1 ಕೋಟಿ ಮನೆಗಳಿಗೆ ಸೌರ ಮೇಲ್ಛಾವಣಿ ಅಳವಡಿಸುವ ಪ್ರಧಾನಮಂತ್ರಿ ‘ಸೂರ್ಯೋದಯ ಯೋಜನೆ’ ಘೋಷಿಸಿದ ಕೇಂದ್ರ
ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರವು 1 ಕೋಟಿ ಮನೆಗಳಿಗೆ ರೂಫ್‌ಟಾಪ್ ಸೋಲಾರ್ ಅಳವಡಿಸುವ ಗುರಿಯೊಂದಿಗೆ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ” ಪ್ರಾರಂಭಿಸುತ್ತದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಕಡಿಮೆಯಾಗುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿಯಾಗಲಿದೆ ಎಂದು ಯೋಜನೆ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದೆಹಲಿ ಜನವರಿ 22: ಅಯೋಧ್ಯೆಯ (Ayodhya) ರಾಮಮಂದಿರದಲ್ಲಿ (Ram mandir) ಭಗವಾನ್ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ನಂತರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸೂರ್ಯೋದಯ ಯೋಜನೆಯನ್ನು(Pradhan Mantri Suryoday Yojana) ಘೋಷಿಸಿದ್ದಾರೆ. ದೇಶವಾಸಿಗಳು ತಮ್ಮ ಮನೆಗಳ ಮೇಲ್ಛಾವಣಿಯ ಮೇಲೆ ಸೌರ ವ್ಯವಸ್ಥೆಯನ್ನು ಹೊಂದಬೇಕು ಎಂಬ ಅವರ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿಯವರ ಘೋಷಣೆಯ ಪ್ರಕಾರ, ಯೋಜನೆಯಡಿಯಲ್ಲಿ ಒಂದು ಕೋಟಿ ಮನೆಗಳಲ್ಲಿ ರೂಫ್‌ಟಾಪ್ ಸೋಲಾರ್ ಅಳವಡಿಸಲಾಗುವುದು.
ಪ್ರಪಂಚದ ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಯಾವಾಗಲೂ ಶಕ್ತಿಯನ್ನು ಪಡೆಯುತ್ತಾರೆ. ಇಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಂದರ್ಭದಲ್ಲಿ ಭಾರತದ ಜನರು ತಮ್ಮ ಮನೆಗಳ ಮೇಲ್ಛಾವಣಿಯ ಮೇಲೆ ತಮ್ಮದೇ ಆದ ಸೋಲಾರ್ ರೂಫ್ ಟಾಪ್ ವ್ಯವಸ್ಥೆಯನ್ನು ಹೊಂದಿರಬೇಕು ಎಂಬ ನನ್ನ ಸಂಕಲ್ಪ ಮತ್ತಷ್ಟು ಬಲಗೊಂಡಿದೆ ಎಂದು ಸಾಮಾಜಿಕ ವೇದಿಕೆ X ನಲ್ಲಿ ಮೋದಿ ಬರೆದಿದ್ದಾರೆ.
Prime Minister @narendramodi announces that his Government will launch a massive ‘Pradhan Mantri Suryoday Yojana’ with the aim of providing rooftop solar power units to one crore households. This will not only benefit the masses but also make a significant contribution towards… pic.twitter.com/NwL8iOViNp
— Kanchan Gupta 🇮🇳 (@KanchanGupta) January 22, 2024
ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರವು 1 ಕೋಟಿ ಮನೆಗಳಿಗೆ ಮೇಲ್ಛಾವಣಿಯ ಸೋಲಾರ್ ಅನ್ನು ಸ್ಥಾಪಿಸುವ ಗುರಿಯೊಂದಿಗೆ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ” ಅನ್ನು ಪ್ರಾರಂಭಿಸುತ್ತದೆ. ಇದು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂದಿದ್ದಾರೆ ಅವರು.
ಪ್ರಧಾನಿ ಅವರು ಅಯೋಧ್ಯೆಯಿಂದ ಹಿಂದಿರುಗಿದ ನಂತರ ಇಲ್ಲಿ ಅಧಿಕಾರಿಗಳೊಂದಿಗೆ ಯೋಜನೆಯ ಕುರಿತು ಚರ್ಚಿಸುತ್ತಿರುವ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
सूर्यवंशी भगवान श्री राम के आलोक से विश्व के सभी भक्तगण सदैव ऊर्जा प्राप्त करते हैं।
आज अयोध्या में प्राण-प्रतिष्ठा के शुभ अवसर पर मेरा ये संकल्प और प्रशस्त हुआ कि भारतवासियों के घर की छत पर उनका अपना सोलर रूफ टॉप सिस्टम हो।
अयोध्या से लौटने के बाद मैंने पहला निर्णय लिया है कि… pic.twitter.com/GAzFYP1bjV
— Narendra Modi (@narendramodi) January 22, 2024
ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭ
ಇದಕ್ಕೂ ಮುನ್ನ ಅಯೋಧ್ಯೆಯ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಅಧ್ಯಕ್ಷತೆಯನ್ನು ಪ್ರಧಾನಿ ವಹಿಸಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಯುಪಿ ಗವರ್ನರ್ ಆನಂದಿಬೆನ್ ಪಟೇಲ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ದೇವಾಲಯದ ಗರ್ಭಗುಡಿಯಲ್ಲಿ ನಡೆದ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಇದು ಭಾರತದ ಸಮಯ ಮತ್ತು ಭಾರತವು ಮುಂದುವರಿಯಲಿದೆ. ಶತಮಾನಗಳು ಕಾದ ನಂತರ ನಾವು ಇಲ್ಲಿಗೆ ತಲುಪಿದ್ದೇವೆ. ನಾವೆಲ್ಲರೂ ಈ ಯುಗ, ಈ ಅವಧಿಗಾಗಿ ಕಾಯುತ್ತಿದ್ದೇವೆ. ಈಗ ನಾವು ನಿಲ್ಲುವುದಿಲ್ಲ. ನಾವು ಅಭಿವೃದ್ಧಿಯ ಎತ್ತರವನ್ನು ತಲುಪುತ್ತೇವೆ ಕಾರ್ಯಕ್ರಮದ ನಂತರ ಮಾತನಾಡಿದ ಪ್ರಧಾನಿ ಹೇಳಿದರು.
ಇದನ್ನೂ ಓದಿ: ಕುಬೇರ್ ಟೀಲಾ ಶಿವ ದೇವಾಲಯದಲ್ಲಿ ಪ್ರಾರ್ಥನೆ; ‘ಜಟಾಯು’ ಪ್ರತಿಮೆ ಅನಾವರಣಗೊಳಿಸಿದ ಮೋದಿ
ನ್ಯಾಯದ ಘನತೆಯನ್ನು ಹಾಗೇ ಉಳಿಸಿದ್ದಕ್ಕಾಗಿ ಭಾರತದ ನ್ಯಾಯಾಂಗಕ್ಕೆ ಮೋದಿ ಧನ್ಯವಾದ ಅರ್ಪಿಸಿದರು. ನ್ಯಾಯದ ಸಾಕಾರ, ಶ್ರೀರಾಮನ ಮಂದಿರವನ್ನು ನ್ಯಾಯಯುತ ವಿಧಾನಗಳ ಮೂಲಕ ನಿರ್ಮಿಸಲಾಗಿದೆ” ಎಂದು ಅವರು ಒತ್ತಿ ಹೇಳಿದರು. ದಶಕಗಳಷ್ಟು ಹಳೆಯದಾದ ವಿವಾದವನ್ನು 2019 ರಲ್ಲಿ ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿತ್ತು. ಸಣ್ಣ ಗ್ರಾಮಗಳು ಸೇರಿದಂತೆ ಇಡೀ ರಾಷ್ಟ್ರವು ಮೆರವಣಿಗೆಗಳನ್ನು ವೀಕ್ಷಿಸುತ್ತಿದೆ. ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನಗಳನ್ನು ನಡೆಸಲಾಗುತ್ತಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:09 pm, Mon, 22 January 24