ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದು, ಭಾರತ-ಯುಎಸ್ ಪಾಲುದಾರಿಕೆಗೆ ಬದ್ಧತೆಯನ್ನು ಶ್ಲಾಘಿಸಿದರು. ಇಬ್ಬರೂ ನಾಯಕರು ಉಕ್ರೇನ್‌ನಲ್ಲಿನ ಪರಿಸ್ಥಿತಿಯನ್ನು ದೂರವಾಣಿ ಕರೆಯಲ್ಲಿ ಚರ್ಚಿಸಿದರು. ಇತರ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಬಗ್ಗೆಯೂ ಚರ್ಚಿಸಿದರು.
ಪ್ರಧಾನಿ ಮೋದಿ ಅವರು 2 ದಿನಗಳ ಹಿಂದಷ್ಟೇ ಉಕ್ರೇನ್ ಪ್ರವಾಸದಿಂದ ಭಾರತಕ್ಕೆ ಹಿಂದಿರುಗಿದ್ದಾರೆ. ಅಲ್ಲಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯನ್ನು ಭೇಟಿಯಾದರು. ಇದರ ಬೆನ್ನಲ್ಲೇ ಮೋದಿ ಅಮೆರಿಕ ಅಧ್ಯಕ್ಷ ಬೈಡೆನ್ ಜೊತೆ ಮಾತುಕತೆ ನಡೆಸಿದ್ದಾರೆ.
Spoke to @POTUS @JoeBiden on phone today. We had a detailed exchange of views on various regional and global issues, including the situation in Ukraine. I reiterated India’s full support for early return of peace and stability.
We also discussed the situation in Bangladesh and…
— Narendra Modi (@narendramodi) August 26, 2024
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪಿಎಂ ಮೋದಿ, ಇಂದು ಫೋನ್‌ನಲ್ಲಿ ಜೋ ಬೈಡೆನ್ ಅವರೊಂದಿಗೆ ಮಾತನಾಡಿದೆ. ಉಕ್ರೇನ್‌ನಲ್ಲಿನ ಪರಿಸ್ಥಿತಿ ಸೇರಿದಂತೆ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳ ಕುರಿತು ನಾವು ವಿವರವಾದ ವಿನಿಮಯವನ್ನು ಹೊಂದಿದ್ದೇವೆ. ಶಾಂತಿ ಮತ್ತು ಸ್ಥಿರತೆಯನ್ನು ಮರುಸ್ಥಾಪಿಸಲು ಭಾರತದ ಸಂಪೂರ್ಣ ಬೆಂಬಲವನ್ನು ನಾನು ಪುನರುಚ್ಚರಿಸಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇದನ್ನೂ ಓದಿ: Ladakh: ಲಡಾಖ್‌ನಲ್ಲಿ 5 ಹೊಸ ಜಿಲ್ಲೆಗಳ ರಚನೆ; ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ
ಈ ವೇಳೆ, ಬಾಂಗ್ಲಾದೇಶದ ಪರಿಸ್ಥಿತಿ ಮತ್ತು ದೇಶದ ಬಂಗಾಳಿ ಹಿಂದೂ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಎರಡೂ ದೇಶಗಳ ನಾಯಕರು ಚರ್ಚಿಸಿದ್ದಾರೆ. “ನಾವು ಬಾಂಗ್ಲಾದೇಶದ ಪರಿಸ್ಥಿತಿಯನ್ನು ಚರ್ಚಿಸಿದ್ದೇವೆ ಮತ್ತು ಸಹಜತೆಯನ್ನು ಶೀಘ್ರವಾಗಿ ಮರುಸ್ಥಾಪಿಸುವ ಅಗತ್ಯವನ್ನು ಒತ್ತಿಹೇಳಿದ್ದೇವೆ ಮತ್ತು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂಗಳ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಆದ್ಯತೆ ನೀಡುತ್ತೇವೆ” ಎಂದು ಮೋದಿ ಹೇಳಿದ್ದಾರೆ.
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ ನಂತರ ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳು ಮತ್ತು ಹಿಂದೂಗಳ ಮನೆಗಳು ಮತ್ತು ವ್ಯವಹಾರಗಳ ಮೇಲೆ ದಾಳಿಗಳು ಹೆಚ್ಚಾಗಿವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ