PM Modi at 75: ಭಿನ್ನಾಭಿಪ್ರಾಯಗಳ ಬದಿಗಿಟ್ಟು ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ ಟ್ರಂಪ್
PM Narendra Modi Birthday: ಪ್ರಧಾನಿ ನರೇಂದ್ರ ಮೋದಿಗೆ ಇಂದು 75ನೇ ವರ್ಷದ ಹುಟ್ಟುಹಬ್ಬ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ಮಾಡಿ ಅವರಿಗೆ ಶುಭಾಶಯ ತಿಳಿಸಿದ್ದಾರೆ. ಭಾರತ-ಅಮೆರಿಕ ಸಂಬಂಧಗಳು ಮತ್ತು ಜಾಗತಿಕ ಸಮಸ್ಯೆಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದ್ದಾರೆ. ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬಯಕೆಯನ್ನು ಅಧ್ಯಕ್ಷ ಟ್ರಂಪ್ ವ್ಯಕ್ತಪಡಿಸಿದರು. ಈ ಹೆಜ್ಜೆಯನ್ನು ಭಾರತದೊಂದಿಗೆ ಸಂಬಂಧಗಳನ್ನು ಬಲಪಡಿಸಲು ಮತ್ತು ಹೊಸ ನಿರ್ದೇಶನ ನೀಡಲು ಅಮೆರಿಕದ ಪ್ರಯತ್ನವೆಂದು ಪರಿಗಣಿಸಲಾಗುತ್ತಿದೆ.

ನವದೆಹಲಿ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು 75ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ಭಾರತವು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಬಗ್ಗೆ ಟ್ರಂಪ್‌ಗೆ ಬೇಸರವಿದೆ, ಅದೇ ಕಾರಣಕ್ಕೆ ಭಾರತಕ್ಕೆ ಶೇ.50ರಷ್ಟು ಸುಂಕ ವಿಧಿಸಿದ್ದಾರೆ. ಈ ಎಲ್ಲಾ ಭಿನ್ನಾಭಿಪ್ರಾಯಗಳ ನಡುವೆ ಎಲ್ಲವನ್ನೂ ಮರೆತು ಟ್ರಂಪ್ ಪ್ರಧಾನಿಗೆ ಶುಭಾಶಯ ತಿಳಿಸಿದ್ದಾರೆ.
ಭಾರತ-ಅಮೆರಿಕ ಸಂಬಂಧಗಳು ಮತ್ತು ಜಾಗತಿಕ ಸಮಸ್ಯೆಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದ್ದಾರೆ. ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬಯಕೆಯನ್ನು ಅಧ್ಯಕ್ಷ ಟ್ರಂಪ್ ವ್ಯಕ್ತಪಡಿಸಿದರು. ಈ ಹೆಜ್ಜೆಯನ್ನು ಭಾರತದೊಂದಿಗೆ ಸಂಬಂಧಗಳನ್ನು ಬಲಪಡಿಸಲು ಮತ್ತು ಹೊಸ ನಿರ್ದೇಶನ ನೀಡಲು ಅಮೆರಿಕದ ಪ್ರಯತ್ನವೆಂದು ಪರಿಗಣಿಸಲಾಗುತ್ತಿದೆ.
ಪ್ರಧಾನಿ ಮೋದಿ ಅವರೊಂದಿಗಿನ ತಮ್ಮ ಸಂಭಾಷಣೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಅಧ್ಯಕ್ಷ ಟ್ರಂಪ್, ನನ್ನ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅದ್ಭುತವಾದ ಸಂಭಾಷಣೆ ನಡೆಯಿತು. ನಾನು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಅವರು ಅದ್ಭುತ ಕೆಲಸ ಮಾಡುತ್ತಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗೊಳಿಸಲು ನೀವು ನೀಡಿದ ಬೆಂಬಲಕ್ಕೆ ಧನ್ಯವಾದಗಳು ಎಂದು ಬರೆದಿದ್ದಾರೆ.
ಪ್ರಧಾನಿ ಮೋದಿ ಪೋಸ್ಟ್
Thank you, my friend, President Trump, for your phone call and warm greetings on my 75th birthday. Like you, I am also fully committed to taking the India-US Comprehensive and Global Partnership to new heights. We support your initiatives towards a peaceful resolution of the…
— Narendra Modi (@narendramodi) September 16, 2025
ಪ್ರಧಾನಿ ಮೋದಿ ಕೂಡ ಇದಕ್ಕೂ ಮುನ್ನ ಪ್ರಧಾನಿ ಮೋದಿ ಕೂಡ ಈ ಮಾಹಿತಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದರು. ಅಧ್ಯಕ್ಷ ಟ್ರಂಪ್‌ಗೆ ಧನ್ಯವಾದ ಹೇಳುತ್ತಾ, ನಿಮ್ಮ ಕರೆ ಮತ್ತು ಹುಟ್ಟುಹಬ್ಬದ ಶುಭಾಶಯಗಳಿಗೆ ಧನ್ಯವಾದಗಳು. ನಿಮ್ಮಂತೆಯೇ, ಭಾರತ-ಯುಎಸ್‌ಎ ನಡುವಿನ ಸಮಗ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ನಾನು ಸಂಪೂರ್ಣವಾಗಿ ಬದ್ಧನಾಗಿದ್ದೇನೆ. ಉಕ್ರೇನ್ ಸಂಘರ್ಷಕ್ಕೆ ಶಾಂತಿಯುತ ಪರಿಹಾರಕ್ಕಾಗಿ ನಿಮ್ಮ ಪ್ರಯತ್ನಗಳನ್ನು ನಾವು ಬೆಂಬಲಿಸುತ್ತೇವೆ ಎಂದು ಬರೆದಿದ್ದಾರೆ.
ಮತ್ತಷ್ಟು ಓದಿ: ‘ಮ್ಯಾಗ್ನೆಟ್ ನೀಡದಿದ್ದರೆ ಚೀನಾವನ್ನು ನಾಶ ಮಾಡುತ್ತೇವೆ’: ಮತ್ತೆ ಆರ್ಭಟಿಸಿದ ಡೊನಾಲ್ಡ್ ಟ್ರಂಪ್
ಪ್ರಧಾನಿ ಮೋದಿ ಬುಧವಾರ ತಮ್ಮ 75 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಮಧ್ಯಪ್ರದೇಶದಲ್ಲಿರುತ್ತಾರೆ. ಪ್ರಧಾನಿ ಮೋದಿ ಇಲ್ಲಿನ ಧಾರ್ ಜಿಲ್ಲೆಯ ಭೈನ್ಸೋಲಾ ಗ್ರಾಮಕ್ಕೆ ಭೇಟಿ ನೀಡಲಿದ್ದು, ಮಹಿಳೆಯರು ಮತ್ತು ಕುಟುಂಬಗಳಿಗೆ ಆರೋಗ್ಯ ಮತ್ತು ಪೋಷಣೆಯನ್ನು ಆಧರಿಸಿದ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ.
ಜವಳಿ ಉದ್ಯಮಕ್ಕಾಗಿ ಪಿಎಂ ಮಿತ್ರ ಪಾರ್ಕ್‌ನ ಅಡಿಪಾಯವನ್ನು ಅವರು ಹಾಕಲಿದ್ದಾರೆ. ದೇಶವನ್ನು ಜವಳಿ ಕೇಂದ್ರವನ್ನಾಗಿ ಮಾಡುವುದು ಮತ್ತು ರಫ್ತು ಮತ್ತು ಉದ್ಯೋಗವನ್ನು ಉತ್ತೇಜಿಸುವುದು ಈ ಮಾರ್ಕ್‌ನ ಉದ್ದೇಶವಾಗಿದೆ. ಸರ್ಕಾರವು ದೇಶಾದ್ಯಂತ ಅಂತಹ ಏಳು ಪಿಎಂ ಮಿತ್ರ ಪಾರ್ಕ್‌ಗಳನ್ನು ನಿರ್ಮಿಸುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




