ವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಗೋಡೌನ್‌ಗಳು ಮತ್ತು ಇತರ ಕೃಷಿ ಮೂಲಸೌಕರ್ಯಗಳ ನಿರ್ಮಾಣಕ್ಕಾಗಿ ಮತ್ತು ದೇಶಾದ್ಯಂತ 18 ಸಾವಿರ ಪಿಎಸಿಎಸ್‌ಗಳಲ್ಲಿ ಗಣಕೀಕರಣದ ಯೋಜನೆಗಾಗಿ ದೇಶಾದ್ಯಂತ ಹೆಚ್ಚುವರಿ 500 ಪ್ರಾಥಮಿಕ ಕೃಷಿ ಸಾಲ ಸೊಸೈಟಿಗಳಿಗೆ (ಪಿಎಸಿಎಸ್) ಶಂಕುಸ್ಥಾಪನೆ ಮಾಡಿದ್ದಾರೆ.

ವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on: Feb 24, 2024 | 7:17 PM

ದೆಹಲಿ ಫೆಬ್ರವರಿ 24: ‘ಸಹಕಾರಿ ವಲಯದಲ್ಲಿ ವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹ ಯೋಜನೆ’ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಚಾಲನೆ ನೀಡಿದ್ದು, ದೇಶದ ಮೂಲೆ ಮೂಲೆಗಳಲ್ಲಿ ಸಾವಿರಾರು ವೇರ್ ಹೌಸ್ ಮತ್ತು ಗೋದಾಮುಗಳು ಬರಲಿವೆ ಎಂದು ಹೇಳಿದ್ದಾರೆ. ದೆಹಲಿಯ ಭಾರತ್ ಮಂಟಪದಲ್ಲಿ(Bharat Mandapam ಸಹಕಾರಿ ಕ್ಷೇತ್ರಕ್ಕೆ ಬಹುಮುಖ್ಯ ಉಪಕ್ರಮಗಳಿಗೆ ಚಾಲನೆ ನೀಡಿದ ಮೋದಿ, 700 ಲಕ್ಷ ಮೆಟ್ರಿಕ್ ಟನ್‌ಗಳ ವಿಶ್ವದ ಅತಿದೊಡ್ಡ ಸಂಗ್ರಹಣಾ ಯೋಜನೆಯನ್ನು ಮುಂದಿನ ಐದು ವರ್ಷಗಳಲ್ಲಿ 1.25 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು. ರೈತರು ತಮ್ಮ ಉತ್ಪನ್ನಗಳನ್ನು ಸಂಗ್ರಹಿಸಿಟ್ಟುಕೊಂಡು ತಮ್ಮ ಅಗತ್ಯಕ್ಕೆ ತಕ್ಕಂತೆ ಸರಿಯಾದ ಸಮಯಕ್ಕೆ ಮಾರಾಟ ಮಾಡುವುದರ ಜೊತೆಗೆ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು.

ಸಹಕಾರಿ ಸಂಸ್ಥೆಗಳು ಭಾರತದ ಪ್ರಾಚೀನ ಪರಿಕಲ್ಪನೆ ಎಂದು ಪ್ರಧಾನಿ ಹೇಳಿದ್ದಾರೆ. ಗೋಡೌನ್‌ಗಳು ಮತ್ತು ಇತರ ಕೃಷಿ ಮೂಲಸೌಕರ್ಯಗಳ ನಿರ್ಮಾಣಕ್ಕಾಗಿ ಮತ್ತು ದೇಶಾದ್ಯಂತ 18 ಸಾವಿರ ಪಿಎಸಿಎಸ್‌ಗಳಲ್ಲಿ ಗಣಕೀಕರಣದ ಯೋಜನೆಗಾಗಿ ದೇಶಾದ್ಯಂತ ಹೆಚ್ಚುವರಿ 500 ಪ್ರಾಥಮಿಕ ಕೃಷಿ ಸಾಲ ಸೊಸೈಟಿಗಳಿಗೆ (ಪಿಎಸಿಎಸ್) ಪ್ರಧಾನಮಂತ್ರಿ ಶಂಕುಸ್ಥಾಪನೆ ಮಾಡಿದ್ದಾರೆ. ಹೊಸ ಸಹಕಾರ ಸಚಿವಾಲಯದ ಮೂಲಕ, ಭಾರತದ ಕೃಷಿ ಕ್ಷೇತ್ರದ ವಿಘಟಿತ ಅಧಿಕಾರಗಳನ್ನು ಒಟ್ಟುಗೂಡಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಮುಂಬರುವ ವರ್ಷಗಳಲ್ಲಿ ಎರಡು ಲಕ್ಷ ಸಹಕಾರಿ ಸಂಘಗಳನ್ನು ಸ್ಥಾಪಿಸುವ ಸರ್ಕಾರದ ಗುರಿಯನ್ನು ಅವರು ಪುನರುಚ್ಚರಿಸಿದ್ದಾರೆ.

ಯೋಜನೆಗೆ ಮೋದಿ ಚಾಲನೆ

ರೈತ ಉತ್ಪಾದಕರ ಸಂಘಟನೆಯ ಉದಾಹರಣೆ ನೀಡಿದ ಅವರು, ಹಳ್ಳಿಗಳಲ್ಲಿ ಸಣ್ಣ ರೈತರಲ್ಲಿ ಬೆಳೆಯುತ್ತಿರುವ ಉದ್ಯಮಶೀಲತೆ ಬಗ್ಗೆಯೂ ಮಾತನಾಡಿದ್ದಾರೆ. ಪ್ರತ್ಯೇಕ ಸಚಿವಾಲಯದ ಕಾರಣ, 10 ಸಾವಿರ ಎಫ್‌ಪಿಒಗಳ ಗುರಿಯಲ್ಲಿ ಎಂಟು ಸಾವಿರ ಎಫ್‌ಪಿಒಗಳು ಈಗಾಗಲೇ ದೇಶದಲ್ಲಿ ಕಾರ್ಯನಿರ್ವಹಿಸುತ್ತಿವೆ. ಮೀನುಗಾರಿಕೆ ಕ್ಷೇತ್ರದಲ್ಲಿ 25 ಸಾವಿರಕ್ಕೂ ಹೆಚ್ಚು ಸಹಕಾರಿ ಘಟಕಗಳು ಕಾರ್ಯನಿರ್ವಹಿಸುತ್ತಿವೆ ಎಂದಿದ್ದಾರೆ.

ಇದನ್ನೂ ಓದಿ: ಯುಪಿ ಪೊಲೀಸ್ ನೇಮಕಾತಿ ಪರೀಕ್ಷೆ ರದ್ದು; 6 ತಿಂಗಳೊಳಗೆ ಮರು ಪರೀಕ್ಷೆಗೆ ಸಿಎಂ ಆದಿತ್ಯನಾಥ್ ಆದೇಶ

ಹೆಚ್ಚಿನ ಸಂಖ್ಯೆಯ ಮಹಿಳೆಯರು ಕೃಷಿ ಮತ್ತು ಡೈರಿ ಸಹಕಾರಿಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೃಷಿ ವ್ಯವಸ್ಥೆಗಳ ಆಧುನೀಕರಣವು ವಿಕಸಿತ್ ಭಾರತ್‌ಗೆ ಅತ್ಯಗತ್ಯ ಎಂದ ಮೋದಿ, ಅಮುಲ್ ಮತ್ತು ಲಿಜ್ಜತ್ ಪಾಪಡ್ ಯಶಸ್ಸಿನ ಕಥೆಗಳನ್ನು ಉಲ್ಲೇಖಿಸಿ ಅದು ಸಹಕಾರಿ ಸಂಸ್ಥೆಗಳ ಶಕ್ತಿ ಎಂದಿದ್ದಾರೆ. ಈ ಉದ್ಯಮಗಳಲ್ಲಿ ಮಹಿಳೆಯರ ಪ್ರಮುಖ ಪಾತ್ರವನ್ನು ಅವರು ಶ್ಲಾಘಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್