ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಮತ್ತು ಅವರ ಪತ್ನಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸುತ್ತಿರುವುದನ್ನು ವೀಡಿಯೋದಲ್ಲಿ ನೋಡಬಹುದು. ನಂತರ, ಪ್ರಧಾನಿ ಮೋದಿ ಗಣೇಶನಿಗೆ ಆರತಿ ಮಾಡುವುದನ್ನು ಕಾಣಬಹುದು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಗಣಪತಿ ಪೂಜೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
Follow us
ಸುಷ್ಮಾ ಚಕ್ರೆ
|

Updated on: Sep 11, 2024 | 10:11 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನಿವಾಸದಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರಧಾನಮಂತ್ರಿ ಮೋದಿ ಮುಖ್ಯ ನ್ಯಾಯಮೂರ್ತಿ ಮತ್ತು ಅವರ ಪತ್ನಿ ಕಲ್ಪನಾ ದಾಸ್ ಅವರೊಂದಿಗೆ ದೇವರಿಗೆ ಪೂಜೆ ಮಾಡುತ್ತಾ, ತಮ್ಮ ಪೂಜೆ ಸಲ್ಲಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಅವರ ದೆಹಲಿಯ ನಿವಾಸದಲ್ಲಿ ಗಣೇಶ ಪೂಜೆ ಆಚರಣೆಯಲ್ಲಿ ಪಾಲ್ಗೊಂಡರು. ಸಿಜೆಐ ಚಂದ್ರಚೂಡ್ ಮತ್ತು ಅವರ ಪತ್ನಿ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ನಂತರ, ಪ್ರಧಾನಿ ಗಣೇಶನಿಗೆ ಆರತಿ ಮಾಡುವುದನ್ನು ಕಾಣಬಹುದು.

ಇದನ್ನೂ ಓದಿ: ಸೆಮಿಕಾನ್ ಇಂಡಿಯಾ 2024ಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ; ಮೂರು ದಿನದ ಸಮಾವೇಶದಲ್ಲಿ ಜಾಗತಿಕ ಸೆಮಿಕಂಡಕ್ಟರ್ ದಿಗ್ಗಜರ ಸಮಾಗಮ

ಸಿಜೆಐ ಚಂದ್ರಚೂಡ್ ಮಹಾರಾಷ್ಟ್ರ ಮೂಲದವರಾಗಿದ್ದಾರೆ. ಅಲ್ಲಿ ಗಣೇಶ ಚತುರ್ಥಿ ಪ್ರಮುಖ ಹಬ್ಬವಾಗಿದೆ. ಮಹಾರಾಷ್ಟ್ರದಲ್ಲಿ ಈ ಹಬ್ಬವನ್ನು ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ. ಮುಂಬೈನಲ್ಲಿ ಜನಿಸಿದ ಚಂದ್ರಚೂಡ್ ಅವರು ತಮ್ಮ ಆರಂಭಿಕ ಜೀವನವನ್ನು ಮಹಾರಾಷ್ಟ್ರದಲ್ಲಿ ಕಳೆದರು. ಅಲ್ಲಿ ಅವರ ಕಾನೂನು ಕ್ಷೇತ್ರದ ಪ್ರಯಾಣ ಪ್ರಾರಂಭವಾಯಿತು.

ಇದನ್ನೂ ಓದಿ: Ayushman Bharat: ಮೋದಿ ಸರ್ಕಾರದ ಮಹತ್ವದ ನಿರ್ಧಾರ; 70 ವರ್ಷ ಮೇಲ್ಪಟ್ಟವರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ

ಮುಂಬೈ ವಿಶ್ವವಿದ್ಯಾನಿಲಯದಲ್ಲಿ ಶಿಕ್ಷಣ ಪಡೆದ ಚಂದ್ರಚೂಡ್ ಅವರು ಹಾರ್ವರ್ಡ್ ಕಾನೂನು ಶಾಲೆಯಲ್ಲಿ ಹೆಚ್ಚಿನ ಅಧ್ಯಯನವನ್ನು ಮುಂದುವರಿಸುವ ಮೊದಲು ಎಲ್ಎಲ್​ಬಿಯನ್ನು ಪೂರ್ಣಗೊಳಿಸಿದರು, ಎಲ್ಎಲ್ಎಂ ಪದವಿ ಗಳಿಸಿದರು. ಅವರ ವಕೀಲ ವೃತ್ತಿಯು ಮುಂಬೈನಲ್ಲಿ ಪ್ರಾರಂಭವಾಯಿತು. ಅಲ್ಲಿ ಅವರು ಆರಂಭದಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ವಕೀಲರನ್ನು ಅಭ್ಯಾಸ ಮಾಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ