ಸಿಡಿಲು ಬಡಿದು ಮೃತಪಟ್ಟ ಜನರ ಕುಟುಂಬಗಳಿಗೆ ಪರಿಹಾರ ಧನ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

PM Narendra Modi: ಮೂರು ರಾಜ್ಯಗಳಲ್ಲಿ ಸಿಡಿಲಿನ ದಾಳಿಯಲ್ಲಿ ಮೃತಪಟ್ಟವರ ಸಾವಿಗೆ ಪಿಎಂಒ ಸಂತಾಪ ಸೂಚಿಸಿದ್ದು, ಸಂತ್ರಸ್ತರಿಗೆ ಆಯಾ ರಾಜ್ಯ ಸರ್ಕಾರಗಳು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಿದೆ ಎಂದು ಹೇಳಿದೆ.

ಸಿಡಿಲು ಬಡಿದು ಮೃತಪಟ್ಟ ಜನರ ಕುಟುಂಬಗಳಿಗೆ ಪರಿಹಾರ ಧನ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 12, 2021 | 1:01 PM

ದೆಹಲಿ: ಭಾನುವಾರ ಭಾರೀ ಮಳೆಯಿಂದಾಗಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದಲ್ಲಿ ಸಿಡು ಬಡಿದು ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪರಿಹಾರ ಧನ ಘೋಷಿಸಿದರು. ರಾಜಸ್ಥಾನದ 12 ನೇ ಶತಮಾನದ ಅಂಬರ್ ಕೋಟೆಯಲ್ಲಿ ಕಾವಲು ಗೋಪುರದ ಬಳಿ ಸಿಡಿಲು ಬಡಿದು 20 ಜನರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರ ಕುಟುಂಬಗಳಿಗೆ ₹2 ಲಕ್ಷ ಮತ್ತು ಗಾಯಗೊಂಡವರ ಕುಟುಂಬಗಳಿಗೆ ₹ 50,000 ನೀಡಲಾಗುವುದು ಎಂದು ಸರಣಿ ಟ್ವೀಟ್‌ಗಳಲ್ಲಿ ಪ್ರಧಾನಿ ಕಚೇರಿ (PMO) ತಿಳಿಸಿದೆ. ಮೂರು ರಾಜ್ಯಗಳಲ್ಲಿ ಸಿಡಿಲಿನ ದಾಳಿಯಲ್ಲಿ ಮೃತಪಟ್ಟವರ ಸಾವಿಗೆ ಪಿಎಂಒ ಸಂತಾಪ ಸೂಚಿಸಿದ್ದು, ಸಂತ್ರಸ್ತರಿಗೆ ಆಯಾ ರಾಜ್ಯ ಸರ್ಕಾರಗಳು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಿದೆ ಎಂದು ಹೇಳಿದೆ. ಅಂಬರ್ ಕೋಟೆಯ ಕಾವಲು ಗೋಪುರದ ಬಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ರಾಜಸ್ಥಾನದ ಜನರ ಗುಂಪಿನ ಮೇಲೆ ಸಿಡಿಲು ಅಪ್ಪಳಿಸಿತು. ರಾಜಸ್ಥಾನದಲ್ಲಿ ಕೋಟಾ, ಧೋಲ್ಪುರ್, ಝಾಲವರ್, ಜೈಪುರ ಮತ್ತು ಬರಾನ್ ಜಿಲ್ಲೆಗಳಲ್ಲಿ ಸಿಡಿಲು ಅಪ್ಪಳಿಸಿದೆ.

ಅಂಬರ್ ಕೋಟೆ ಪ್ರದೇಶದಿಂದ 29 ಜನರನ್ನು ರಕ್ಷಿಸಲಾಗಿದೆ ಎಂದು ಜೈಪುರ ಪೊಲೀಸ್ ಆಯುಕ್ತ ಆನಂದ್ ಶ್ರೀವಾಸ್ತವ ತಿಳಿಸಿದ್ದಾರೆ. “ಸ್ಥಳೀಯರ ಸಹಾಯದಿಂದ, ಅಂಬರ್ ಕೋಟೆ ಪ್ರದೇಶದ ಸುಮಾರು 29 ಜನರನ್ನು ಸಿಡಿಲಿನ ಹೊಡೆತದಿಂದ ರಕ್ಷಿಸಿದೆವು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು” ಎಂದು ಅವರು ಹೇಳಿದರು. ರಾಜಸ್ಥಾನದಲ್ಲಿ ಸಿಡಿಲಿನ ಹೊಡೆತದಿಂದ ಸಾವನ್ನಪ್ಪಿದವರಲ್ಲಿ ಏಳು ಮಕ್ಕಳು ಸೇರಿದ್ದಾರೆ.

ಉತ್ತರ ಪ್ರದೇಶದಲ್ಲಿ ಭಾನುವಾರ ಸಿಡಿಲಿನಿಂದ 18 ಜನರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಅಧಿಕಾರಿ ಮನೋಜ್ ದೀಕ್ಷಿತ್ ಹೇಳಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಹೊಲಗಳಲ್ಲಿ ಕೆಲಸ ಮಾಡುವ ಕೃಷಿ ಕಾರ್ಮಿಕರಾಗಿದ್ದಾರೆ.

ಎರಡೂ ರಾಜ್ಯ ಸರ್ಕಾರಗಳು ಸಂತ್ರಸ್ತರ ಕುಟುಂಬಗಳಿಗೆ ಮತ್ತು ಗಾಯಗೊಂಡವರಿಗೆ ಆರ್ಥಿಕ ಪರಿಹಾರವನ್ನು ಘೋಷಿಸಿದವು.

ಮಧ್ಯಪ್ರದೇಶದಲ್ಲಿ ಸಿಡಿಲು ಬಡಿದು ಏಳು ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಶಿಯೋಪುರ್ ಮತ್ತು ಗ್ವಾಲಿಯರ್ ಜಿಲ್ಲೆಗಳಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದಾರೆ.

ಮುಂದಿನ ಎರಡು ದಿನಗಳಲ್ಲಿ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವುದರೊಂದಿಗೆ ಹೆಚ್ಚಿನ ಸಿಡಿಲು ಇರಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ. 2019 ರಲ್ಲಿ ಭಾರತದಲ್ಲಿ 2,900 ಕ್ಕೂ ಹೆಚ್ಚು ಜನರು ಸಿಡಿಲಿನಿಂದ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಕೋಟೆ ನೋಡಲು ತೆರಳಿದ್ದಾಗ ಬಂದೆರಗಿದ ಸಿಡಿಲು; ಸುಮಾರು 20 ಮಂದಿ ಸಾವು, 17 ಜನರಿಗೆ ಗಾಯ

(PM Narendra Modi announces ex-gratia for families of those who were killed in lightning strikes in Rajasthan Madhya Pradesh Uttar Pradesh)

Published On - 12:51 pm, Mon, 12 July 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ