AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat: ಬೆಂಗಳೂರಿನ ನಿಂಗಮ್ಮನ ಸ್ವಾವಲಂಬನೆ, ಚಿಕ್ಕಮಗಳೂರಿನ ಅವಕಾಡೊ, ಭಾರತರಾಜ್ಯ ಪೋರ್ಟಲ್‌ಗೆ ಪ್ರಧಾನಿ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಭಾರತದ ಪ್ರಗತಿಯ ವಿವಿಧ ಮುಖಗಳನ್ನು ಅನಾವರಣಗೊಳಿಸಿದರು. ಪಿಎಂ ಸ್ವನಿಧಿ ಯೋಜನೆಯಡಿ ಬೆಂಗಳೂರಿನ ನಿಂಗಮ್ಮ ಅವರ ಸಬಲೀಕರಣ, ಚಿಕ್ಕಮಗಳೂರಿನಲ್ಲಿ ಅವಕಾಡೊ ಕೃಷಿಯ ಯಶಸ್ಸು, ಹಾಗೂ ಐತಿಹಾಸಿಕ ಮಾಹಿತಿಯ 'ಭಾರತರಾಜ್ಯ' ಪೋರ್ಟಲ್‌ಗೆ ಪ್ರಶಂಸೆ ವ್ಯಕ್ತಪಡಿಸಿದರು. ಮಾದಕ ದ್ರವ್ಯ ಮುಕ್ತ ಸಮಾಜ, ಯುವಕರ ಬಾಹ್ಯಾಕಾಶ ಸಾಧನೆ ಮತ್ತು 'ಹರ್ ಘರ್ ತಿರಂಗಾ' ಅಭಿಯಾನದ ಯಶಸ್ಸುಗಳನ್ನು ಸಹ ಎತ್ತಿ ತೋರಿಸಿದರು.

Mann Ki Baat: ಬೆಂಗಳೂರಿನ ನಿಂಗಮ್ಮನ ಸ್ವಾವಲಂಬನೆ, ಚಿಕ್ಕಮಗಳೂರಿನ ಅವಕಾಡೊ, ಭಾರತರಾಜ್ಯ ಪೋರ್ಟಲ್‌ಗೆ  ಪ್ರಧಾನಿ ಮೆಚ್ಚುಗೆ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Aug 30, 2026 | 12:21 PM

Share

ನವದೆಹಲಿ, ಆಗಸ್ಟ್​ 30: ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನ 137ನೇ ಸಂಚಿಕೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿ, ಭಾರತೀಯರ ನವೀನ ಆಲೋಚನೆಗಳು, ಇತಿಹಾಸದ ಡಿಜಿಟಲೀಕರಣ, ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣ, ಮಹಿಳಾ ಸಬಲೀಕರಣ ಹಾಗೂ ನವೋದ್ಯಮ ಕೃಷಿಯ ಯಶೋಗಾಥೆಗಳನ್ನು ಹಂಚಿಕೊಂಡರು.

ಮುಂಬೈ ಮೂಲದ ಕೃಷ್ಣ ಶೇಷಾದ್ರಿ ಅವರು ಆರಂಭಿಸಿರುವ www.bharatrajya.comವೆಬ್‌ಸೈಟ್ ಅನ್ನು ಪ್ರಧಾನಿ ಶ್ಲಾಘಿಸಿದರು. ಈ ಪೋರ್ಟಲ್‌ನಲ್ಲಿ ಯಾವುದೇ ವರ್ಷವನ್ನು ಆಯ್ಕೆ ಮಾಡಿದರೆ, ಆ ಕಾಲಘಟ್ಟದಲ್ಲಿ ಭಾರತದ ಯಾವ ಪ್ರದೇಶವನ್ನು ಯಾವ ರಾಜವಂಶ ಆಳುತ್ತಿತ್ತು (ಚೋಳ, ಪಲ್ಲವ, ತ್ರಿಭುವನ ಮಹಾದೇವಿ, ಹೇಮು ಮುಂತಾದವರ ಇತಿಹಾಸ) ಎಂಬ ವಿವರ ಸುಲಭವಾಗಿ ಸಿಗುತ್ತದೆ.

ವಿಕಸಿತ ಭಾರತಕ್ಕಾಗಿ ಮಾದಕ ದ್ರವ್ಯ ಮುಕ್ತ ಯುವಜನತೆ ಅಭಿಯಾನ

ದೇಶದ ಯುವಜನತೆಯನ್ನು ಮಾದಕ ವ್ಯಸನದಿಂದ ರಕ್ಷಿಸಲು ಕಲಾಕಾರರು, ಸಂಗೀತಗಾರರು, ವಿದ್ಯಾರ್ಥಿಗಳು ಮತ್ತು ಕಂಟೆಂಟ್ ಕ್ರಿಯೇಟರ್‌ಗಳು ಪ್ರಭಾವಿ ಹಾಡುಗಳು, ಬೀದಿ ನಾಟಕಗಳು ಹಾಗೂ ಆಕರ್ಷಕ ಘೋಷಣೆಗಳನ್ನು (Slogans) ರೂಪಿಸುವಂತೆ ಪ್ರಧಾನಿ ಮೋದಿ ಕರೆ ನೀಡಿದರು.

ಮತ್ತಷ್ಟು ಓದಿ: Mann Ki Baat: ಕರ್ನಾಟಕದ ಹುಲಿ ವೇಷ ಕುಣಿತ ಹಾಡಿ ಹೊಗಳಿದ ಪ್ರಧಾನಿ ಮೋದಿ

ಬೆಂಗಳೂರಿನ ನಿಂಗಮ್ಮ , ‘ಪಿಎಂ ಸ್ವನಿಧಿ’ ಮಹಿಳಾ ಸಬಲೀಕರಣ

ಬೀದಿಬದಿ ವ್ಯಾಪಾರಿಗಳಿಗೆ ಆರ್ಥಿಕ ಬಲ ನೀಡುವ ‘ಪಿಎಂ ಸ್ವನಿಧಿ’ ಯೋಜನೆಯಡಿ ಸಾಲ ಪಡೆದು ಸ್ವಾವಲಂಬಿ ಬದುಕು ಕಟ್ಟಿಕೊಂಡ ಬೆಂಗಳೂರಿನ ನಿಂಗಮ್ಮ ಅವರ ಸಾಧನೆಯನ್ನು ಪ್ರಧಾನಿ ಉಲ್ಲೇಖಿಸಿದರು. ಜತೆಗೆ ತಾನು ದುಡಿದಿರುವ ಹಣದಲ್ಲಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕೂ ನೆರವಾಗಿದ್ದಾರೆ. ಈ ಯೋಜನೆಯ ಒಟ್ಟು ಫಲಾನುಭವಿಗಳಲ್ಲಿ ಸುಮಾರು ಶೇಕಡಾ 46 ರಷ್ಟು ಮಹಿಳೆಯರಿದ್ದು, ಮಹಿಳಾ ಸಬಲೀಕರಣಕ್ಕೆ ಇದು ದೊಡ್ಡ ಸಾಕ್ಷಿ ಎಂದರು.

ಕರ್ನಾಟಕದ ಅವಕಾಡೊ ಕೃಷಿ

ಚಿಕ್ಕಮಗಳೂರಿನ ಅವಕಾಡೊ ಟ್ರೆಂಡ್: ಕಾಫಿ ಮತ್ತು ಕಾಳುಮೆಣಸಿನ ತೋಟಗಳ ನಡುವೆ ಪರ್ಯಾಯ ಬೆಳೆಯಾಗಿ ಅವಕಾಡೊ (ಬೆಣ್ಣೆಹಣ್ಣು) ಬೆಳೆದು ಉತ್ತಮ ಆದಾಯ ಗಳಿಸುತ್ತಿರುವ ಚಿಕ್ಕಮಗಳೂರಿನ ರೈತರ ಯಶಸ್ಸನ್ನು ಶ್ಲಾಘಿಸಿದರು.

ಜಾಗತಿಕ ‘ಸೂರ್ಯಪಥ ತಿರಂಗಾ’: ಈ ಬಾರಿಯ ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಬರೋಬ್ಬರಿ ೮ ಕೋಟಿ ಸೆಲ್ಫಿಗಳು ಅಪ್‌ಲೋಡ್ ಆಗಿದ್ದು, ಫಿಜಿಯ ಸುವಾದಿಂದ ಹಿಡಿದು ಅಮೆರಿಕ, ಯುರೋಪ್‌ನಾದ್ಯಂತ ತ್ರಿವರ್ಣ ಧ್ವಜ ರಾರಾಜಿಸಿದೆ.

ವಿದ್ಯಾರ್ಥಿಗಳಿಂದ ಬಾಹ್ಯಾಕಾಶ ಸಾಧನೆ: ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದ ೧೦೦ ವಿದ್ಯಾರ್ಥಿನಿಯರು ‘ಮಿಷನ್ ಶಕ್ತಿ ಸ್ಯಾಟ್’ ಅಡಿಯಲ್ಲಿ ಉಪಗ್ರಹವನ್ನು ಚಂದ್ರನ ಕಕ್ಷೆಗೆ ಕಳುಹಿಸಲು ಸಜ್ಜಾಗುತ್ತಿರುವುದನ್ನು ಪ್ರಧಾನಿ ಹೆಮ್ಮೆಯಿಂದ ಪ್ರಸ್ತಾಪಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:48 am, Sun, 30 August 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ