ಬಾಂಗ್ಲಾದೇಶಕ್ಕೆ ಪ್ರಧಾನಿ ಮೋದಿ ಭೇಟಿ; ಪಶ್ಚಿಮ ಬಂಗಾಳ ಮತದಾರರ ಮೇಲೆ ಪ್ರಭಾವ ಸಾಧ್ಯತೆ

West Bengal Elections 2021: ಕೊರೊನಾ ನಂತರ ಭಾರತದ ಪ್ರಧಾನಿ ಸೇರಿ ಇತರ ರಾಷ್ಟ್ರಗಳ ನಾಯಕರು ದೇಶಕ್ಕೆ ಭೇಟಿ ನೀಡುತ್ತಿರುವುದು ಐತಿಹಾಸಿಕ ಘಳಿಗೆ ಎಂದೇ ಬಾಂಗ್ಲಾದೇಶ ವ್ಯಾಖ್ಯಾನಿಸಿದೆ.

ಬಾಂಗ್ಲಾದೇಶಕ್ಕೆ ಪ್ರಧಾನಿ ಮೋದಿ ಭೇಟಿ; ಪಶ್ಚಿಮ ಬಂಗಾಳ ಮತದಾರರ ಮೇಲೆ ಪ್ರಭಾವ ಸಾಧ್ಯತೆ
ನರೇಂದ್ರ ಮೋದಿ
Follow us
guruganesh bhat
| Updated By: shruti hegde

Updated on: Mar 18, 2021 | 1:58 PM

ದೆಹಲಿ: ಬಾಂಗ್ಲಾದೇಶದ ಸುವರ್ಣ ಮಹೋತ್ಸವ ಮತ್ತು ಬಂಗಬಂಧು ಶೇಖ್ ಮುಜೀಬುರ್ ರಹಮಾನ್ ಅವರ ಜನ್ಮಶತಮಾನೋತ್ಸವದ ನಿಮಿತ್ತ  ಮಾರ್ಚ್ 26ರಂದು  ಬಾಂಗ್ಲಾದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅಲ್ಲದೇ ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿರುವ ಮಾರ್ಚ್ 27ರಂದು ಬಾಂಗ್ಲಾದೇಶದ ಕೆಲವು ಧಾರ್ಮಿಕ ಸ್ಥಳಗಳಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಅವರ ಈ ನಡೆ ಬಂಗಾಳ ಮತದಾರರ ಮೇಲೆ ಪ್ರಭಾವ ಬೀರುವ ಗಾಢ ಉದ್ದೇಶ ಹೊಂದಿದೆ ಎಂಬ ವ್ಯಾಖ್ಯಾನ ಕೇಳಿಬಂದಿದೆ.

ಢಾಕಾ ಸಮೀಪದ ಓರ್ಖಾಂಡಿ ಮಾತುವಾ ದೇವಸ್ಥಾನ ಮತ್ತು ಜೆಸ್ಸೋರೇಶ್ವರಿ ಕಾಳಿ ದೇಗುಲಕ್ಕೆ ಭೇಟಿ ನೀಡಲಿರುವ ಪ್ರಧಾನಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಇದು ಅದೇ ದಿನ ನಡೆಯಲಿರುವ ಪಶ್ಚಿಮ ಬಂಗಾಳದ ಚುನಾವಣೆಯ ಮೊದಲ ಹಂತವನ್ನೂ ಸೇರಿ, ಮುಂದಿನ 7 ಹಂತಗಳ ಮೇಲೂ ಪ್ರಭಾವ ಬೀರುವ ಸಾಧ್ಯತೆಗಳು ಹೆಚ್ಚಿವೆ. ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಮೊದಲ ಬಾರಿಗೆ ಹೊರ ದೇಶದ ಗಣ್ಯರೊಬ್ಬರು ಬಾಂಗ್ಲಾದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಾಂಗ್ಲಾದೇಶದ ಪಾಲಿಗೆ ಮಹತ್ವದ್ದಾಗಿ ಪರಿಣಮಿಸಲಿದೆ.

ಮಾರ್ಚ್ 26ರಂದು ಬಾಂಗ್ಲಾದೇಶದ ಜತೆಗೆ ಮೂರು ಒಡಂಬಡಿಕೆಗಳಿಗೆ ಪ್ರಧಾನಿ ಸಹಿ ಹಾಕುವ ಸಾಧ್ಯತೆಗಳಿವೆ. ವಿಪತ್ತು ನಿರ್ವಹಣೆ ಕೈಗೊಳ್ಳುವಲ್ಲಿ ಮತ್ತು ಎರಡೂ ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಜತೆ ಸಹ ಸಹಭಾಗಿತ್ವದ ಕುರಿತು ಒಡಂಬಡಿಕೆಗೆ ಪ್ರಧಾನಿ ಒಪ್ಪಿಗೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೇ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಅಕ್ಕಪಕ್ಕದ ಮಾಲ್ಡೀವ್ಸ್, ಶ್ರೀಲಂಕಾ ಮತ್ತು ಭೂತಾನ್ ದೇಶಗಳ ಉನ್ನತ ಮಟ್ಟದ ನಾಯಕರು ಇದೇ ಅವಧಿಯಲ್ಲಿ ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದಾರೆ. ಈ ಎಲ್ಲ ದೇಶಗಳ ನಾಯಕರು ಒಟ್ಟಿಗೆ ಮಾತುಕತೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೊರೊನಾ ನಂತರ ಭಾರತದ ಪ್ರಧಾನಿ ಸೇರಿ ಇತರ ರಾಷ್ಟ್ರಗಳ ನಾಯಕರು ದೇಶಕ್ಕೆ ಭೇಟಿ ನೀಡುತ್ತಿರುವುದು ಐತಿಹಾಸಿಕ ಘಳಿಗೆ ಎಂದೇ ಬಾಂಗ್ಲಾದೇಶ ವ್ಯಾಖ್ಯಾನಿಸಿದೆ.

ಚುನಾವಣೆ ಯಾವಾಗ? ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 294 ಸೀಟುಗಳಿರುವ ವಿಧಾನಸಭೆಗೆ ಮಾರ್ಚ್ 27ರಿಂದ ಏಪ್ರಿಲ್29ರವರೆಗೆ ಚುನಾವಣೆ ನಡೆಯಲಿದ್ದು ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಈ ಬಾರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ನಡುವೆ ಸ್ಪರ್ಧೆ ನಡೆಯಲಿದೆ. ಈ ಚುನಾವಣೆಯಲ್ಲಿ 200ಕ್ಕಿಂತಲೂ ಹೆಚ್ಚು ಸೀಟು ಗೆಲ್ಲಲು ಬಿಜೆಪಿ ಹವಣಿಸುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಟಿಎಂಸಿಯಿಂದ ಹಲವಾರು ಸದಸ್ಯರು ಬಿಜೆಪಿಗೆ ಸೇರಿರುವುದರಿಂದ ಮತ್ತು ಟಿಎಂಸಿ ನಾಯಕರ ಮೇಲೆ ಭ್ರಷ್ಟಾಚಾರ ಆರೋಪಗಳಿರುವುದರಿಂದ ಈ ಚುನಾವಣೆ ಟಿಎಂಸಿ ಪಾಲಿಗೆ ನಿರ್ಣಾಯಕವಾಗಲಿದೆ. ಈ ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳು ಪೈಪೋಟಿ ನಡೆಸುತ್ತಿದ್ದವು. ಆದರೆ ಈ ಬಾರಿ ಬಿಜೆಪಿ ಮತ್ತು ಟಿಎಂಸಿ ನಡುವಿನ ಸ್ಪರ್ಧೆ ಎಂದೇ ಪಶ್ಚಿಮ ಬಂಗಾಳ ಚುನಾವಣೆಯನ್ನು ಬಿಂಬಿಸಲಾಗುತ್ತದೆ.

ಈಗಾಗಲೇ ಚುನಾವಣಾ ಪ್ರಚಾರಗಳು ಭರದಿಂದ ನಡೆಯುತ್ತಿದ್ದು ಬಿಜೆಪಿ ಮತ್ತು ಟಿಎಂಸಿ ನಾಯಕರು ಪರಸ್ಪರ ಟೀಕೆ-ವಾಗ್ವಾದಗಳಲ್ಲಿ ತೊಡಗಿಸಿಕೊಂಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಗೋಲ್ ಕೀಪರ್ ಆಗಲಿದ್ದು, ಬೇರೆ ಯಾವುದೇ ರಾಷ್ಟ್ರೀಯ ಪಕ್ಷಕ್ಕೆ ಒಂದೇ ಒಂದು ಗೋಲು ಬಾರಿಸಲು ಬಿಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅದೇ ವೇಳೆ ಮೆರವಣಿಗೆ, ರೋಡ್ ಶೋಗಳನ್ನು ನಡೆಸುತ್ತಾ ಅಬ್ಬರದ ಪ್ರಚಾರ ನಡೆಸುತ್ತಿರುವ ಬಿಜೆಪಿ, ಪಶ್ಚಿಮ ಬಂಗಾಳವನ್ನು ಸೋನರ್ ಬಾಂಗ್ಲಾ ಮಾಡುವುದಾಗಿ ಭರವಸೆ ನೀಡಿದೆ. ಮಮತಾ ಬ್ಯಾನರ್ಜಿ ಅವರ ಅಧಿಕಾರವಧಿಯಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಗಳನ್ನು ಎತ್ತಿ ತೋರಿಸಿ ಬಿಜೆಪಿ ವಾಗ್ದಾಳಿ ನಡೆಸುತ್ತಿದೆ.

ಒಂದು ವೇಳೆ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಗೆದ್ದರೆ ಮಮತಾ ಬ್ಯಾನರ್ಜಿ ಮೂರನೇ ಬಾರಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಲಿದ್ದಾರೆ. ಬಿಜೆಪಿ ಇಲ್ಲಿಯವರೆಗೆ ಯಾವುದೇ ಅಭ್ಯರ್ಥಿಯನ್ನು ಘೋಷಿಸಿಲ್ಲ. ಆದರೆ ಬಿಜೆಪಿ ಇಲ್ಲಿ ಖಾತೆ ತೆರೆದರೆ ಅದು ರಾಜಕೀಯವಲಯದಲ್ಲಿ ಮಹತ್ವದ ಬೆಳವಣಿಗೆಯಾಗಲಿದೆ.

ಪಶ್ಚಿಮ ಬಂಗಾಳದಲ್ಲಿನ ಪರಿಸ್ಥಿತಿ ಅವಲೋಕನ ನಡೆಸಲು ಚುನಾವಣಾ ಆಯೋಗದ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಬಂಗಾಳದಾದ್ಯಂತವಿರುವ 78,000 ಮತಗಟ್ಟೆಗಳನ್ನು ಇವರು ಪರಿಶೀಲಿಸಿದ್ದು, ಅಲ್ಲಿ ನೀರು, ಶೌಚಾಲಯ ಮತ್ತು ಇನ್ನಿತರ ಸೌಕರ್ಯಗಳು ಇರುವುದಾಗಿ ಖಾತ್ರಿ ಪಡಿಸಿದ್ದಾರೆ.

ಇದನ್ನೂ ಓದಿ:

West Bengal Elections 2021: ಟಿಎಂಸಿ ಸರ್ಕಾರ ಜನರಿಗೆ ಬಡತನ ಕರುಣಿಸಿದೆ – ಪ್ರಧಾನಿ ಮೋದಿ ಟೀಕೆ

ರಾಜಕೀಯ ವಿಶ್ಲೇಷಣೆ | ಪಶ್ಚಿಮ ಬಂಗಾಳದಲ್ಲಿ ಹಾಲಿ ಸಂಸದರು, ಅರ್ಥಶಾಸ್ತ್ರಜ್ಞ, ಸಿನಿಮಾ ತಾರೆಯರನ್ನು ಕಣಕ್ಕಿಳಿಸಿದ ಬಿಜೆಪಿ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ