G20 ಸಭೆಯಲ್ಲಿ ಮೋದಿ ಭಾಷಣ: ಭ್ರಷ್ಟಾಚಾರದ ವಿರುದ್ಧ ಸಾಮೂಹಿಕ ಪ್ರಯತ್ನಕ್ಕೆ ಪ್ರಧಾನಿ ಕರೆ

ಭಾರತದಲ್ಲಿ ನೂರಾರು ಮಿಲಿಯನ್ ಜನರು ತಮ್ಮ ಬ್ಯಾಂಕ್ ಖಾತೆಗಳಿಗೆ 360 ಶತಕೋಟಿ ಡಾಲರ್‌ಗಳಿಗಿಂತ ಹೆಚ್ಚು ಮೊತ್ತದ ನೇರ ಲಾಭ ವರ್ಗಾವಣೆಯನ್ನು ಸ್ವೀಕರಿಸಿದ್ದಾರೆ. 33 ಶತಕೋಟಿ ಡಾಲರ್‌ಗಳಿಗಿಂತ ಹೆಚ್ಚು ಉಳಿಸಲು ಸಹಾಯ ಮಾಡಿದ್ದಾರೆ. ನಮ್ಮ ಸರ್ಕಾರಿ ಇ-ಮಾರ್ಕೆಟ್‌ಪ್ಲೇಸ್ ಅಥವಾ ಜಿಇಎಂ ಪೋರ್ಟಲ್ ಸರ್ಕಾರಿ ಸಂಗ್ರಹಣೆಯಲ್ಲಿ ಹೆಚ್ಚಿನ ಪಾರದರ್ಶಕತೆಯನ್ನು ತಂದಿದೆ ಎಂದು ಮೋದಿ ಹೇಳಿದ್ದಾರೆ

G20 ಸಭೆಯಲ್ಲಿ ಮೋದಿ ಭಾಷಣ: ಭ್ರಷ್ಟಾಚಾರದ ವಿರುದ್ಧ ಸಾಮೂಹಿಕ ಪ್ರಯತ್ನಕ್ಕೆ ಪ್ರಧಾನಿ ಕರೆ
ನರೇಂದ್ರ ಮೋದಿ
Follow us
|

Updated on: Aug 12, 2023 | 3:13 PM

ದೆಹಲಿ ಆಗಸ್ಟ್ 12:ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶನಿವಾರ ಕೋಲ್ಕತ್ತಾದಲ್ಲಿ ಸಚಿವರ ಜಿ 20 ಭ್ರಷ್ಟಾಚಾರ ವಿರೋಧಿ ಸಭೆಯನ್ನು (G20 Anti-Corruption Ministerial Meeting) ಉದ್ದೇಶಿಸಿ ಮಾತನಾಡಿದ್ದು ಭಾರತವು ಭ್ರಷ್ಟಾಚಾರದ (corruption) ವಿರುದ್ಧ ಶೂನ್ಯ ಸಹಿಷ್ಣುತೆಯ ಕಟ್ಟುನಿಟ್ಟಾದ ನೀತಿಯನ್ನು ಹೊಂದಿದೆ ಎಂದಿದ್ದಾರೆ. ಭಾರತವು ಪಾರದರ್ಶಕ ಮತ್ತು ಜವಾಬ್ದಾರಿಯುತ ಪರಿಸರ ವ್ಯವಸ್ಥೆಯನ್ನು ರಚಿಸಲು ತಂತ್ರಜ್ಞಾನ ಮತ್ತು ಇ-ಆಡಳಿತವನ್ನು ಬಳಸಿಕೊಳ್ಳುತ್ತಿದೆ ಎಂದ ಪ್ರಧಾನಿ ಒತ್ತಿ ಹೇಳಿದ್ದಾರೆ. ಟ್ಯಾಗೋರ್ ಅವರ ಬರಹಗಳನ್ನು ಉಲ್ಲೇಖಿಸಿದ ಪ್ರಧಾನಿ, ದುರಾಶೆಯ ವಿರುದ್ಧ ಎಚ್ಚರಿಕೆ ನೀಡಿದರು. ಪ್ರಾಚೀನ ಭಾರತೀಯ ಉಪನಿಷತ್ತುಗಳು ‘ಮಾ ಗೃಧ’ ಎಂದು ಹೇಳುತ್ತಿವೆ, ಅಂದರೆ ‘ದುರಾಸೆ ಇರಬಾರದು’.

ಭ್ರಷ್ಟಾಚಾರದ ಹೆಚ್ಚಿನ ಪರಿಣಾಮವನ್ನು ಬಡವರು ಮತ್ತು ಅಂಚಿನಲ್ಲಿರುವವರು ಅನುಭವಿಸುತ್ತಿದ್ದಾರೆ. ಇದು ಸಂಪನ್ಮೂಲ ಬಳಕೆಯ ಮೇಲೆ ಪರಿಣಾಮ ಬೀರುತ್ತದೆ, ಮಾರುಕಟ್ಟೆಗಳನ್ನು ನಾಶ ಮಾಡುತ್ತದೆ. ಸೇವಾ ವಿತರಣೆಯ ಮೇಲೆ ಪರಿಣಾಮ ಬೀರುತ್ತದೆ ಅಂತಿಮವಾಗಿ ಜನರ ಜೀವನದ ಗುಣಮಟ್ಟವನ್ನು ಕಡಿಮೆ ಮಾಡುತ್ತದೆ ಎಂದು ಮೋದಿ ಹೇಳಿದ್ದಾರೆ.

ಅರ್ಥಶಾಸ್ತ್ರದಲ್ಲಿ ಕೌಟಿಲ್ಯನನ್ನು ಉಲ್ಲೇಖಿಸಿದ ಮೋದಿ, ರಾಜ್ಯದ ಜನರ ಕಲ್ಯಾಣವನ್ನು ಗರಿಷ್ಠಗೊಳಿಸಲು ರಾಜ್ಯದ ಸಂಪನ್ಮೂಲಗಳನ್ನು ಹೆಚ್ಚಿಸುವುದು ಸರ್ಕಾರದ ಕರ್ತವ್ಯ ಎಂದು ಹೇಳಿದರು. ಈ ಗುರಿಯನ್ನು ಸಾಧಿಸಲು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಅವಶ್ಯಕತೆಯಿದೆ. ಅದು ತನ್ನ ಜನರ ಕಡೆಗೆ ಸರ್ಕಾರದ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

“ಭಾರತದಲ್ಲಿ ನೂರಾರು ಮಿಲಿಯನ್ ಜನರು ತಮ್ಮ ಬ್ಯಾಂಕ್ ಖಾತೆಗಳಿಗೆ 360 ಶತಕೋಟಿ ಡಾಲರ್‌ಗಳಿಗಿಂತ ಹೆಚ್ಚು ಮೊತ್ತದ ನೇರ ಲಾಭ ವರ್ಗಾವಣೆಯನ್ನು ಸ್ವೀಕರಿಸಿದ್ದಾರೆ. 33 ಶತಕೋಟಿ ಡಾಲರ್‌ಗಳಿಗಿಂತ ಹೆಚ್ಚು ಉಳಿಸಲು ಸಹಾಯ ಮಾಡಿದ್ದಾರೆ. ನಮ್ಮ ಸರ್ಕಾರಿ ಇ-ಮಾರ್ಕೆಟ್‌ಪ್ಲೇಸ್ ಅಥವಾ ಜಿಇಎಂ ಪೋರ್ಟಲ್ ಸರ್ಕಾರಿ ಸಂಗ್ರಹಣೆಯಲ್ಲಿ ಹೆಚ್ಚಿನ ಪಾರದರ್ಶಕತೆಯನ್ನು ತಂದಿದೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ:ಅಪರಾಧ ನ್ಯಾಯ ವ್ಯವಸ್ಥೆಯನ್ನು ಭಾರತೀಯಗೊಳಿಸುವ ಪ್ರಕ್ರಿಯೆ ನಡೆದು ಬಂದ ಹಾದಿ ಹೀಗಿದೆ ನೋಡಿ

2014 ರಿಂದ USD 12 ಶತಕೋಟಿಗೂ ಹೆಚ್ಚು ಮೌಲ್ಯದ ಅಪರಾಧಿಗಳ ಆಸ್ತಿಯನ್ನು ವಶಪಡಿಸಿಕೊಳ್ಳಲು ಸಹಾಯ ಮಾಡಿದ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಕುರಿತು ಮೋದಿ ಮಾತನಾಡಿದ್ದಾರೆ. 2018 ರಲ್ಲಿ ಆರ್ಥಿಕ ಅಪರಾಧಿಗಳ ಕಾಯ್ದೆಯನ್ನು ಜಾರಿಗೊಳಿಸುವ ಕುರಿತು ಮಾತನಾಡಿದ ಪ್ರಧಾನಿ, ಸರ್ಕಾರವು ಆರ್ಥಿಕ ಅಪರಾಧಿಗಳನ್ನು ಆಕ್ರಮಣಕಾರಿಯಾಗಿ ಅನುಸರಿಸುತ್ತಿದೆ. ಆರ್ಥಿಕ ಅಪರಾಧಿಗಳು ಮತ್ತು ಪರಾರಿಯಾದವರಿಂದ 1.8 ಶತಕೋಟಿ ಡಾಲರ್‌ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ವಸೂಲಿ ಮಾಡಲಾಗಿದೆ.

G-20 ನಲ್ಲಿ, ಸಾಮೂಹಿಕ ಪ್ರಯತ್ನಗಳು ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಗಣನೀಯವಾಗಿ ಬೆಂಬಲಿಸಬಹುದು. 2018 ರಲ್ಲಿ G-20 ಶೃಂಗಸಭೆಯಲ್ಲಿ, ಆಸ್ತಿ ಮರುಪಡೆಯುವಿಕೆಗಾಗಿ ಪರಾರಿಯಾದ ಆರ್ಥಿಕ ಅಪರಾಧಿಗಳ ವಿರುದ್ಧ ಕ್ರಮಕ್ಕಾಗಿ ನಾನು 9 ಅಂಶಗಳ ಕಾರ್ಯಸೂಚಿಯನ್ನು ಮಂಡಿಸಿದ್ದೆ. ನಿಮ್ಮ ಗುಂಪು ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂಬುದನ್ನು ಗಮನಿಸಲು ನನಗೆ ಸಂತೋಷವಾಗಿದೆ. ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಲೆಕ್ಕಪರಿಶೋಧನಾ ಸಂಸ್ಥೆಗಳಿಗೆ ಗೌರವ ನೀಡಬೇಕಾಗಿದೆ ಎಂದು ಮೋದಿ ಹೇಳಿದರು.

ಕಲ್ಯಾಣ ಯೋಜನೆಯ ಸೋರಿಕೆ ತಡೆಯಲಾಗಿದ್ದು ಭಾರತದಲ್ಲಿ ನೇರ ವರ್ಗಾವಣೆಯ ಮೂಲಕ ಜನರಿಗೆ $360 ಬಿಲಿಯನ್ ನೀಡಲಾಗಿದೆ ಎಂದು ಪ್ರಧಾನಿ ಮೋದಿಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ