ಮುಂಬೈ ಅಕ್ಟೋಬರ್ 26: ಮಹಾರಾಷ್ಟ್ರದ ಶಿರಡಿಯಲ್ಲಿರುವ ಶ್ರೀ ಸಾಯಿಬಾಬಾ ದೇವಸ್ಥಾನದಲ್ಲಿ (Shirdi Sai Temple) ಪ್ರಾರ್ಥನೆ ಸಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ (Narendra Modi) ತಮ್ಮ ಪ್ರವಾಸವನ್ನು ಪ್ರಾರಂಭಿಸಿದರು. ಅಲ್ಲಿ ಅವರು ನೂತನ “ದರ್ಶನ್ ಕ್ಯೂ ಕಾಂಪ್ಲೆಕ್ಸ್” ಅನ್ನು ಉದ್ಘಾಟಿಸಲಿದ್ದಾರೆ. ಆನಂತರ ನೀಲವಾಂಡೆ ಅಣೆಕಟ್ಟಿನ ಜಲಪೂಜೆಯನ್ನು ನೆರವೇರಿಸಲಿದ್ದು ಅಣೆಕಟ್ಟಿನ ಕಾಲುವೆ ನೆಟ್ವರ್ಕ್ ನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ನಂತರ ಶಿರಡಿಯಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ದರ್ಶನ ಕ್ಯೂ ಕಾಂಪ್ಲೆಕ್ಸ್: 2018 ರ ಅಕ್ಟೋಬರ್‌ನಲ್ಲಿ ಪ್ರಧಾನಿ ಮೋದಿ ಅವರು ಶಿರಡಿಯಲ್ಲಿ ಶಂಕುಸ್ಥಾಪನೆ ಮಾಡಿದ ಹೊಸ “ದರ್ಶನ್ ಕ್ಯೂ ಕಾಂಪ್ಲೆಕ್ಸ್” ಅತ್ಯಾಧುನಿಕ ಆಧುನಿಕ ಬೃಹತ್ ಕಟ್ಟಡವಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಭಕ್ತರಿಗೆ ಆರಾಮದಾಯಕವಾದ ಕಾಯುವ ಸ್ಥಳ ಇದಾಗಿದ್ದು,ಇದು 10,000 ಕ್ಕಿಂತ ಹೆಚ್ಚು ಭಕ್ತಾದಿಗಳಿಗೆ ಕುಳಿತುಕೊಳ್ಳಬಹುದಾದ ಆಸನಗಳಿರುವ ಹಲವಾರು ಕಾಯುವ ಹಾಲ್‌ಗಳನ್ನು ಹೊಂದಿದೆ.
#WATCH पीएम मोदी ने महाराष्ट्र के शिरडी में श्री साईबाबा समाधि मंदिर में पूजा-अर्चना की। महाराष्ट्र के राज्यपाल रमेश बैस, सीएम एकनाथ शिंदे और डिप्टी सीएम देवेंद्र फड़णवीस भी मौजूद हैं। pic.twitter.com/Bwz46PnCPx
— ANI_HindiNews (@AHindinews) October 26, 2023
85-ಕಿಮೀ ಕಾಲುವೆ ನೆಟ್ವರ್ಕ್: ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯ ನಿಲ್ವಾಂಡೆ ಅಣೆಕಟ್ಟಿನ ಎಡದಂಡೆ 85 ಕಿಮೀ ಕಾಲುವೆ ಜಾಲವನ್ನು ಪ್ರಧಾನಿ ಮೋದಿ ನಂತರ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ನೀರಿನ ಪೈಪ್ ವಿತರಣಾ ಜಾಲಗಳನ್ನು ಸುಗಮಗೊಳಿಸುವ ಮೂಲಕ ಏಳು ತಹಸಿಲ್‌ಗಳಿಂದ (ಆರು ಅಹಮದ್‌ನಗರ ಮತ್ತು ನಾಸಿಕ್ ಜಿಲ್ಲೆಯಿಂದ ಒಂದು) 182 ಹಳ್ಳಿಗಳಿಗೆ ಇದು ಪ್ರಯೋಜನವನ್ನು ನೀಡುತ್ತದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಸುಮಾರು 5,177 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ನೀಲವಾಂಡೆ ಅಣೆಕಟ್ಟಿನ ಕಲ್ಪನೆಯನ್ನು ಮೊದಲು 1970 ರಲ್ಲಿ ರೂಪಿಸಲಾಯಿತು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಸಾರ್ವಜನಿಕ ಕಾರ್ಯಕ್ರಮದ ಸಂದರ್ಭದಲ್ಲಿ, ಮೋದಿ ಅವರು “ನಮೋ ಶೋತ್ಕರಿ ಮಹಾಸನ್ಮಾನ್ ನಿಧಿ ಯೋಜನೆ” ಯನ್ನು ಪ್ರಾರಂಭಿಸಲಿದ್ದಾರೆ, ಇದು ಮಹಾರಾಷ್ಟ್ರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 86 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ವರ್ಷಕ್ಕೆ 6,000 ಹೆಚ್ಚುವರಿ ಮೊತ್ತವನ್ನು ಒದಗಿಸುವ ಮೂಲಕ ಪ್ರಯೋಜನ ನೀಡುತ್ತದೆ.
ಅಹ್ಮದ್‌ನಗರದ ಸಿವಿಲ್ ಆಸ್ಪತ್ರೆಯಲ್ಲಿ ಆಯುಷ್ ಆಸ್ಪತ್ರೆ, ಕುರ್ದುವಾಡಿ-ಲಾತೂರ್ ರಸ್ತೆ ರೈಲ್ವೆ ವಿಭಾಗದ ವಿದ್ಯುದ್ದೀಕರಣ (186 ಕಿಮೀ), , ಕುರ್ದುವಾಡಿ-ಲಾತೂರ್ ರಸ್ತೆ ರೈಲ್ವೇ ವಿಭಾಗದ ವಿದ್ಯುದ್ದೀಕರಣ (186 ಕಿಮೀ), ಸಾಂಗ್ಲಿಯಿಂದ ಬೋರ್ಗಾಂವ್ ವಿಭಾಗದಿಂದ NH-166 (ಪ್ಯಾಕೇಜ್-I) ಮತ್ತು ಇತರ ಯೋಜನೆಗಳ ಜೊತೆಗೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್‌ನ ಮನ್ಮಾಡ್ ಟರ್ಮಿನಲ್‌ನಲ್ಲಿ ಹೆಚ್ಚುವರಿ ಸೌಲಭ್ಯಗಳನ್ನು ಮೋದಿ ಉದ್ಘಾಟಿಸಲಿದ್ದಾರೆ.
ಇದನ್ನೂ ಓದಿ: Asian Para Games: ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತ; ಪ್ರಧಾನಿ ಮೋದಿ ಶ್ಲಾಘನೆ
ಮಹಾರಾಷ್ಟ್ರ ಪ್ರವಾಸವನ್ನು ಮುಗಿಸಿದ ನಂತರ, ಪ್ರಧಾನಿ ಮೋದಿ ಅವರು ಗೋವಾದ ಮಾರ್ಗಾವೋದಲ್ಲಿರುವ ಪಂಡಿತ್ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ 37 ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಅಲ್ಲಿ ಅವರು ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಗೋವಾ ಮೊಟ್ಟಮೊದಲ ಬಾರಿಗೆ ರಾಷ್ಟ್ರೀಯ ಕ್ರೀಡಾಕೂಟವನ್ನು ಆಯೋಜಿಸುತ್ತಿದೆ. ರಾಷ್ಟ್ರೀಯ ಕ್ರೀಡಾಕೂಟವು ಅಕ್ಟೋಬರ್ 26 ರಿಂದ ನವೆಂಬರ್ 9 ರವರೆಗೆ ನಡೆಯಲಿದೆ ಮತ್ತು 28 ಸ್ಥಳಗಳಲ್ಲಿ 43 ಕ್ರೀಡಾ ವಿಭಾಗಗಳಲ್ಲಿ ದೇಶಾದ್ಯಂತ 10,000 ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:49 pm, Thu, 26 October 23