AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ, ವಿಶ್ವಾಸದ ಪವಿತ್ರ ಬಾಂಧವ್ಯ ಸದಾ ಅಚಲವಾಗಿರಲಿ: ಪ್ರಧಾನಿ ಮೋದಿಯವರ ರಕ್ಷಾಬಂಧನ ಸಂದೇಶ

ಪ್ರಧಾನಿ ಮೋದಿ ಅವರು ರಕ್ಷಾಬಂಧನ ಹಬ್ಬದ ಶುಭಾಶಯ ಕೋರಿದ್ದು, ಸೋದರ-ಸೋದರಿಯರ ನಡುವಿನ ಪವಿತ್ರ ಪ್ರೀತಿ, ವಿಶ್ವಾಸದ ಬಾಂಧವ್ಯ ಸದಾ ಅಚಲವಾಗಿರಲಿ ಎಂದು ಹಾರೈಸಿದ್ದಾರೆ. ಇದೇ ವೇಳೆ, ‘ವಿಶ್ವ ಸಂಸ್ಕೃತ ದಿನ’ದ ಮಹತ್ವವನ್ನು ಸ್ಮರಿಸಿ, ಸಂಸ್ಕೃತವು ಭಾರತೀಯ ಪರಂಪರೆಯ ಜ್ಞಾನನಿಧಿ ಎಂದು ಬಣ್ಣಿಸಿದ್ದಾರೆ. ದೇಶದ ಗಡಿ ಕಾಯುವ ಯೋಧರಿಗೆ ರಾಖಿ ಕಳುಹಿಸುವ ಮೂಲಕ ನಾರಿ ಶಕ್ತಿಯನ್ನು ಸಬಲೀಕರಣಗೊಳಿಸುವ ರಾಷ್ಟ್ರೀಯ ಸಂಕಲ್ಪವನ್ನೂ ತಿಳಿಸಿದ್ದಾರೆ.

ಪ್ರೀತಿ, ವಿಶ್ವಾಸದ ಪವಿತ್ರ ಬಾಂಧವ್ಯ ಸದಾ ಅಚಲವಾಗಿರಲಿ: ಪ್ರಧಾನಿ ಮೋದಿಯವರ ರಕ್ಷಾಬಂಧನ ಸಂದೇಶ
ರಕ್ಷಾ ಬಂಧನ
ನಯನಾ ರಾಜೀವ್
|

Updated on: Aug 28, 2026 | 9:21 AM

Share

ನವದೆಹಲಿ, ಆಗಸ್ಟ್​ 28: ಸಹೋದರ-ಸಹೋದರಿಯರ ಪವಿತ್ರ ಪ್ರೀತಿ ಮತ್ತು ಬಾಂಧವ್ಯದ ಸಂಕೇತವಾದ ರಕ್ಷಾಬಂಧನ ಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಸಮಸ್ತ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್​​ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಈ ಪವಿತ್ರ ಹಬ್ಬವು ಪ್ರತಿಯೊಬ್ಬರ ಜೀವನದಲ್ಲೂ ಸಂತೋಷ ಮತ್ತು ಯಶಸ್ಸನ್ನು ತರಲಿ ಎಂದು ಹಾರೈಸಿದ್ದಾರೆ.

ಸುಖ-ಸಮೃದ್ಧಿಯ ಹಾರೈಕೆ: “ರಕ್ಷಾಬಂಧನದ ಈ ಪವಿತ್ರ ಸಂದರ್ಭದಲ್ಲಿ ಎಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳು. ಈ ಪಾವನ ಹಬ್ಬವು ನಿಮ್ಮೆಲ್ಲರ ಜೀವನದಲ್ಲಿ ಸುಖ, ಸಮೃದ್ಧಿ ಮತ್ತು ಯಶಸ್ಸನ್ನು ಹೊತ್ತು ತರಲಿ” ಎಂದು ಪ್ರಧಾನಿ ತಿಳಿಸಿದ್ದಾರೆ. ಸಹೋದರ-ಸಹೋದರಿಯರ ನಡುವಿನ ವಾತ್ಸಲ್ಯ, ಪರಸ್ಪರ ನಂಬಿಕೆ ಹಾಗೂ ಪ್ರೀತಿಯ ಪವಿತ್ರ ಬಾಂಧವ್ಯವು ಸದಾ ಅಚಲವಾಗಿ, ಎಂದಿಗೂ ಮುರಿಯದಂತೆ ಶಾಶ್ವತವಾಗಿ ಉಳಿಯಲಿ ಎಂದು ಅವರು ಆಶಿಸಿದ್ದಾರೆ.

ಪ್ರತಿ ವರ್ಷದಂತೆ ಈ ಬಾರಿಯೂ ಪ್ರಧಾನಿಯವರ ಅಧಿಕೃತ ನಿವಾಸದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರು ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಖಿ ಕಟ್ಟಿ ಸಂಭ್ರಮಿಸಿದರು.

ಮತ್ತಷ್ಟು ಓದಿ: Nepal Flood: ‘ಭಾರತ ನಿಮ್ಮೊಂದಿಗಿದೆ’; ಪ್ರವಾಹಕ್ಕೆ ತತ್ತರಿಸಿರುವ ನೇಪಾಳದ ಪ್ರಧಾನಿ ಬಾಲೆನ್ ಶಾಗೆ ಪಿಎಂ ಮೋದಿ ಭರವಸೆ

ಗಡಿ ಕಾಯುವ ಯೋಧರಿಗೆ ರಾಖಿ: ದೇಶದ ಗಡಿ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭಾರತೀಯ ಸೇನೆ ಮತ್ತು ಭದ್ರತಾ ಪಡೆಗಳ ಯೋಧರಿಗೆ ದೇಶಾದ್ಯಂತ ಮಹಿಳೆಯರು ಮತ್ತು ಮಕ್ಕಳು ಪ್ರೀತಿಯಿಂದ ರಾಖಿ ಕಳುಹಿಸಿ ರಕ್ಷಾಬಂಧನವನ್ನು ಆಚರಿಸಿದ್ದಾರೆ. ರಕ್ಷಾಬಂಧನ ಕೇವಲ ರಾಖಿ ಕಟ್ಟುವ ಹಬ್ಬವಲ್ಲದೆ, ಮಹಿಳೆಯರ ಗೌರವ, ರಕ್ಷಣೆ ಮತ್ತು ನಾರಿ ಶಕ್ತಿಯನ್ನು ಸಬಲೀಕರಣಗೊಳಿಸುವ ರಾಷ್ಟ್ರೀಯ ಸಂಕಲ್ಪದ ದಿನವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ಶುಭ ಕೋರಿದ್ದಾರೆ.

ಪ್ರಧಾನಿ ಮೋದಿ ಪೋಸ್ಟ್​

ಅಷ್ಟೇ ಅಲ್ಲದೆ,‘ವಿಶ್ವ ಸಂಸ್ಕೃತ ದಿನ’ದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶ-ವಿದೇಶಗಳ ಸಮಸ್ತ ಸಂಸ್ಕೃತ ಪ್ರೇಮಿಗಳು ಹಾಗೂ ನಾಗರಿಕರಿಗೆ ಸಂಸ್ಕೃತ ಭಾಷೆಯಲ್ಲೇ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ಸಂಸ್ಕೃತ ಶ್ಲೋಕ ಮತ್ತು ಸಂದೇಶವನ್ನು ಹಂಚಿಕೊಂಡಿರುವ ಅವರು, ಸಂಸ್ಕೃತ ಭಾಷೆಯು ಭಾರತೀಯ ಪರಂಪರೆಯ ಜ್ಞಾನನಿಧಿ ಎಂದು ಬಣ್ಣಿಸಿದ್ದಾರೆ.

ಪ್ರಾಚೀನ ಭಾರತದಲ್ಲಿ ಗುರುಕುಲಗಳಲ್ಲಿ ಹೊಸ ಶಿಕ್ಷಣ ವರ್ಷವು ಶ್ರಾವಣ ಪೂರ್ಣಿಮೆಯಂದು ‘ಉಪಾಕರ್ಮ’ (ಶ್ರಾವಣಿ ಪರ್ವ) ವಿಧಿಯೊಂದಿಗೆ ಆರಂಭವಾಗುತ್ತಿತ್ತು. ಆದ್ದರಿಂದ ಭಾರತ ಸರ್ಕಾರವು 1969 ರಲ್ಲಿ ಶ್ರಾವಣ ಪೂರ್ಣಿಮೆಯನ್ನು ‘ವಿಶ್ವ ಸಂಸ್ಕೃತ ದಿನ’ವನ್ನಾಗಿ ಆಚರಿಸಲು ನಿರ್ಧರಿಸಿತು. ಕೇಂದ್ರ ಸರ್ಕಾರವು ಸಂಸ್ಕೃತವನ್ನು ಜನಪ್ರಿಯಗೊಳಿಸಲು ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯಗಳ ಸ್ಥಾಪನೆ, ಹಸ್ತಪ್ರತಿಗಳ ಡಿಜಿಟಲೀಕರಣಕ್ಕಾಗಿ ‘ಜ್ಞಾನ ಭಾರತಂ ಮಿಷನ್’ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.

ಯುಧಿಷ್ಠಿರನಿಗೆ ತಿಳಿಸಲಾದ ಈ ರಕ್ಷಾ ಸೂತ್ರವು ವಿಜಯವನ್ನು ಕರುಣಿಸುತ್ತದೆ, ಸುಖವನ್ನು ತರುತ್ತದೆ ಮತ್ತು ಮಕ್ಕಳು, ಆರೋಗ್ಯ ಹಾಗೂ ಸಂಪತ್ತನ್ನು ದಯಪಾಲಿಸುತ್ತದೆ ಎಂಬ ಮಹಾಭಾರತದ ಪವಿತ್ರ ಶ್ಲೋಕವನ್ನು ಪ್ರಧಾನಿ ಹಂಚಿಕೊಂಡಿದ್ದಾರೆ.

ಪ್ರಧಾನಿ ಮೋದಿ ಪೋಸ್ಟ್​

ಭಾರತ ಮತ್ತು ಪ್ರಪಂಚದಾದ್ಯಂತ ಸಂಸ್ಕೃತವನ್ನು ಕಲಿಯುತ್ತಿರುವ, ಕಲಿಸುತ್ತಿರುವ ಹಾಗೂ ಈ ಕಾಲಾತೀತ ಭಾಷಾ ನಿಧಿಯನ್ನು ಮುಂದಿನ ಪೀಳಿಗೆಗೆ ತಲುಪಿಸಲು ಶ್ರಮಿಸುತ್ತಿರುವ ಪ್ರತಿಯೊಬ್ಬರ ಪ್ರಯತ್ನವನ್ನು ಪ್ರಧಾನಿ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!