AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Condolences on Heeraben Modi: ಹೀರಾಬೆನ್ ಮೋದಿ ನಿಧನಕ್ಕೆ ಅಮಿತ್​ ಶಾ, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರ ಸಂತಾಪ

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಮೋದಿ(Heeraben Modi) ನಿಧನಕ್ಕೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Condolences on Heeraben Modi: ಹೀರಾಬೆನ್ ಮೋದಿ ನಿಧನಕ್ಕೆ ಅಮಿತ್​ ಶಾ, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರ ಸಂತಾಪ
Heeraben Modi
TV9 Web
| Updated By: ನಯನಾ ರಾಜೀವ್|

Updated on:Dec 30, 2022 | 8:12 AM

Share

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಮೋದಿ(Heeraben Modi) ನಿಧನಕ್ಕೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಪೂಜ್ಯ ತಾಯಿ ಹೀರಾಬೆನ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ನೀಡಿದ ಮಹಾತಾಯಿಗೆ ಸದ್ಗತಿ ಕೋರುತ್ತೇನೆ. ಪ್ರಧಾನಿಯವರಿಗೆ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಕುಟುಂಬ ಪೋಷಣೆಗಾಗಿ ಹೀರಾಬೆನ್ ಅವರು ನಡೆಸಿದ ಹೋರಾಟ ಎಲ್ಲರಿಗೂ ಮಾದರಿಯಾಗಿದೆ. ಅವರ ತ್ಯಾಗದ ತಪಸ್ವಿ ಜೀವನ ಸದಾ ನಮ್ಮ ನೆನಪಿನಲ್ಲಿ ಉಳಿಯುತ್ತದೆ. ಈ ದುಃಖದ ಸಮಯದಲ್ಲಿ ಇಡೀ ರಾಷ್ಟ್ರವು ಪ್ರಧಾನಿ ಮೋದಿ ಮತ್ತು ಅವರ ಕುಟುಂಬದೊಂದಿಗೆ ನಿಂತಿದೆ. ಕೋಟಿ ಕೋಟಿ ಜನರ ಪ್ರಾರ್ಥನೆ ನಿಮ್ಮೊಂದಿಗಿದೆ. ಓಂ ಶಾಂತಿ ಎಂದು ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟರು.

ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯ ತಿಳಿಸಿ, ಆಶೀರ್ವಾದ ಪಡೆದಿದ್ದರು. ತಾಯಿಯ ಪಾದ ತೊಳೆದು ಪೂಜಿಸಿದ್ದರು.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸಂತಾಪ ನರೇಂದ್ರ ಮೋದಿಯವರ ತಾಯಿಯ ನಿಧನದ ಸುದ್ದಿ ಅತ್ಯಂತ ದುಃಖ ತರಿಸಿದೆ, ತಾಯಿಯ ಮರಣವು ಜೀವನದಲ್ಲಿ ಎಂದೂ ಮರೆಯಲಾಗದ ನೋವನ್ನು ಉಂಟು ಮಾಡುತ್ತದೆ. ಈ ಸಮಯದಲ್ಲಿ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ದೇವರು ಕರುಣಿಸಲಿ ಎಂದು ಟ್ವೀಟ್ ಮಾಡಿದ್ದಾರೆ.

ಹೀರಾಬೆನ್ ನಿಧನಕ್ಕೆ ಮಾಜಿ ಪ್ರಧಾನಿ ಎಚ್​. ಡಿ.ದೇವೇಗೌಡ ಸಂತಾಪ ಹೀರಾಬೆನ್​ ಪೂರ್ಣ ಜೀವನವನ್ನು ನಡೆಸಿದ ಶತಾಯುಷಿಯಾಗಿದ್ದರು, ಹೀರಾಬೆನ್ ನಿಧನದ ಸುದ್ದಿ ತಿಳಿದು ತುಂಬಾ ನೋವಾಗಿದೆ ಕುಟುಂಬಸ್ಥರಿಗೆ ದುಃಖಭರಿಸುವ ಶಕ್ತಿ ದೇವರು ನೀಡಲಿ, ಹೀರಾಬೆನ್ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್​​.ಡಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾತ್ ಸಂತಾಪ ಮಗನಿಗೆ ತಾಯಿಯೇ ಇಡೀ ಜಗತ್ತು. ತಾಯಿಯ ಸಾವು ಮಗನಿಗೆ ಭರಿಸಲಾಗದ ಮತ್ತು ತುಂಬಲಾರದ ನಷ್ಟವಾಗಿದೆ. ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿಯ ನಿಧನವು ತುಂಬಾ ದುಃಖಕರವಾಗಿದೆ. ತಾಯಿಗೆ ಶ್ರೀರಾಮ ಅವರ ಪುಣ್ಯ ಪಾದದಲ್ಲಿ ಸ್ಥಾನ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.

ಹೀರಾಬೆನ್ ನಿಧನಕ್ಕೆ ನಿತಿನ್ ಗಡ್ಕರಿ ಸಂತಾಪ ಅತ್ಯಂತ ಸರಳ ಮತ್ತು ಪ್ರೀತಿಯ ನಗು ಮುಖ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ. ದೇವರು ಅಗಲಿದ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಈ ದುಃಖದ ಸಮಯದಲ್ಲಿ ನರೇಂದ್ರ ಮೋದಿ ಮತ್ತು ಕುಟುಂಬಕ್ಕೆ ಶಕ್ತಿ ನೀಡಲಿ. ಓಂ ಶಾಂತಿ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್ ಅವರ ನಿಧನದಿಂದ ತೀವ್ರ ನೋವಾಗಿದೆ. ತಾಯಿಯ ಸಾವು ಒಬ್ಬರ ಜೀವನದಲ್ಲಿ ತುಂಬಲು ಅಸಾಧ್ಯವಾದ ಶೂನ್ಯ ಭಾವನೆಯನ್ನು ಉಂಟುಮಾಡುತ್ತದೆ. ಈ ದುಃಖದ ಸಮಯದಲ್ಲಿ ನಾನು ಪ್ರಧಾನಿ ಮತ್ತು ಅವರ ಇಡೀ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:32 am, Fri, 30 December 22

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!