PM Modi at 75: ಪ್ರಧಾನಿ ನರೇಂದ್ರ ಮೋದಿ ಜನ್ಮದಿನಕ್ಕೆ ಶುಭ ಕೋರಿದ ವಿರೋಧ ಪಕ್ಷದ ನಾಯಕರು

ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ 75ನೇ ಜನ್ಮದಿನಕ್ಕೆ ವಿಪಕ್ಷ ನಾಯಕರು ಶುಭಾಶಯ ಕೋರಿದ್ದಾರೆ. ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಂಸದ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಗಣ್ಯರು ಶುಭಾಶಯ ತಿಳಿಸಿದ್ದಾರೆ. ಪ್ರಧಾನಿ ಮೋದಿ ಇಂದು ತಮ್ಮ 75 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರು ಸೆಪ್ಟೆಂಬರ್ 17, 1950 ರಂದು ಉತ್ತರ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ವಡ್ನಗರ ಎಂಬ ಸಣ್ಣ ಪಟ್ಟಣದಲ್ಲಿ ಜನಿಸಿದರು.

PM Modi at 75: ಪ್ರಧಾನಿ ನರೇಂದ್ರ ಮೋದಿ ಜನ್ಮದಿನಕ್ಕೆ ಶುಭ ಕೋರಿದ ವಿರೋಧ ಪಕ್ಷದ ನಾಯಕರು
ಮೋದಿ, ಖರ್ಗೆ, ರಾಹುಲ್ ಗಾಂಧಿ
Image Credit source: NDTV

Updated on: Sep 17, 2025 | 11:43 AM

ವದೆಹಲಿ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ 75ನೇ ಜನ್ಮದಿನಕ್ಕೆ ವಿಪಕ್ಷ ನಾಯಕರು ಶುಭಾಶಯ ಕೋರಿದ್ದಾರೆ. ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಂಸದ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಗಣ್ಯರು ಶುಭಾಶಯ ತಿಳಿಸಿದ್ದಾರೆ. ಪ್ರಧಾನಿ ಮೋದಿ ಇಂದು ತಮ್ಮ 75 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರು ಸೆಪ್ಟೆಂಬರ್ 17, 1950 ರಂದು ಉತ್ತರ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ವಡ್ನಗರ ಎಂಬ ಸಣ್ಣ ಪಟ್ಟಣದಲ್ಲಿ ಜನಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಮತ್ತು ಆರೋಗ್ಯ ಉತ್ತಮವಾಗಿರಲಿ ಎಂದು ಹಾರೈಸುತ್ತೇನೆ ಎಂದು ರಾಹುಲ್ ಗಾಂಧಿ ಸಂದೇಶದಲ್ಲಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಪೋಸ್ಟ್ ಮಾಡಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ 75 ನೇ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ರೆಡ್ಡಿ ಪ್ರಧಾನಿಯವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ರಾಷ್ಟ್ರ ಸೇವೆ ಮಾಡುವ ಶಕ್ತಿ ಸದಾ ಇರಲಿ ಎಂದು ಹಾರೈಸಿದ್ದಾರೆ.

ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಕೂಡ ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಹಾರೈಸುತ್ತೇನೆ ಎಂದು ಎಕ್ಸ್ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದಿದ್ದಾರೆ.

ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಕೂಡ ಪ್ರಧಾನಿ ಮೋದಿ ಅವರ 75 ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಪ್ರಧಾನಿ ಮೋದಿಯವರಿಗೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಬ್ಯಾನರ್ಜಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ