AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ದೇಶದ 80 ಕೋಟಿ ಜನರಿಗೆ ದೀಪಾವಳಿಯವರೆಗೂ ಉಚಿತ ಆಹಾರ ಧಾನ್ಯ: ಪ್ರಧಾನಿ ಮೋದಿ ಘೋಷಣೆ

Free Ration Kit: ಬಡವರು ಯಾರೂ ಹಸಿವಿನಿಂದ ಮಲಗಬಾರದು ಎಂದು ಇದನ್ನು ವಿಸ್ತರಿಸಿ ದೀಪಾವಳಿವರೆಗೂ ಉಚಿತವಾಗಿ ಆಹಾರ ಧಾನ್ಯ ನೀಡುತ್ತೇವೆ. ನವೆಂಬರ್​ ತಿಂಗಳವರೆಗೂ ಆಹಾರ ಧಾನ್ಯ ವಿತರಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.

PM Narendra Modi: ದೇಶದ 80 ಕೋಟಿ ಜನರಿಗೆ ದೀಪಾವಳಿಯವರೆಗೂ ಉಚಿತ ಆಹಾರ ಧಾನ್ಯ: ಪ್ರಧಾನಿ ಮೋದಿ ಘೋಷಣೆ
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: guruganesh bhat|

Updated on:Jun 07, 2021 | 5:48 PM

Share

ದೆಹಲಿ: ಮಹಾಪಿಡುಗಿನ ಈ ಸಮಯದಲ್ಲಿ ಬಡವರ ಎಲ್ಲ ಅಗತ್ಯಗಳನ್ನು ಗಮನಿಸಿ, ನಾವು ಅವರ ಜೊತೆಗೆ ಇರುತ್ತೇವೆ. ದೇಶದ 80 ಕೋಟಿ ಜನರಿಗೆ ದೀಪಾವಳಿಯವರೆಗೂ ಉಚಿತ ಧಾನ್ಯ ವಿತರಣೆ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೊಷಿಸಿದರು. ಈ ವರ್ಷ ಮೇ, ಜೂನ್‌ ತಿಂಗಳುಗಳಲ್ಲಿ ಉಚಿತ ಆಹಾರ ಧಾನ್ಯ ವಿತರಣೆ ಮಾಡಲು ಸೂಚಿಸಲಾಗಿತ್ತು. ಬಡವರು ಯಾರೂ ಹಸಿವಿನಿಂದ ಮಲಗಬಾರದು ಎಂದು ಇದನ್ನು ವಿಸ್ತರಿಸಿ ದೀಪಾವಳಿವರೆಗೂ ಉಚಿತವಾಗಿ ಆಹಾರ ಧಾನ್ಯ ನೀಡುತ್ತೇವೆ. ನವೆಂಬರ್​ ತಿಂಗಳವರೆಗೂ ಆಹಾರ ಧಾನ್ಯ ವಿತರಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.

ಜೂನ್ 21ರ ಯೋಗ ದಿನದ ನಂತರ ದೇಶದಲ್ಲಿ ಲಸಿಕೆ ವಿತರಣಾ ಅಭಿಯಾನ ಹೊಸ ವೇಗ ಪಡೆಯಲಿದೆ. ಭಾರತ ಸರ್ಕಾರವೇ ಎಲ್ಲ ರಾಜ್ಯಗಳಿಗೂ ಉಚಿತವಾಗಿ ಕೊಡಲಿದೆ. ಭಾರತದ ಎಲ್ಲ ನಾಗರಿಕರಿಗೂ ಉಚಿತ ಲಸಿಕೆ ಕೊಡಲಾಗುವುದು. ಲಸಿಕೆ ವಿತರಣೆಯಲ್ಲಿ ಬಡವರು, ಮಧ್ಯಮ ವರ್ಗದವರು ಎಂಬ ಭೇದ ಇರುವುದಿಲ್ಲ. ಯಾರಿಗಾದರೂ ಉಚಿತ ಲಸಿಕೆಯ ಬದಲು ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯುತ್ತೇವೆ ಎಂದಾದರೆ ಅದಕ್ಕೂ ಅವಕಾಶವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

PM Modi Speech: ಭಾರತದ ಎಲ್ಲ ನಾಗರಿಕರಿಗೂ ಉಚಿತ ಲಸಿಕೆ: ಪ್ರಧಾನಿ ನರೇಂದ್ರ ಮೋದಿ

ಆತ್ಮನಿರ್ಭರ್​ ಪ್ಯಾಕೇಜ್​ನಡಿ ಕೊವಿಡ್​ ಪ್ಯಾಕೇಜ್​ ಮೂಲಕ ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಲಸಿಕೆಗಳ ಲಭ್ಯತೆ ಇನ್ನೂ ಹೆಚ್ಚಲಿದೆ. ದೇಶದ 7 ಕಂಪನಿಗಳು ಲಸಿಕೆ ತಯಾರಿಸುತ್ತಿವೆ. 3 ಟ್ರಯಲ್​ಗಳು ನಡೆಯುತ್ತಿವೆ. ಇತರ ದೇಶಗಳ ಕಂಪನಿಗಳಿಂದಲೂ ಲಸಿಕೆ ಖರೀದಿ ಪ್ರಕ್ರಿಯೆಯನ್ನು ಆರಂಭಿಸಿದ್ದೇವೆ. ಕೆಲ ತಜ್ಞರ ಮೂಲಕ ಮಕ್ಕಳ ಸುರಕ್ಷೆ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ. ಮಕ್ಕಳಿಗೆ ಲಸಿಕೆ ನೀಡುವ ಟ್ರಯಲ್ ನಡೆಯುತ್ತಿದೆ. ಮೂಗಿನ ಮೂಲಕ ಕೊಡುವ (ನೇಸಲ್) ಲಸಿಕೆಯ ಟ್ರಯಲ್ ಸಹ ನಡೆಯುತ್ತಿದೆ. ಈ ಲಸಿಕೆಯಲ್ಲಿ ಸಫಲತೆ ಸಿಕ್ಕರೆ ಭಾರತದಲ್ಲಿ ಲಸಿಕೆ ಅಭಿಯಾನ ಇನ್ನಷ್ಟು ವೇಗ ಪಡೆಯುತ್ತದೆ. ಇಷ್ಟು ಕಡಿಮೆ ಸಮಯದಲ್ಲಿ ಲಸಿಕೆ ಮಾಡುವುದರಿಂದ ವಿಶ್ವದ ಜನಸಮುದಾಯಕ್ಕೆ ಅನುಕೂಲವಾಗಿದೆ ಎಂದು ಅವರು ವಿವರಿಸಿದರು.

ಇದನ್ನೂ ಓದಿ: 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬೂತ್ ಮಟ್ಟದಲ್ಲಿ ಕೊವಿಡ್ ಲಸಿಕೆ ನೀಡಲು ಮನೆ-ಮನೆ ಸಮೀಕ್ಷೆ: ಅರವಿಂದ್ ಕೇಜ್ರಿವಾಲ್ ಘೋಷಣೆ

ಮೈಸೂರು ವಿವಿಯಿಂದ ಕೊವಿಡ್ ರ‍್ಯಾಪಿಡ್‌ ಡಿಟೆಕ್ಷನ್ ಕಿಟ್ ವಿನ್ಯಾಸ; ಲಸಿಕೆ ಅಭಿವೃದ್ಧಿಪಡಿಸಲು ಅನುದಾನದ ಕೊರತೆ

(PM Narendra Modi announces free Ration Kit to poor till November deepavali)

Published On - 5:41 pm, Mon, 7 June 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!