AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯ ಸಂಕೇತಿಸುವ ಹಬ್ಬವೇ ವಿಜಯದಶಮಿ: ಪ್ರಧಾನಿ ಮೋದಿ

ವಿಜಯದಶಮಿ ಎಂದರೆ ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಸಂಕೇತಿಸುವ ಹಬ್ಬ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಎಕ್ಸ್​​ನಲ್ಲಿ ಪೋಸ್ಟ್​ ಮಾಡಿರುವ ಅವರು ವಿಜಯದಶಮಿಯ ಶುಭಾಶಯ ತಿಳಿಸಿದ್ದಾರೆ. ವಿಜಯ ದಶಮಿ ಎಂಬುದು ದುಷ್ಟತನ ಹಾಗೂ ಸುಳ್ಳಿನ ಮೇಲೆ ಒಳ್ಳೆಯದು ಹಾಗೂ ಸತ್ಯದ ವಿಜಯವನ್ನು ಸಂಕೇತಿಸುತ್ತದೆ.

ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯ ಸಂಕೇತಿಸುವ ಹಬ್ಬವೇ ವಿಜಯದಶಮಿ: ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Oct 02, 2025 | 8:21 AM

Share

ನವದೆಹಲಿ, ಅಕ್ಟೋಬರ್ 02: ವಿಜಯದಶಮಿ ಎಂದರೆ ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಸಂಕೇತಿಸುವ ಹಬ್ಬ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಎಕ್ಸ್​​ನಲ್ಲಿ ಪೋಸ್ಟ್​ ಮಾಡಿರುವ ಅವರು ವಿಜಯದಶಮಿಯ ಶುಭಾಶಯ ತಿಳಿಸಿದ್ದಾರೆ. ವಿಜಯ ದಶಮಿ ಎಂಬುದು ದುಷ್ಟತನ ಹಾಗೂ ಸುಳ್ಳಿನ ಮೇಲೆ ಒಳ್ಳೆಯದು ಹಾಗೂ ಸತ್ಯದ ವಿಜಯವನ್ನು ಸಂಕೇತಿಸುತ್ತದೆ.

ಈ ಶುಭ ಸಂದರ್ಭವು ಧೈರ್ಯ, ಬುದ್ಧಿವಂತಿಕೆ ಹಾಗೂ ಭಕ್ತಿಯ ಹಾದಿಯಲ್ಲಿ ನಡೆಯಲು ಎಲ್ಲರಿಗೂ ಸ್ಫೂರ್ತಿ ನೀಡಲಿ, ಎಲ್ಲರಿಗೂ ವಿಜಯದಶಮಿಯ ಶುಭಾಶಯಗಳು ಎಂದು ಬರೆದಿದ್ದಾರೆ. ಇಂದು ಗಾಂಧಿ ಜಯಂತಿಯನ್ನು ದೇಶಾದ್ಯಂತ ಆಚರಿಸಲಾಗುತ್ತಿದ್ದು, ಪ್ರಧಾನಿ ಮೋದಿ ಮಹಾತ್ಮ ಗಾಂಧಿಯನ್ನು ಈ ಸಂದರ್ಭದಲ್ಲಿ ಸ್ಮರಿಸಿದ್ದಾರೆ. ಧೈರ್ಯ ಹಾಗೂ ಸರಳತೆ ದೇಶದ ದೊಡ್ಡ ಬದಲಾವಣೆಗೆ ಹೇಗೆ ಸಾಧನವಾಗಬಹುದು ಎಂಬುದು ಗಾಂಧೀಜಿಯವರನ್ನು ನೋಡಿಯೇ ಕಲಿಯಬೇಕು.

ಸೇವೆ, ಕರುಣೆ, ಅಹಿಂಸೆಯೇ ಜನರನ್ನು ಸಬಲೀಕರಣಗೊಳಿಸಲು ಅಗತ್ಯ ಸಾಧನವೆಂದು ಅವರು ನಂಬಿದ್ದರು. ವಿಕಸಿತ ಭಾರತ ನಿರ್ಮಿಸಲು ಅವರ ಮಾರ್ಗವನ್ನೇ ಅನುಸರಿಸುತ್ತೇವೆ ಎಂದು ಬರೆದಿದ್ದಾರೆ. ಇಂದು ಲಾಲ್​ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಕೂಡ, ಅವರ ಬಗ್ಗೆಯೂ ಪ್ರಧಾನಿ ಮೋದಿ ಪೋಸ್ಟ್​ ಮಾಡಿದ್ದಾರೆ.

ಮತ್ತಷ್ಟು ಓದಿ: ಅಕ್ಟೋಬರ್ 1ರಂದು ಆರ್​​ಎಸ್​ಎಸ್​ ಶತಮಾನೋತ್ಸವ, ಪ್ರಧಾನಿ ನರೇಂದ್ರ ಮೋದಿ ಭಾಗಿ

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅಸಾಧಾರಣ ರಾಜಕಾರಣಿಯಾಗಿದ್ದು, ಅವರ ಸಮಗ್ರತೆ, ನಮ್ರತೆ ಮತ್ತು ದೃಢಸಂಕಲ್ಪವು ಸವಾಲಿನ ಸಮಯದಲ್ಲೂ ಭಾರತವನ್ನು ಬಲಪಡಿಸಿತು. ಅವರು ಅನುಕರಣೀಯ ನಾಯಕತ್ವ, ಶಕ್ತಿ ಮತ್ತು ನಿರ್ಣಾಯಕ ಕ್ರಿಯೆಯ ವ್ಯಕ್ತಿತ್ವವನ್ನು ಹೊಂದಿದ್ದರು. ‘ಜೈ ಜವಾನ್ ಜೈ ಕಿಸಾನ್’ ಎಂಬ ಅವರ ಸ್ಪಷ್ಟ ಕರೆ ನಮ್ಮ ಜನರಲ್ಲಿ ದೇಶಭಕ್ತಿಯ ಮನೋಭಾವವನ್ನು ಹುಟ್ಟುಹಾಕಿತು.

ಪ್ರಧಾನಿ ಮೋದಿ ಪೋಸ್ಟ್​

ಬಲಿಷ್ಠ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸುವ ಪ್ರಯತ್ನದಲ್ಲಿ ಅವರು ನಮ್ಮನ್ನು ಪ್ರೇರೇಪಿಸುತ್ತಲೇ ಇದ್ದಾರೆ ಎಂದು ಬರೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!