Modi Special Selfie: ಬಿಜೆಪಿಯ ದಿವ್ಯಾಂಗ ಕಾರ್ಯಕರ್ತರೊಬ್ಬರ ಜತೆ ಸೆಲ್ಫಿ ಕ್ಲಿಕ್ಕಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ(Narendra Modi) ಯವರ ಜತೆ ಸೆಲ್ಫಿ(Selfie) ತೆಗೆದುಕೊಳ್ಳಬೇಕು ಎಂಬುದು ಎಷ್ಟೋ ಮಂದಿಯ ಕನಸಾಗಿರುತ್ತದೆ. ಆದರೆ ಮೋದಿಯವರೇ ಬಂದು ನಿಮ್ಮ ಜತೆ ಸೆಲ್ಫಿ ಕ್ಲಿಕ್ಕಿಸಿದಾಗ ಎಷ್ಟು ಸಂತೋಷವಾಗಬಹುದಲ್ಲವೇ.

Modi Special Selfie: ಬಿಜೆಪಿಯ ದಿವ್ಯಾಂಗ ಕಾರ್ಯಕರ್ತರೊಬ್ಬರ ಜತೆ ಸೆಲ್ಫಿ ಕ್ಲಿಕ್ಕಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on: Apr 09, 2023 | 11:39 AM

ಪ್ರಧಾನಿ ನರೇಂದ್ರ ಮೋದಿ(Narendra Modi) ಯವರ ಜತೆ ಸೆಲ್ಫಿ(Selfie) ತೆಗೆದುಕೊಳ್ಳಬೇಕು ಎಂಬುದು ಎಷ್ಟೋ ಮಂದಿಯ ಕನಸಾಗಿರುತ್ತದೆ. ಆದರೆ ಮೋದಿಯವರೇ ಬಂದು ನಿಮ್ಮ ಜತೆ ಸೆಲ್ಫಿ ಕ್ಲಿಕ್ಕಿಸಿದಾಗ ಎಷ್ಟು ಸಂತೋಷವಾಗಬಹುದಲ್ಲವೇ. ಅಂತಹ ಒಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಪ್ರಧಾನಿ ಮೋದಿ ಚೆನ್ನೈಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ತಿರು ಎಸ್. ಮಣಿಕಂಠನ್ ಅವರ ಬಳಿ ಸೆಲ್ಫಿಯನ್ನು ತೆಗೆದುಕೊಂಡು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುವ ಸಲುವಾಗಿ ಪ್ರಧಾನಿ ಮೋದಿ ಶನಿವಾರ ಚೆನ್ನೈಗೆ ಭೇಟಿ ನೀಡಿದ್ದರು. ಈ ವೇಳೆ ದಿವ್ಯಾಂಗರಾಗಿಯೂ ಒಂದು ಅಂಗಡಿಯನ್ನು ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರಾದ ತಿರು.ಎಸ್.ಮಣಿಕಂದನ್ ಅವರನ್ನು ಭೇಟಿಯಾಗಿ ಅವರೊಡನೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಬಳಿಕ ಇದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಅನೇಕರು ಪ್ರೇರೇಪಿತರಾಗಲಿ ಎಂದು ಅವರಿಗೆ ಶುಭಾಶಯ ಕೋರಿದ್ದಾರೆ.

ಚೆನ್ನೈನಲ್ಲಿ ನಾನು ತಿರು ಎಸ್.ಮಣಿಕಂದನ್ ಅವರನ್ನು ಭೇಟಿಯಾದೆ. ಅವರು ಈರೋಡ್‌ನ (Erode) ಬಿಜೆಪಿ ಕಾರ್ಯಕರ್ತ ಹಾಗೂ ಬೂತ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ದಿವ್ಯಾಂಗರಾಗಿದ್ದರೂ ತನ್ನದೇ ಸ್ವಂತ ಅಂಗಡಿಯನ್ನು ನಡೆಸುತ್ತಿರುವುದು ಎಲ್ಲರಿಗೂ ಪ್ರೇರಣೆಯಾಗಿದೆ. ಅಲ್ಲದೇ ಅವರು ತಮಗೆ ಬಂದ ದೈನಂದಿನ ಲಾಭದಲ್ಲಿ ಗಣನೀಯ ಭಾಗವನ್ನು ಬಿಜೆಪಿಗೆ ನೀಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಅವರ ಫೋಟೋದೊಂದಿಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ಓದಿ: ಮೋದಿ ಸಫಾರಿ: ಗಮನ ಸೆಳೆದ ಮೋದಿ ಡ್ರೆಸ್, ಬಂಡೀಪುರ ಲೋಗೋ ಇರುವ ದಿರಿಸು ಚಿತ್ರಗಳಲ್ಲಿ ನೋಡಿ

ತಿರು ಎಸ್.ಮಣಿಕಂದನ್ ಅವರಂತಹ ಕಾರ್ಯಕರ್ತರನ್ನು ಹೊಂದಿರುವ ಬಿಜೆಪಿ ಪಕ್ಷದಲ್ಲಿ ನಾನು ಕಾರ್ಯಕರ್ತನಾಗಿರುವುದಕ್ಕೆ ನನಗೆ ತುಂಬಾ ಹೆಮ್ಮೆಯಿದೆ ಎಂದು ಮಣಿಕಂದನ್ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ನಡೆದ ಜಾಥಾದಲ್ಲಿ ಮೋದಿ ಮಾತನಾಡಿ, ತಮಿಳುನಾಡಿನ ಶ್ರೀಮಂತ ಇತಿಹಾಸವನ್ನು ಹೊಗಳಿದರು. ಇದು ಭಾಷೆ ಮತ್ತು ಸಾಹಿತ್ಯದ ನಾಡು. ದೇಶಭಕ್ತಿ ಮತ್ತು ರಾಷ್ಟ್ರೀಯ ಪ್ರಜ್ಞೆಯ ಕೇಂದ್ರವಾಗಿದೆ. ದೇಶದ ಅನೇಕ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರು ತಮಿಳುನಾಡಿನವರು ಎಂದು ಹೇಳಿದರು.

2014ರ ನಂತರ ಭಾರತದ ಮೂಲಸೌಕರ್ಯ ವಲಯದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವಲ್ಲಿ ಎನ್​ಡಿಎ ಪ್ರಯತ್ನದ ಬಗ್ಗೆ ಮಾತನಾಡಿದರು. ಇನ್ನು, ತಮಿಳುನಾಡಿನಲ್ಲಿ ಪ್ರಧಾನಿ ಮೋದಿ ಭೇಟಿಗೆ ಭಾರಿ ವಿರೋಧ ವ್ಯಕ್ತವಾಗಿದ್ದು, ಗೋಬ್ಯಾಕ್ ಮೋದಿ ಎಂಬ ಹ್ಯಾಶ್ ಟ್ಯಾಗ್ ಬಳಸಿ ನೆಟ್ಟಿಗರು ಮಾಡಿರುವ ಟ್ವೀಟ್​ಗಳು ಟ್ರೆಂಡ್ ಆಗಿದ್ದವು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್