AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀರ್ಘ ಪ್ರಧಾನಿ: ನೆಹರು ದಾಖಲೆ ಮುರಿದ ನರೇಂದ್ರ ಮೋದಿ ನಾಯಕತ್ವ ಕೊಂಡಾಡಿದ ಚಂದ್ರಬಾಬು ನಾಯ್ಡು, ಹೆಚ್.ಡಿ. ದೇವೇಗೌಡ

ಪ್ರಧಾನಿ ನರೇಂದ್ರ ಮೋದಿ ಅವರು ನೆಹರು ಅವರ ದಾಖಲೆಯನ್ನು ಮೀರಿ ಭಾರತದ ಸುದೀರ್ಘ ಅವಧಿಯ ಪ್ರಧಾನಿ ಎನಿಸಿಕೊಂಡಿದ್ದಾರೆ. ಅವರ ನಾಯಕತ್ವ, ಸುಧಾರಣಾವಾದಿ ಆಡಳಿತ ಮತ್ತು ವಿಕಸಿತ ಭಾರತ ದೃಷ್ಟಿಕೋನವನ್ನು ಚಂದ್ರಬಾಬು ನಾಯ್ಡು ಹಾಗೂ ಹೆಚ್.ಡಿ. ದೇವೇಗೌಡರು ಶ್ಲಾಘಿಸಿದ್ದಾರೆ. ಮೋದಿ ಅವರ ಸ್ಥಿರ ಆಡಳಿತ, ಜಾಗತಿಕವಾಗಿ ಭಾರತದ ಘನತೆ ಹೆಚ್ಚಿಸುವ ಕಾರ್ಯವೈಖರಿ ಮತ್ತು ಬಡವರ ಕಲ್ಯಾಣಕ್ಕೆ ನೀಡುವ ಆದ್ಯತೆಯನ್ನು ಉಭಯ ನಾಯಕರು ಕೊಂಡಾಡಿದ್ದಾರೆ.

ಸುದೀರ್ಘ ಪ್ರಧಾನಿ: ನೆಹರು ದಾಖಲೆ ಮುರಿದ ನರೇಂದ್ರ ಮೋದಿ ನಾಯಕತ್ವ ಕೊಂಡಾಡಿದ ಚಂದ್ರಬಾಬು ನಾಯ್ಡು, ಹೆಚ್.ಡಿ. ದೇವೇಗೌಡ
ಹೆಚ್​ಡಿ ದೇವೇಗೌಡ-ಮೋದಿ-ಚಂದ್ರಬಾಬು ನಾಯ್ಡು
ನಯನಾ ರಾಜೀವ್
|

Updated on:Jun 09, 2026 | 11:48 AM

Share

ನವದೆಹಲಿ, ಜೂನ್ 09: ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಸುದೀರ್ಘ ಅವಧಿಗೆ ಸತತವಾಗಿ ಆಯ್ಕೆಯಾದ ಪ್ರಧಾನಿ ಎಂಬ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿರುವ ನರೇಂದ್ರ ಮೋದಿ(Narendra Modi) ಅವರ ಆಡಳಿತ ಹಾಗೂ ಜಾಗತಿಕ ನಾಯಕತ್ವವನ್ನು ದೇಶದ ಪ್ರಮುಖ ನಾಯಕರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಸತತ ಆಡಳಿತದ ದಾಖಲೆಯನ್ನು ಹಿಂದಿಕ್ಕಿ ಮುನ್ನಡೆದಿರುವ ಪ್ರಧಾನಿ ಮೋದಿ ಅವರ ಸಾಧನೆಯ ಕುರಿತು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ವಿಶೇಷ ಲೇಖನಗಳನ್ನು ಬರೆಯುವ ಮೂಲಕ ಗೌರವ ಸಲ್ಲಿಸಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಉಭಯ ನಾಯಕರು ಪ್ರಧಾನಿ ಮೋದಿಯವರ ಸುಧಾರಣಾವಾದಿ ಆಡಳಿತವು ಭಾರತದ ಭವಿಷ್ಯವನ್ನು ಹೇಗೆ ಬದಲಾಯಿಸುತ್ತಿದೆ ಎಂಬುದನ್ನು ಸವಿಸ್ತಾರವಾಗಿ ವಿವರಿಸಿದ್ದಾರೆ.

ಚಂದ್ರಬಾಬು ನಾಯ್ಡು ಆಶಯ: ಭಾರತದ ಜಾಗತಿಕ ಬೆಳವಣಿಗೆಗೆ ಮೋದಿ ದಿಕ್ಸೂಚಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ಟಿಡಿಪಿ (TDP) ಮುಖ್ಯಸ್ಥರಾದ ಎನ್. ಚಂದ್ರಬಾಬು ನಾಯ್ಡು ಅವರು ಪ್ರಧಾನಿ ಮೋದಿ ಅವರ ಆಡಳಿತ ಶೈಲಿ ಮತ್ತು ದೇಶದ ಮೇಲಿನ ಅದರ ಪ್ರಭಾವವನ್ನು ತಮ್ಮ ಲೇಖನದಲ್ಲಿ ಪ್ರಮುಖವಾಗಿ ಉಲ್ಲೇಖಿಸಿದ್ದಾರೆ.

ದೂರದೃಷ್ಟಿಯ ನಾಯಕತ್ವ: ಪ್ರಧಾನಿ ನರೇಂದ್ರ ಮೋದಿ ಅವರ ದೃಢ ನಿರ್ಧಾರಗಳು ಮತ್ತು ಸುಧಾರಣೆಗಳು ಭಾರತವನ್ನು ಜಾಗತಿಕ ಮಟ್ಟದಲ್ಲಿ ಆರ್ಥಿಕ ಹಾಗೂ ತಾಂತ್ರಿಕ ಶಕ್ತಿಯನ್ನಾಗಿ ರೂಪಿಸಿವೆ. ರಾಷ್ಟ್ರ ಮೊದಲು ಎಂಬ ಪ್ರಧಾನಿ ಮೋದಿಯವರ ಪ್ರಿನ್ಸಿಪಲ್ ತಮಗೆ ತುಂಬಾ ಇಷ್ಟ. ಅಷ್ಟೇ ಅಲ್ಲದೆ ಜನ್​ಧನ್ ಯೋಜನೆ, ಯುಪಿಐ, ಆಧಾರ್ ಹೀಗೆ ಹಲವು ನಿರ್ಧಾರಗಳ ಕುರಿತು ಬರೆದಿದ್ದಾರೆ.

ಮತ್ತಷ್ಟು ಓದಿ: ಆತ್ಮನಿರ್ಭರ ಭಾರತವನ್ನು ಲೇವಡಿ ಮಾಡಿದ್ದಕ್ಕೆ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ವಿಕಸಿತ ಭಾರತ 2047: ದೇಶವನ್ನು 2047 ರ ವೇಳೆಗೆ ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ (ವಿಕಸಿತ ಭಾರತ) ಅವರ ದೂರದೃಷ್ಟಿಯು ಪ್ರತಿಯೊಬ್ಬ ಭಾರತೀಯನಲ್ಲೂ ಹೊಸ ಭರವಸೆಯನ್ನು ಮೂಡಿಸಿದೆ.

ಕೇಂದ್ರ ಮತ್ತು ರಾಜ್ಯಗಳ ನಡುವಿನ ಬಾಂಧವ್ಯವನ್ನು ಬಲಪಡಿಸುವ ಮೂಲಕ, ಪ್ರಾದೇಶಿಕ ಹಿತಾಸಕ್ತಿ ಹಾಗೂ ರಾಷ್ಟ್ರೀಯ ಪ್ರಗತಿ ಎರಡನ್ನೂ ಸಮಾನವಾಗಿ ಮುನ್ನಡೆಸುತ್ತಿರುವ ಮೋದಿಯವರ ಕಾರ್ಯವೈಖರಿ ಅನನ್ಯವಾದುದು ಎಂದು ನಾಯ್ಡು ಶ್ಲಾಘಿಸಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕರತಾಡನ: ಐತಿಹಾಸಿಕ ಮತ್ತು ಅಪ್ರತಿಮ ಮೈಲಿಗಲ್ಲು ಭಾರತದ ಮಾಜಿ ಪ್ರಧಾನಿ ಮತ್ತು ಜೆಡಿಎಸ್ (JDS) ವರಿಷ್ಠರಾದ ಹೆಚ್.ಡಿ. ದೇವೇಗೌಡ ಅವರು, ಪ್ರಧಾನಿ ಮೋದಿ ಅವರು ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಮೀರಿ ಸತತವಾಗಿ ಸುದೀರ್ಘ ಅವಧಿಗೆ ದೇಶವನ್ನು ಮುನ್ನಡೆಸುತ್ತಿರುವುದರ ಐತಿಹಾಸಿಕ ಮಹತ್ವವನ್ನು ಕೊಂಡಾಡಿದ್ದಾರೆ. ನರೇಂದ್ರ ಮೋದಿಯವರು ಕೇವಲ ಅಧಿಕಾರ ರಾಜಕಾರಣದ ಕಾರಣಕ್ಕಾಗಿ ಇಷ್ಟು ಯಶಸ್ವಿಯಾಗಿಲ್ಲ, ಬದಲಿಗೆ ಅವರಲ್ಲಿರುವ ಕಲಿಯುವ ಮತ್ತು ಬದಲಾಗುವ ವಿಶಿಷ್ಟ ಗುಣ ಅವರನ್ನು ಈ ಮಟ್ಟಕ್ಕೆ ತಂದಿದೆ ಎಂದು ಬಣ್ಣಿಸಿದ್ದಾರೆ.

ನೆಹರು ಅವರ ನಂತರ ದೇಶದಲ್ಲಿ ಸತತವಾಗಿ ಅತಿ ಹೆಚ್ಚು ಅವಧಿಗೆ ಚುನಾಯಿತರಾದ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿರುವುದು ಅವರ ಮೇಲಿರುವ ಜನರ ಅಚಲವಾದ ವಿಶ್ವಾಸ ಮತ್ತು ಆಶೀರ್ವಾದಕ್ಕೆ ಸಾಕ್ಷಿಯಾಗಿದೆ. ಯಾವುದೇ ರಾಜಕೀಯ ಸವಾಲುಗಳಿದ್ದರೂ ರಾಷ್ಟ್ರದ ಭದ್ರತೆ, ಗಡಿ ರಕ್ಷಣೆ ಮತ್ತು ಕಡೇಯ ಸಾಲಿನಲ್ಲಿರುವ ಬಡವರ ಕಲ್ಯಾಣಕ್ಕೆ ಮೋದಿ ಸರ್ಕಾರ ನೀಡುತ್ತಿರುವ ಆದ್ಯತೆಯನ್ನು ಮಾಜಿ ಪ್ರಧಾನಿಗಳು ಮುಕ್ತವಾಗಿ ಶ್ಲಾಘಿಸಿದ್ದಾರೆ.

ಅವರು ಕೇವಲ ಯೋಜನೆಗಳನ್ನು ಘೋಷಿಸುವುದಿಲ್ಲ, ಬದಲಿಗೆ ತಮ್ಮ ನಿರ್ಧಾರಗಳ ಸಾಧಕ-ಬಾಧಕಗಳನ್ನು ತಾವೇ ನಿರಂತರವಾಗಿ ವಿಮರ್ಶಿಸಿಕೊಳ್ಳುತ್ತಾರೆ. ಯಾವುದೇ ಸವಾಲು ಎದುರಾದರೂ ಅದನ್ನು ಕೂಲಂಕಷವಾಗಿ ಅಧ್ಯಯನ ಮಾಡಿ, ಕಾಲಕ್ಕೆ ತಕ್ಕಂತೆ ತಮ್ಮ ಕಾರ್ಯತಂತ್ರವನ್ನು ಬದಲಾಯಿಸಿಕೊಳ್ಳುವ ಅದ್ಭುತ ಚಾಣಾಕ್ಷತನ ಅವರಲ್ಲಿದೆ.

ಸ್ಥಿರತೆಯ ಸಂಕೇತ: ಜಾಗತಿಕವಾಗಿ ಕಠಿಣ ಪರಿಸ್ಥಿತಿಗಳು ಎದುರಾಗಿದ್ದಾಗಲೂ ಭಾರತಕ್ಕೆ ಸ್ಥಿರವಾದ, ಬಲಿಷ್ಠವಾದ ಆಡಳಿತವನ್ನು ನೀಡುವ ಮೂಲಕ ಜಗತ್ತಿನಾದ್ಯಂತ ಭಾರತದ ಘನತೆಯನ್ನು ಮೋದಿ ಹೆಚ್ಚಿಸಿದ್ದಾರೆ ಎಂದು ದೇವೇಗೌಡ ಅವರು ತಮ್ಮ ಲೇಖನದಲ್ಲಿ ಬರೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಈ ಅಪ್ರತಿಮ ಸಾಧನೆಯು ಭಾರತೀಯ ಪ್ರಜಾಪ್ರಭುತ್ವದ ಶಕ್ತಿ ಹಾಗೂ ನವ ಭಾರತದ ವಿಕಾಸಕ್ಕೆ ಸಾಕ್ಷಿಯಾಗಿದೆ ಎಂದು ಜಾಗತಿಕ ರಂಗದಲ್ಲಿ ವಿಶ್ಲೇಷಿಸಲಾಗುತ್ತಿದೆ. ಮನ್​ ಕಿ ಬಾತ್ ಕಾರ್ಯಕ್ರಮವನ್ನು ಎಂದೂ ಕೂಡ ತಾವು ಮಿಸ್ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:47 am, Tue, 9 June 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More