PM Modi’s Security Breach ಪ್ರಯಾಣದ ದಾಖಲೆಗಳನ್ನು ಸಂರಕ್ಷಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ

ಭದ್ರತಾ ಲೋಪವು "ಅಪರೂಪದಲ್ಲಿ ಅಪರೂಪದ" ಪ್ರಕರಣವಾಗಿದ್ದು ಅದು ಸಂಭಾವ್ಯ ಅಂತರಾಷ್ಟ್ರೀಯ ಮುಜುಗರವನ್ನು ಉಂಟುಮಾಡಬಹುದು ಎಂದು ಕೇಂದ್ರವು ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

PM Modi's Security Breach ಪ್ರಯಾಣದ ದಾಖಲೆಗಳನ್ನು ಸಂರಕ್ಷಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ
ಮೋದಿ ವಾಹನ ಪ್ಲೈಓವರ್ ನಲ್ಲಿ ಸಿಲುಕಿಕೊಂಡಿರುವುದು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jan 07, 2022 | 12:42 PM

ದೆಹಲಿ: ಬಟಿಂಡಾದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭದ್ರತಾ ಲೋಪದ (security breach) ಕುರಿತು ತನಿಖಾ ಸಮಿತಿಯನ್ನು ರಚಿಸಲಾಗಿದೆ. ತನಿಖಾ ಸಮಿತಿಯು 3 ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಪಂಜಾಬ್ ಸರ್ಕಾರ ಇಂದು ಕೇಂದ್ರಕ್ಕೆ ತಿಳಿಸಿದೆ.  ನಿನ್ನೆ ಪಂಜಾಬ್ ಮುಖ್ಯಮಂತ್ರಿ ಚರಣ್​​ಜಿತ್  ಚನ್ನಿ (Charanjit Channi) ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಕರೆ ಮಾಡಿ ಪಕ್ಷದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಹೇಳಿದ್ದರು. ಪ್ರತಿಭಟನಾ ನಿರತ ರೈತರು ಮತ್ತು ರಾಜ್ಯ ಪೊಲೀಸರೊಂದಿಗೆ ಭದ್ರತಾ ಲೋಪಕ್ಕೆ ಕಾಂಗ್ರೆಸ್‌ ಕಾರಣ ಎಂದು ಬಿಜೆಪಿ ಆರೋಪಿಸಿದೆ. ಬುಧವಾರ ಫಿರೋಜ್‌ಪುರದಲ್ಲಿ ರಾಜಕೀಯ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಹೊರಟಿದ್ದ ಪ್ರಧಾನಿ ಮೋದಿ ಅವರು ಪಂಜಾಬ್‌ನ ಬಟಿಂಡಾದಲ್ಲಿ ಸುಮಾರು 20 ನಿಮಿಷಗಳ ಕಾಲ ಫ್ಲೈಓವರ್‌ನಲ್ಲಿ ಸಿಲುಕಿಕೊಂಡರು. ಭದ್ರತಾ ಲೋಪವು ಬಿಜೆಪಿ ಮತ್ತು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ನಡುವೆ ದೊಡ್ಡ ರಾಜಕೀಯ ಘರ್ಷಣೆಯನ್ನು ಉಂಟುಮಾಡಿದೆ ಮತ್ತು ವಿಷಯವು ಸುಪ್ರೀಂಕೋರ್ಟ್‌ಗೆ ತಲುಪಿದೆ.

ಸುಪ್ರೀಂಕೋರ್ಟ್ ವಿಚಾರಣೆಯ ಮುಖ್ಯಾಂಶಗಳು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಪ್ರಯಾಣದ ದಾಖಲೆಗಳನ್ನು ಸುರಕ್ಷಿತವಾಗಿ ಮತ್ತು ಸಂರಕ್ಷಿಸಿಡಲು ಸುಪ್ರೀಂಕೋರ್ಟ್ ನಿರ್ದೇಶಿಸಿದೆ.

ಪ್ರಧಾನಿ ನಮ್ಮ ಪ್ರಧಾನಿಯೂ ಹೌದು ಎಂದು ನಮ್ಮ ಮುಖ್ಯಮಂತ್ರಿ ಹೇಳಿದ್ದಾರೆ. ಭದ್ರತಾ ಲೋಪದ ಬಗ್ಗೆಯೂ ತನಿಖೆ ನಡೆಸಬೇಕೆಂದು ನಾವು ಬಯಸುತ್ತೇವೆ. ನ್ಯಾಯಾಲಯಕ್ಕೆ ಯಾವುದು ಸೂಕ್ತವೋ ಅದನ್ನು ಮಾಡಬಹುದು.ನಾವು ಈ ಪ್ರಕರಣವನ್ನು ಲಘುವಾಗಿ ಪರಿಗಣಿಸುತ್ತಿಲ್ಲ. ನಾವು ಸಮಿತಿಯನ್ನು ರಚಿಸಿದ್ದೇವೆ. ಕೇಂದ್ರವೂ ಸಹ ಸಮಿತಿಯನ್ನು ರಚಿಸಿದೆ. ನಾವು ಮುಕ್ತವಾಗಿದ್ದೇವೆ. ಈ ವಿಷಯದ ತನಿಖೆಗೆ ಯಾವುದೇ ವ್ಯಕ್ತಿಯನ್ನು ನೇಮಿಸಬಹುದು ಎಂದು ಪಂಜಾಬ್ ಸರ್ಕಾರ ಸುಪ್ರೀಂಕೋರ್ಟ್​​ನಲ್ಲಿ ಹೇಳಿದೆ.

“ಪಂಜಾಬ್‌ನ ಗೃಹ ಸಚಿವರೂ ಈ ವಿಷಯದಲ್ಲಿ ಪರಿಶೀಲನೆಯಲ್ಲಿದ್ದಾರೆ. ಆದ್ದರಿಂದ ಅವರು ತನಿಖಾ ಸಮಿತಿಯ ಭಾಗವಾಗಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ಹೇಳಿದೆ. ಭದ್ರತಾ ಲೋಪವು “ಅಪರೂಪದಲ್ಲಿ ಅಪರೂಪದ” ಪ್ರಕರಣವಾಗಿದ್ದು ಅದು ಸಂಭಾವ್ಯ ಅಂತರಾಷ್ಟ್ರೀಯ ಮುಜುಗರವನ್ನು ಉಂಟುಮಾಡಬಹುದು ಎಂದು ಕೇಂದ್ರವು ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಅದೇ ವೇಳೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆಗೆ ಕರೆ ನೀಡುವ ಮನವಿಯನ್ನು ಬೆಂಬಲಿಸಿದೆ.

ಈ ಘಟನೆಯು ಪ್ರಧಾನಿಯವರ ಭದ್ರತೆಗೆ ಅತ್ಯಂತ ಗಂಭೀರವಾದ ಪರಿಸ್ಥಿತಿಯನ್ನು ಸೃಷ್ಟಿಸಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದಾರೆ. ಭದ್ರತಾ ಲೋಪಕ್ಕೆ ಪಂಜಾಬ್ ಸರ್ಕಾರ ಮತ್ತು ಪೋಲೀಸ್ ಎರಡೂ ಕಾರಣ. ಗಡಿಯಾಚೆಗಿನ ಭಯೋತ್ಪಾದನೆಯ ಸಾಧ್ಯತೆಯೂ ಇದೆ. ಇದು ತಪ್ಪಿಸಬೇಕಾದ ಸಂಗತಿಯಾಗಿದೆ, ಇದು ಸಂಭಾವ್ಯ ಅಂತರರಾಷ್ಟ್ರೀಯ ಮುಜುಗರದ ಪ್ರಕರಣವಾಗಿದೆ ಎಂದು ಮೆಹ್ತಾ ಹೇಳಿದರು.

ಇದು ಮತ್ತೆ ಸಂಭವಿಸದಂತೆ ಖಾತ್ರಿಪಡಿಸಿಕೊಳ್ಳಬೇಕು. ಭದ್ರತಾ ಲೋಪವು ದೊಡ್ಡ ಲೋಪಕ್ಕೆ ಉದಾಹರಣೆಯಾಗಿದೆ ಮತ್ತು ಇದು ಚುನಾವಣೆಗೆ ಒಳಪಡುವ ರಾಜ್ಯದಲ್ಲಿ ಸಂಭವಿಸಿದೆ ಎಂಬುದೂ ಗಮನಾರ್ಹವಾಗಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿದಾರರು ಹೇಳಿದ್ದಾರೆ. ವಿಷಯವನ್ನು ಕೂಲಂಕಷವಾಗಿ ತನಿಖೆ ಮಾಡಬೇಕು. ಪಂಜಾಬ್ ಸರ್ಕಾರವು ಅದೇ ರೀತಿ ಮಾಡಲು ಸಾಧ್ಯವಾಗದಿರಬಹುದು. ಇದು ರಾಷ್ಟ್ರೀಯ ಭದ್ರತೆಯ ವಿಷಯವಾಗಿದೆ ಮತ್ತು ಕೆಲವು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ವಿಷಯವಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಪೊಲೀಸ್ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ತನಿಖೆ ನಡೆಸಿ ಮೂರು ದಿನಗಳಲ್ಲಿ ವರದಿ ಸಲ್ಲಿಸಲು ರಾಜ್ಯ ಸರ್ಕಾರ ಸಮಿತಿಯನ್ನು ರಚಿಸಿದೆ ಎಂದು ಮುಖ್ಯ ಕಾರ್ಯದರ್ಶಿ ಗೃಹ ಕಾರ್ಯದರ್ಶಿಗೆ ತಿಳಿಸಿದ್ದಾರೆ.

ಇದನ್ನೂ ಓದಿ:  ಬುಲ್ಲಿ ಬಾಯ್ ಪ್ರಕರಣದ ಪ್ರಮುಖ ಆರೋಪಿ ನೀರಜ್ ಮನೆಯಲ್ಲಿ ಹೇಗಿರುತ್ತಿದ್ದ? ಕುಟುಂಬಸ್ಥರು ತಿಳಿಸಿದ ಶಾಕಿಂಗ್ ಮಾಹಿತಿ ಇಲ್ಲಿದೆ

Published On - 12:21 pm, Fri, 7 January 22