಾಯಗೊಂಡವರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

Odisha Train Accident: ರೈಲು ದುರಂತದಿಂದ ಆಘಾತವಾಗಿದೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ; ಪ್ರಧಾನಿ ಮೋದಿ
ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ
Ganapathi Sharma
|

Updated on:Jun 02, 2023 | 10:40 PM

Share

ಭುವನೇಶ್ವರ: ಒಡಿಶಾದ ಬಾಲಸೋರ್‌ (Balasore)ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಕೋರಮಂಡಲ್ ಎಕ್ಸ್‌ಪ್ರೆಸ್ (Coromandel Express) ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 50 ಮಂದಿ ಶುಕ್ರವಾರ ಸಂಜೆ ಸಾವನ್ನಪ್ಪಿದ್ದಾರೆ. ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi), ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಗಾಯಗೊಂಡವರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ. ಅಪಘಾತದಲ್ಲಿ ಸುಮಾರು300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ಆಘಾತವಾಗಿದೆ. ಈ ಸಂದರ್ಭದಲ್ಲಿ ದುಃಖಿತರ ಕುಟುಂಬದವರ ಜತೆ ನಾವಿದ್ದೇವೆ. ಗಾಯಾಳುಗಳು ಬೇಗ ಚೇತರಿಸುವಂತಾಗಲಿ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜತೆ ಮಾತನಾಡಿ ಪರಿಸ್ಥಿತಿಯ ವಿವರ ಪಡೆದಿದ್ದೇನೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಗಾಯಗೊಂಡವರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್‌ನಿಂದ ಸುಮಾರು 40 ಕಿಮೀ ದೂರದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ ರೈಲಿನ 3 ಸ್ಲೀಪರ್ ಕೋಚ್‌ಗಳನ್ನು ಬಿಟ್ಟು ಉಳಿದ ಬೋಗಿಗಳು ಹಳಿತಪ್ಪಿದವು. ಸುಮಾರು 18 ಬೋಗಿಗಳು ಹಳಿ ತಪ್ಪಿವೆ ಎನ್ನಲಾಗಿದೆ. ಈ ರೈಲು ಚೆನ್ನೈ ಸೆಂಟ್ರಲ್‌ ಹಾಗೂ ಕೋಲ್ಕತ್ತಾದ ಶಾಲಿಮಾರ್ ರೈಲು ನಿಲ್ದಾಣದ ಮಧ್ಯೆ ಸಂಚರಿಸುತ್ತಿತ್ತು.

ಎರಡೂ ರೈಲುಗಳು ಒಂದೇ ಮಾರ್ಗದಲ್ಲಿ ಬಂದಿದ್ದರಿಂದ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸಿಗ್ನಲ್ ವೈಫಲ್ಯದಿಂದ ಎರಡೂ ರೈಲುಗಳು ಒಂದೇ ಹಳಿಯಲ್ಲಿ ಬಂದು ಡಿಕ್ಕಿ ಹೊಡೆದಿದೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ: Odisha Train Accident: ಒಡಿಶಾದ ಬಾಲಸೋರ್​​ನಲ್ಲಿ ರೈಲು ಅಪಘಾತ; 50 ಮಂದಿ ಸಾವು

ಪಶ್ಚಿಮ ಬಂಗಾಳದ ಪ್ರಯಾಣಿಕರನ್ನು ಒಳಗೊಂಡಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ಅಪಘಾತಕ್ಕೀಡಾಗಿರುವುದು ತಿಳಿದು ಖೇದವಾಯಿತು. ನಮ್ಮ ಜನರ ಸಲುವಾಗಿ ನಾವು ಒಡಿಶಾ ಸರ್ಕಾರ ಮತ್ತು ಆಗ್ನೇಯ ರೈಲ್ವೆಯೊಂದಿಗೆ ಸಮನ್ವಯ ಸಾಧಿಸುತ್ತಿದ್ದೇವೆ. ನಮ್ಮ ತುರ್ತು ನಿಯಂತ್ರಣ ಕೊಠಡಿಯನ್ನು 033- 22143526/ 22535185 ಸಂಖ್ಯೆಗಳೊಂದಿಗೆ ಏಕಕಾಲದಲ್ಲಿ ಆರಂಭಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ, ನೆರವಿಗಾಗಿ ಎಲ್ಲಾ ಪ್ರಯತ್ನಗಳನ್ನು ಪ್ರಾರಂಭಿಸಲಾಗಿದೆ. ಒಡಿಶಾ ಸರ್ಕಾರ ಮತ್ತು ರೈಲ್ವೆ ಅಧಿಕಾರಿಗಳಿಗೆ ನೆರವಾಗಲು ಮತ್ತು ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ನಾವು 5- 6 ಸದಸ್ಯರ ತಂಡವನ್ನು ಸ್ಥಳಕ್ಕೆ ಕಳುಹಿಸುತ್ತಿದ್ದೇವೆ. ನಾನು ಮತ್ತು ಮುಖ್ಯ ಕಾರ್ಯದರ್ಶಿಯವರು ಇತರ ಹಿರಿಯ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:14 pm, Fri, 2 June 23