AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Yaas: ಯಾಸ್ ಚಂಡಮಾರುತ ಎದುರಿಸಲು ಕೈಗೊಂಡ ಸಿದ್ಧತೆಗಳನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ

ಯಾಸ್’ ಚಂಡಮಾರುತವು ಪ್ರತಿ ಗಂಟೆಗೆ 155-165 ಕಿ.ಮೀ.ನಿಂದ ಹಿಡಿದು 185 ಕಿ.ಮೀ. ವೇಗದಲ್ಲಿ ಸಾಗಿ ಮೇ. 26ರ ಸಂಜೆ ವೇಳೆಗೆ ಪಶ್ಚಿಮ ಬಂಗಾಳ ಮತ್ತು ಉತ್ತರ ಒಡಿಶಾ ಕರಾವಳಿಯನ್ನು ತಲುಪುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಪಶ್ಚಿಮ ಬಂಗಾಳ ಮುತ್ತು ಉತ್ತರ ಒಡಿಶಾದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ.

Cyclone Yaas: ಯಾಸ್ ಚಂಡಮಾರುತ ಎದುರಿಸಲು ಕೈಗೊಂಡ ಸಿದ್ಧತೆಗಳನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
guruganesh bhat
|

Updated on:May 23, 2021 | 9:40 PM

Share

ದೆಹಲಿ: ‘ಯಾಸ್’ ಚಂಡಮಾರುತದಿಂದ ಎದುರಾಗಲಿರುವ ಪರಿಸ್ಥಿತಿಯನ್ನು ನಿಭಾಯಿಸಲು ಸಂಬಂಧಿಸಿದ ರಾಜ್ಯಗಳು ಮತ್ತು ಕೇಂದ್ರ ಸಚಿವಾಲಯಗಳು ಕೈಗೊಂಡಿರುವ ಸಿದ್ಧತಾ ಕ್ರಮಗಳ ಪರಾಮರ್ಶನೆಗೆ ಇಂದು  ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ‘ಯಾಸ್’ ಚಂಡಮಾರುತವು ಪ್ರತಿ ಗಂಟೆಗೆ 155-165 ಕಿ.ಮೀ.ನಿಂದ ಹಿಡಿದು 185 ಕಿ.ಮೀ. ವೇಗದಲ್ಲಿ ಸಾಗಿ ಮೇ. 26ರ ಸಂಜೆ ವೇಳೆಗೆ ಪಶ್ಚಿಮ ಬಂಗಾಳ ಮತ್ತು ಉತ್ತರ ಒಡಿಶಾ ಕರಾವಳಿಯನ್ನು ತಲುಪುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಪಶ್ಚಿಮ ಬಂಗಾಳ ಮುತ್ತು ಉತ್ತರ ಒಡಿಶಾದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಪಶ್ಚಿಮ ಬಂಗಾಳ ಮತ್ತು ಒಡಿಶಾದ ಕರಾವಳಿ ಪ್ರದೇಶದಲ್ಲಿ ಚಂಡಮಾರುತ ಸುಮಾರು 2 ರಿಂದ 4 ಮೀಟರ್ ಉಲ್ಬಣಗೊಳ್ಳುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಸಂಬಂಧಿಸಿದ ರಾಜ್ಯಗಳಿಗೆ ಹವಾ ಮುನ್ಸೂಚನೆಯ ತಾಜಾ ಮಾಹಿತಿಯನ್ನು ಐಎಂಡಿ ನಿರಂತರವಾಗಿ ನೀಡುತ್ತಿದೆ.

2021ರ ಮೇ 22ರಂದು ಸಂಪುಟ ಕಾರ್ಯದರ್ಶಿಗಳು ಸಂಬಂಧಿಸಿದ ಎಲ್ಲಾ ಕರಾವಳಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹಾಗೂ ಕೇಂದ್ರ ಸಚಿವಾಲಯಗಳು/ ಸಂಸ್ಥೆಗಳೊಂದಿಗೆ ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿ (ಎನ್ ಸಿಎಂಸಿ) ಸಭೆಯನ್ನು ನಡೆಸಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಲಾಯಿತು. ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ದಿನದ 24 ಗಂಟೆಯೂ ಪರಿಸ್ಥಿತಿಯನ್ನು ಪರಾಮರ್ಶಿಸುತ್ತಿದೆ. ಸಂಬಂಧಿಸಿದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರದ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಎಂಎಚ್ಎ ಈಗಾಗಲೇ ಎಲ್ಲಾ ರಾಜ್ಯಗಳಿಗೆ ಮುಂಗಡವಾಗಿ ಎಸ್​ಡಿಆರ್​ಎಫ್​ನ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಿದೆ. ಎಸ್​ಡಿಆರ್​ಎಫ್ ದೋಣಿ, ಮರ ಕಟಾವು ಯಂತ್ರ, ದೂರಸಂಪರ್ಕ ಉಪಕರಣಗಳು ಇತ್ಯಾದಿ ಹೊಂದಿದ 46 ತಂಡಗಳನ್ನು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿಯೋಜಿಸಿದೆ. ಅಲ್ಲದೆ ಇಂದು 13 ತಂಡಗಳನ್ನು ವಿಮಾನದ ಮೂಲಕ ರವಾನಿಸಲಾಗಿದೆ ಹಾಗೂ ಹತ್ತು ತಂಡಗಳನ್ನು ಸನ್ನದ್ಧವಾಗಿಟ್ಟಿದೆ.

ಭಾರತೀಯ ಕರಾವಳಿ ಪಡೆ ಮತ್ತು ನೌಕಾಪಡೆ ಪರಿಹಾರ, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳಿಗೆ ಹಡಗುಗಳು ಹಾಗೂ ಹೆಲಿಕಾಪ್ಟರ್ ಗಳನ್ನು ನಿಯೋಜಿಸಿದೆ. ಸೇನೆಯ ಇಂಜಿನಿಯರಿಂಗ್ ಕಾರ್ಯಪಡೆ ಘಟಕ ಮತ್ತು ವಾಯುಪಡೆ ಹಡಗುಗಳು ಮತ್ತು ರಕ್ಷಣಾ ಉಪಕರಣಗಳ ಸಹಿತ ನಿಯೋಜನೆಗೆ ಸನ್ನದ್ಧವಾಗಿವೆ. ಮಾನವೀಯ ನೆರವು ಮತ್ತು ಪ್ರಕೋಪ ಪರಿಹಾರ ಘಟಕಗಳನ್ನು ಹೊಂದಿರುವ ಏಳು ಹಡಗುಗಳನ್ನು ಪಶ್ಚಿಮ ಕರಾವಳಿಯಲ್ಲಿ ಸನ್ನದ್ಧವಾಗಿಡಲಾಗಿದೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸಮುದ್ರದಲ್ಲಿನ ಎಲ್ಲಾ ತೈಲ ಸ್ಥಾವರಗಳ ಸುರಕ್ಷತೆಗೆ ಕ್ರಮಗಳನ್ನು ಕೈಗೊಂಡಿದೆ ಮತ್ತು ಸಮುದ್ರದಲ್ಲಿದ್ದ ತನ್ನ ಹಡಗುಗಳನ್ನು ಸುರಕ್ಷಿತವಾಗಿ ಬಂದರಿಗೆ ವಾಪಸ್ ಕರೆಸಿಕೊಂಡಿದೆ. ಇಂಧನ ಸಚಿವಾಲಯ ತನ್ನ ತುರ್ತು ಪ್ರತಿಸ್ಪಂದನಾ ವ್ಯವಸ್ಥೆಯನ್ನು ಸಕ್ರಿಯಗೊಳಿಸಿದೆ ಮತ್ತು ತಕ್ಷಣ ವಿದ್ಯುತ್ ಮರು ಸ್ಥಾಪನೆಗೆ ಟ್ರಾನ್ಸ್ ಫಾರ್ಮರ್ ಗಳು, ಡಿಜಿ ಸೆಟ್ ಮತ್ತು ಉಪಕರಣಗಳನ್ನು ಸಿದ್ಧವಾಗಿ ಇಟ್ಟುಕೊಂಡಿದೆ. ದೂರಸಂಪರ್ಕ ಸಚಿವಾಲಯ ಎಲ್ಲಾ ಟೆಲಿಕಾಂ ಟವರ್ ಗಳು ಮತ್ತು ವಿನಿಮಯ ಕೇಂದ್ರಗಳ ಮೇಲೆ ನಿಗಾ ಇರಿಸಿದ್ದು, ದೂರಸಂಪರ್ಕ ಜಾಲದ ಮರುಸ್ಥಾಪನೆಗೆ ಸಂಪೂರ್ಣವಾಗಿ ಸಜ್ಜಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಾಧಿತವಾಗಲಿರುವ ಪ್ರದೇಶಗಳಿಗೆ ಸೂಚನೆಯನ್ನು ನೀಡಿ, ಬಾಧಿತವಾಗಲಿರುವ ಪ್ರದೇಶದಲ್ಲಿ ಕೊವಿಡ್ ನಿರ್ವಹಣೆಗೆ ಆರೋಗ್ಯ ವಲಯವನ್ನು ಸನ್ನದ್ಧವಾಗಿಟ್ಟುಕೊಳ್ಳುವಂತೆ ಸೂಚಿಸಿದೆ. ಬಂದರು, ಶಿಪ್ಪಿಂಗ್ ಮತ್ತು ಒಳನಾಡು ಸಚಿವಾಲಯ ಎಲ್ಲಾ ಮೀನುಗಾರಿಕೆ ಹಡಗುಗಳ ಭದ್ರತೆಗೆ ಕ್ರಮ ಕೈಗೊಂಡಿದೆ ಮತ್ತು ತುರ್ತು ಹಡಗುಗಳನ್ನು(ಟಗ್ಸ್) ನಿಯೋಜಿಸಿದೆ.

ಎನ್ ಡಿಆರ್ ಎಫ್ ರಾಜ್ಯಗಳಿಗೆ ಆಯಕಟ್ಟಿನ ಜಾಗಗಳಿಂದ ಜನರನ್ನು ಸ್ಥಳಾಂತರಿಸಲು ಕೈಗೊಂಡಿರುವ ಸಿದ್ಧತೆಗಳಿಗೆ ನೆರವು ನೀಡುತ್ತಿದೆ ಮತ್ತು ಚಂಡಮಾರುತ ಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬ ಕುರಿತು ಸಮುದಾಯ ಜಾಗೃತಿ ಅಭಿಯಾನಗಳನ್ನು ನಿರಂತರವಾಗಿ ನಡೆಸುತ್ತಿದೆ.

ಹೆಚ್ಚು ಅಪಾಯವಿರುವ ಪ್ರದೇಶಗಳಿಂದ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ರಾಜ್ಯಗಳ ಜೊತೆ ನಿಕಟ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೆ ಅವರು ಸಮುದ್ರ ತೀರದ ಚಟುವಟಿಕೆಗಳಲ್ಲಿ ತೊಡಗಿರುವವರ ಸಕಾಲಿಕ ಸ್ಥಳಾಂತರವನ್ನು ಖಾತ್ರಿಪಡಿಸಲು ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿದ್ಯುತ್ ಪೂರೈಕೆ ಮತ್ತು ಸಂವಹನ ಜಾಲ ಕಡಿತಗೊಂಡಾಗ ಅದರ ಮರುಸ್ಥಾಪನೆ ಕ್ಷಿಪ್ರವಾಗಿ ಮತ್ತು ಕನಿಷ್ಠ ಸಮಯದಲ್ಲಿ ಆಗುವ ಅಗತ್ಯವಿದೆ ಎಂದು ಅವರು ಹೇಳಿದರು. ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಮತ್ತು ಲಸಿಕೀಕರಣದಲ್ಲಿ ಯಾವುದೇ ವ್ಯತ್ಯಯವಾಗದಂತೆ ರಾಜ್ಯ ಸರ್ಕಾರಗಳೊಂದಿಗೆ ಸೂಕ್ತ ಸಮನ್ವಯ ಮತ್ತು ಯೋಜನೆಗಳನ್ನು ಖಾತ್ರಿಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಯಾವುದೇ ಸೀಮಾತೀತ ಸಮನ್ವಯ ಮತ್ತು ಉತ್ತಮ ಪದ್ಧತಿಗಳಿಂದ ಕಲಿತಿರುವ ಆಧಾರದ ಮೇಲೆ ಯೋಜನೆ ಮತ್ತು ಸಿದ್ಧತಾ ಪ್ರಕ್ರಿಯೆಗಳಲ್ಲಿ ಜಿಲ್ಲಾಡಳಿತಗಳನ್ನು ಸೇರ್ಪಡೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ, ಚಂಡಮಾರುತದ ಸಮಯದಲ್ಲಿ ಯಾವ ಕೆಲಸಗಳನ್ನು ಮಾಡಬೇಕು ಮತ್ತು ಯಾವುದನ್ನು ಮಾಡಬಾರದು ಎಂಬ ಮಾರ್ಗಸೂಚಿಗಳು ಮತ್ತು ಸಲಹೆಗಳನ್ನು ಸುಲಭವಾಗಿ ಅರ್ಥವಾಗುವಂತೆ ಸಿದ್ಧಪಡಿಸಿ, ಅವುಗಳನ್ನು ಬಾಧಿತವಾಗುವ ಜಿಲ್ಲೆಗಳ ಜನರಿಗೆ ಸ್ಥಳೀಯ ಭಾಷೆಯಲ್ಲಿ ದೊರಕಿಸಿ ಕೊಡಬೇಕು ಎಂದರು. ಕರಾವಳಿಯ ಸಮುದಾಯ, ಕೈಗಾರಿಕೆಗಳು ಮತ್ತಿತರ ಭಾಗೀದಾರರನ್ನು ನೇರವಾಗಿ ತಲುಪುವ ಮೂಲಕ ಮತ್ತು ಅವರನ್ನು ಸಂವೇದನೆಗೊಳಿಸುವ ಮೂಲಕ ತೊಡಗಿಸಿಕೊಳ್ಳುವ ಅಗತ್ಯವಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ, ಗೃಹ ವ್ಯವಹಾರಗಳ ಖಾತೆ ರಾಜ್ಯ ಸಚಿವರು, ಸಂಪುಟ ಕಾರ್ಯದರ್ಶಿ, ಗೃಹ, ದೂರಸಂಪರ್ಕ, ಮೀನುಗಾರಿಕೆ, ನಾಗರಿಕ ವಿಮಾನಯಾನ, ಇಂಧನ, ಬಂದರು, ಶಿಪ್ಪಿಂಗ್ ಮತ್ತು ಒಳನಾಡು, ಭೂವಿಜ್ಞಾನಗಳ ಸಚಿವಾಲಯಗಳು/ಇಲಾಖೆಗಳ ಕಾರ್ಯದರ್ಶಿಗಳು, ರೈಲ್ವೆ ಮಂಡಳಿ ಅಧ್ಯಕ್ಷರು, ಎನ್ ಡಿಎಂಎ ಸದಸ್ಯ ಕಾರ್ಯದರ್ಶಿ ಮತ್ತು ಸದಸ್ಯರು, ಐಎಂಡಿ ಮತ್ತು ಎನ್ ಡಿಆರ್ ಎಫ್ ನ ಮಹಾ ನಿರ್ದೇಶಕರು ಹಾಗೂ ಪಿಎಂಒ, ಎಂಎಚ್ಎ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಕೊವಿಡ್ ಸೋಂಕಿನಿಂದ ರಕ್ಷಿಸಲು ಲಸಿಕೆಯ 3ನೇ ಡೋಸ್ ನೀಡಬೇಕು ಎಂದ ಮಾಡೆರ್ನಾ ಕಂಪನಿಯ ಸಿಇಒ

Bengaluru Air: ಲಾಕ್​ಡೌನ್ ಪರಿಣಾಮ: ಬೆಂಗಳೂರು ನಗರದಲ್ಲಿ ಗಾಳಿಯ ಶುದ್ಧತೆ ಹೆಚ್ಚಳ

(PM Narendra Modi attends high level meeting about Cyclone Yaas)

Published On - 9:38 pm, Sun, 23 May 21

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ