Narendra Modi: ಕಠಿಣ ಹೋರಾಟಕ್ಕೆ ಸಿದ್ಧರಾಗಿ: ಸಂಸದೀಯ ಸಭೆಯಲ್ಲಿ ಬಿಜೆಪಿ ನಾಯಕರಿಗೆ ಮೋದಿ ಕರೆ

ಕಠಿಣ ಹೋರಾಟಕ್ಕೆ ಸಿದ್ಧರಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ನಾಯಕರಿಗೆ ಕರೆ ನೀಡಿದ್ದಾರೆ. ಬಿಜೆಪಿ ಸಂಸದೀಯ ಸಭೆಯಲ್ಲಿ ಈ ಕುರಿತು ಮಾತನಾಡಿರುವ ಮೋದಿ, ಪಕ್ಷವು ಎಷ್ಟು ಬೆಳೆದು ಯಶಸ್ಸಿನ ಹಾದಿಯಲ್ಲಿದ್ದರೂ ಅಷ್ಟೇ ಪ್ರತಿಪಕ್ಷಗಳ ದಾಳಿಯನ್ನೂ ಎದುರಿಸಬೇಕಾಗುತ್ತದೆ.

Narendra Modi: ಕಠಿಣ ಹೋರಾಟಕ್ಕೆ ಸಿದ್ಧರಾಗಿ: ಸಂಸದೀಯ ಸಭೆಯಲ್ಲಿ ಬಿಜೆಪಿ ನಾಯಕರಿಗೆ ಮೋದಿ ಕರೆ
ಪ್ರಧಾನಿ ನರೇಂದ್ರ ಮೋದಿ

Updated on: Mar 28, 2023 | 1:02 PM

ಕಠಿಣ ಹೋರಾಟಕ್ಕೆ ಸಿದ್ಧರಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ನಾಯಕರಿಗೆ ಕರೆ ನೀಡಿದ್ದಾರೆ. ಬಿಜೆಪಿ ಸಂಸದೀಯ ಸಭೆಯಲ್ಲಿ ಈ ಕುರಿತು ಮಾತನಾಡಿರುವ ಮೋದಿ, ಪಕ್ಷವು ಎಷ್ಟು ಬೆಳೆದು ಯಶಸ್ಸಿನ ಹಾದಿಯಲ್ಲಿದ್ದರೂ ಅಷ್ಟೇ ಪ್ರತಿಪಕ್ಷಗಳ ದಾಳಿಯನ್ನೂ ಎದುರಿಸಬೇಕಾಗುತ್ತದೆ. ಕಠಿಣ ಹೋರಾಟಕ್ಕೆ ಸಿದ್ಧರಾಗಿ ಎಂದು ಮೋದಿ ಹೇಳಿದ್ದಾರೆ. ಈಶಾನ್ಯ ರಾಜ್ಯಗಳಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಮೂರು ಪ್ರಮುಖ ವಿಜಯಗಳನ್ನು ಗಳಿಸಿದ್ದಕ್ಕಾಗಿ ಬಿಜೆಪಿ ಸಂಸದರು ಮೊದಲು ಪ್ರಧಾನಿ ಮೋದಿಯವರನ್ನು ಅಭಿನಂದಿಸಿದರು.

ಮೂಲಗಳ ಪ್ರಕಾರ, ಬಿಜೆಪಿ ಹೆಚ್ಚು ಯಶಸ್ಸು ಸಾಧಿಸಿದರೆ, ಇನ್ನೊಂದು ಕಡೆಯಿಂದ ದಾಳಿಗಳು ಹೆಚ್ಚಾಗುತ್ತವೆ. ಕಠಿಣ ಹೋರಾಟಕ್ಕೆ ಸಿದ್ಧರಾಗಬೇಕು ಎಂದು ಪ್ರಧಾನಿ ಹೇಳಿರುವ ಬಗ್ಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: Ranjit Savarkar: ಸಾವರ್ಕರ್ ಕ್ಷಮೆ ಕೇಳಿದ್ದರು ಎಂಬುದನ್ನು ಸಾಬೀತುಪಡಿಸಿ: ರಾಹುಲ್​ ಗಾಂಧಿಗೆ ಸಾರ್ವಕರ್ ಮೊಮ್ಮಗ ಸವಾಲು

ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ವಿರೋಧ ಪಕ್ಷಗಳು ಬಣ್ಣಿಸುತ್ತಿದ್ದರೆ, ಬಿಜೆಪಿ ಮತ್ತು ಎನ್‌ಡಿಎ ಸಂಸದರು ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ವೀರ್ ಸಾವರ್ಕರ್ ಮತ್ತು ಒಬಿಸಿ ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.

ಪ್ರತಿಪಕ್ಷಗಳು ಸೋಮವಾರ ಕಪ್ಪು ವಸ್ತ್ರ ಧರಿಸಿ ಪ್ರತಿಭಟನೆ ನಡೆಸಿ ಸಂಸತ್‌ ಸಂಕೀರ್ಣದಿಂದ ವಿಜಯ್‌ ಚೌಕ್‌ ವರೆಗೆ ಕೇಂದ್ರದ ವಿರುದ್ಧ ಬೇಡಿಕೆಗೆ ಆಗ್ರಹಿಸಿ ಮೆರವಣಿಗೆ ನಡೆಸಿದರು. ಸರ್ಕಾರದ ಮುಂದೆ ತಲೆಬಾಗದವರನ್ನು ಬಗ್ಗಿಸಲು ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡಿದೆ ಎಂದು ಖರ್ಗೆ ಆರೋಪಿಸಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ