ಭಾರತದ ಯುವಕರು ಅಪಾಯಗಳನ್ನು ಸ್ವೀಕರಿಸಲು ಹಿಂಜರಿಯಬೇಡಿ, ಸರ್ಕಾರ ನಿಮ್ಮೊಂದಿಗಿದೆ; ಪ್ರಧಾನಿ ಮೋದಿ

ನವದೆಹಲಿಯಲ್ಲಿ ನಡೆದ ವಿಕಸಿತ ಭಾರತ ಯುವ ನಾಯಕರ ಸಂವಾದದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಯುವಕರ ಸೃಜನಶೀಲತೆಯನ್ನು ಶ್ಲಾಘಿಸಿದರು. ಭಾರತೀಯ ಯುವಕರು ರಾಷ್ಟ್ರ ನಿರ್ಮಾಣದಲ್ಲಿ ಮುಂಚೂಣಿಯಲ್ಲಿದ್ದಾರೆ. ಭಾರತೀಯ ಯುವಕರ ಸಾಮರ್ಥ್ಯವು ಭವಿಷ್ಯದಲ್ಲಿ ಭಾರತದ ಸಾಮರ್ಥ್ಯವಾಗುತ್ತದೆ, ಅವರು ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದರು.

ಭಾರತದ ಯುವಕರು ಅಪಾಯಗಳನ್ನು ಸ್ವೀಕರಿಸಲು ಹಿಂಜರಿಯಬೇಡಿ, ಸರ್ಕಾರ ನಿಮ್ಮೊಂದಿಗಿದೆ; ಪ್ರಧಾನಿ ಮೋದಿ
Pm Modi

Updated on: Jan 12, 2026 | 9:38 PM

ನವದೆಹಲಿ, ಜನವರಿ 12: ದೆಹಲಿಯಲ್ಲಿ “ಅಭಿವೃದ್ಧಿ ಹೊಂದಿದ ಭಾರತ- ಯುವ ನಾಯಕರ ಸಂವಾದ”ವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಯುವಕರಿಗೆ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ಸಾಕಾರಗೊಳಿಸಲು ಮನವಿ ಮಾಡಿದರು. ಯುವಕರ ಯಶಸ್ಸು ದೇಶವನ್ನು ಉನ್ನತೀಕರಿಸುತ್ತದೆ. ಯುವಕರು ಮೊದಲು ರಾಷ್ಟ್ರದ ಪ್ರಜ್ಞೆಯನ್ನು ಹೊಂದಿರಬೇಕು. ಯುವಕರ ಶಕ್ತಿಯೇ ಭಾರತದ ಶಕ್ತಿಯಾಗುತ್ತದೆ. ಯುವಕರು ಎಂದಿಗೂ ಅಪಾಯಗಳನ್ನು ಅಥವಾ ಸವಾಲುಗಳನ್ನು ಸ್ವೀಕರಿಸಲು ಹಿಂಜರಿಯಬೇಡಿ, ಸರ್ಕಾರ ಸದಾ ನಿಮ್ಮೊಂದಿಗೆ ಇರುತ್ತದೆ ಎಂದು ಅವರು ಹೇಳಿದರು.

“ಇಂದು ನೀವು ವಿಕಸಿತ ಭಾರತವನ್ನು ಸಾಧಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದೀರಿ. 2047ರಲ್ಲಿ ನಮ್ಮ ಸ್ವಾತಂತ್ರ್ಯದ 100 ವರ್ಷಗಳು ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಇದು ನಿಮಗೆ ಬಹಳ ಮುಖ್ಯವಾದ ಸಮಯ. ಇದು ನಿಮಗೆ ಒಂದು ಸುವರ್ಣಾವಕಾಶ, ನಿಮ್ಮ ಸಾಮರ್ಥ್ಯವು ಭಾರತದ ಸಾಮರ್ಥ್ಯವಾಗಿರುತ್ತದೆ, ನಿಮ್ಮ ಯಶಸ್ಸು ಭಾರತದ ಯಶಸ್ಸನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದು” ಎಂದು ಮೋದಿ ಯುವಕರಿಗೆ ಕಿವಿಮಾತು ಹೇಳಿದರು.


ಇದನ್ನೂ ಓದಿ: Somnath Temple: ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

ಜನವರಿ 12ರಂದು ಭಾರತವು ರಾಷ್ಟ್ರೀಯ ಯುವ ದಿನವನ್ನು ಆಚರಿಸುತ್ತದೆ. ಇಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ. ಅವರ ಆಲೋಚನೆಗಳು ಪ್ರತಿಯೊಬ್ಬ ಯುವಕರಿಗೂ ಸ್ಫೂರ್ತಿ ಮತ್ತು ಮಾರ್ಗದರ್ಶಿಯಾಗಿದೆ. ಅದಕ್ಕಾಗಿಯೇ ಜನವರಿ 12 ಅನ್ನು ವಿಕಸಿತ ಭಾರತ ಯುವ ನಾಯಕರ ಸಂವಾದವಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ