ನೀವು ಕೇವಲ ಬಿಜೆಪಿ ಕಾರ್ಯಕರ್ತರಲ್ಲ ದೇಶದ ಸಂಕಲ್ಪ ಸಿದ್ಧಿಗೆ ಹಗಲಿರುಳು ಶ್ರಮಿಸುವ ಸಿಪಾಯಿಗಳು ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಪ್ರತಿ ಬಾರಿಯೂ ಮುಖ್ಯಮಂತ್ರಿಗಳು, ಸಚಿವರು, ಪಕ್ಷದ ಅಧ್ಯಕ್ಷರು, ಪ್ರದೇಶ ಕಾರ್ಯಸಮಿತಿ, ಜಿಲ್ಲಾ ಸಮಿತಿ, ಮಂಡಲ ಕಾರ್ಯಸಮಿತಿ ಸದಸ್ಯರೊಂದಿಗೆ ಸಭೆಗಳು ನಡೆಯುವುದು ಸಾಮಾನ್ಯ ಆದರೆ ಈ ಬಾರಿ ಬೇರು ಅಂದರೆ ಬೂತ್ ಮಟ್ಟದಿಂದಲೇ ಸಭೆಯನ್ನು ಆಯೋಜಿಸಲಾಗಿದೆ ಎಂದು ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
ನೀವು ನಿಮ್ಮ ಬೂತ್ನಲ್ಲಿ ವರ್ಷಪೂರ್ತಿ ಕೆಲಸ ಮಾಡುತ್ತಿರುತ್ತೀರಿ, ಕೇಂದ್ರ ಸರ್ಕಾರ 9 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೇಶಾದ್ಯಂತ ಕಾರ್ಯಕ್ರಮ ಮಾಡುತ್ತಿದ್ದೇವೆ, ಅದರಲ್ಲಿ ನಿಮ್ಮನ್ನು ಸೇರಿಸಿಕೊಳ್ಳಬೇಕೆಂಬುದು ಎಲ್ಲರ ಆಶಯವಾಗಿತ್ತು ಎಂದರು.
ಕೇಂದ್ರದ ಬಿಜೆಪಿ ಸರ್ಕಾರಕ್ಕೆ 9 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪಕ್ಷವು ನಡೆಸುತ್ತಿರುವ ಜನಸಂಪರ್ಕ ಅಭಿಯಾನದ ಅಂಗವಾಗಿ ಮೇರಾ ಬೂತ್, ಸಬ್ಸೆ ಮಜಬೂತ್ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ರಾಜ್ಯದ 1918 ಸಂಘಟನಾ ಮಂಡಳಿಗಳು ಮತ್ತು ಬೂತ್‌ಗಳಲ್ಲಿ ಹಾಜರಿರುವ ಕಾರ್ಯಕರ್ತರು, ಪದಾಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು.
ರಾಷ್ಟ್ರೀಯ ಸುದ್ದಿಗಲಿಗಾಗಿ ಇಲ್ಲಿ ಕ್ಲಿಕ್ ಮಾಡಿ