ಅಣ್ಣಾಮಲೈ, ತೇಜಸ್ವಿ ಸೂರ್ಯ ಸಾಧನೆ: ಯುವ ನಾಯಕರನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

ವಿವಿಧ ದೇಶಗಳ ಕ್ರೀಡಾಪಟುಗಳನ್ನು ಆಕರ್ಷಿಸಿವ ಐರನ್​ ಮ್ಯಾನ್​ ಓಟ ಗೋವಾದಲ್ಲಿ ನಡೆದಿದ್ದು, ಈ ಬಾರಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ತೇಜಸ್ವಿ ಸೂರ್ಯ ಜೊತೆಗೆ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ (Annamalai) ಸಹ ಭಾಗವಹಿಸಿದ್ದು ವಿಶೇಷವಾಗಿದೆ. ಇನ್ನು ಇವರಿಬ್ಬರ ಸಾಧನೆಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಣ್ಣಾಮಲೈ, ತೇಜಸ್ವಿ ಸೂರ್ಯ ಸಾಧನೆ: ಯುವ ನಾಯಕರನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ
ತೇಜಸ್ವಿ ಸೂರ್ಯ, ಅಣ್ಣಾಮಲೈ ಮತ್ತು ಪ್ರಧಾನಿ ಮೋದಿ

Updated on: Nov 09, 2025 | 10:14 PM

ನವದೆಹಲಿ, (ನವೆಂಬರ್ 09): ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರು ಸತತ 2ನೇ ವರ್ಷವೂ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ಮತ್ತು ಶಿಸ್ತಿಗೆ ಮಾದರಿಯಾಗಿದ್ದಾರೆ. ಈ ಬಾರಿ ತೇಜಸ್ವಿ ಸೂರ್ಯ ಜೊತೆಗೆ ಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಅಣ್ಣಾಮಲೈ ಭಾಗವಹಿಸಿದ್ದು, ಅವರೂ ಸಹ ಈ ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರತಿಕ್ರಿಯಿಸಿ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವಿಟ್ಟರ್​​ ಎಕ್ಸ್​​ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟದಲ್ಲಿ ನಮ್ಮ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದನ್ನು ನೋಡಿ ಸಂತೋಷವಾಯಿತು. ಇಂತಹ ಕಾರ್ಯಕ್ರಮಗಳು #FitIndia ಆಂದೋಲನಕ್ಕೆ ಕೊಡುಗೆ. ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು. ಈ ಐರನ್‌ಮ್ಯಾನ್ ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರಲ್ಲಿ ನಮ್ಮ ಪಕ್ಷದ ಯುವ ಸಹೋದ್ಯೋಗಿಗಳಾದ ಅಣ್ಣಾಮಲೈ ಮತ್ತು ತೇಜಸ್ವಿ ಸೂರ್ಯ ಸೇರಿದ್ದಾರೆ ಎನ್ನುವುದು ಸಂತೋಷವಾಯಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಯುವ ನಾಯಕರಲ್ಲಿ ಮತ್ತಷ್ಟು ಉತ್ಸಹ ತುಂಬಿದ್ದಾರೆ.

ಇದನ್ನೂ ಓದಿ: ಸತತ ಎರಡನೇ ಬಾರಿಗೆ ತೇಜಸ್ವಿ ಸೂರ್ಯ ಐರನ್‌ಮ್ಯಾನ್​​ ಓಟದಲ್ಲಿ ಸಾಧನೆ: ಅಣ್ಣಾಮಲೈ ಕೂಡ ಭಾಗಿ

ಈ ವರ್ಷದ ಐರನ್‌ಮ್ಯಾನ್‌ನಲ್ಲಿ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ (Annamalai) ಸಹ ಭಾಗವಹಿಸಿದ್ದು ವಿಶೇಷ. ಸಂಸದ ಸೂರ್ಯ ಅವರು ಸ್ಪರ್ಧೆಯ ಮೂರು ಕಠಿಣ ಹಂತಗಳಾದ 1.9 ಕಿ.ಮೀ ಈಜು, 90 ಕಿ.ಮೀ ಸೈಕ್ಲಿಂಗ್, ಮತ್ತು 21.1 ಕಿ.ಮೀ ಓಟವನ್ನು 7 ಗಂಟೆ 49 ನಿಮಿಷಗಳಲ್ಲಿ ಪೂರ್ಣಗೊಳಿಸಿದ್ದಾರೆ. ಈಜಲು ಸುಮಾರು 44 ನಿಮಿಷ, ಸೈಕ್ಲಿಂಗ್‌ಗೆ 3 ಗಂಟೆ 47 ನಿಮಿಷ ಮತ್ತು ಓಟಕ್ಕೆ 2 ಗಂಟೆ 54 ನಿಮಿಷಗಳನ್ನು ತೆಗೆದುಕೊಂಡರು. ಮತ್ತೊಂದೆಡೆ, ಅಣ್ಣಾಮಲೈ ಅವರು ಈ ಓಟವನ್ನು 8 ಗಂಟೆ 13 ನಿಮಿಷಗಳಲ್ಲಿ ಪೂರ್ಣಗೊಳಿಸಿದರು. ಇದೀಗ ಇವರ ಸಾಧನೆಗೆ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.

ಓಟದ ನಂತರ ಮಾತನಾಡಿದ ತೇಜಸ್ವಿ ಸೂರ್ಯ, ’50ಕ್ಕೂ ಹೆಚ್ಚು ದೇಶಗಳ ಕ್ರೀಡಾಪಟುಗಳನ್ನು ಆಕರ್ಷಿಸುವ ಐರನ್‌ಮ್ಯಾನ್ 70.3 ಗೋವಾ (Iron Man 70.3 Goa), ಭಾರತದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಇದು ದೈಹಿಕ ಮತ್ತು ಮಾನಸಿಕ ಸಾಮರ್ಥ್ಯದ ಅಂತಿಮ ಪರೀಕ್ಷೆಯಾಗಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಸುಧಾರಿಸಲು ನಾನು ಕಠಿಣ ತರಬೇತಿ ಪಡೆದಿದ್ದು, ಈ ಸವಾಲನ್ನು ಪೂರ್ಣಗೊಳಿಸಿರುವುದಕ್ಕೆ ಸಂತೋಷವಾಗಿದೆ ಎಂದರು.

Published On - 9:59 pm, Sun, 9 November 25