ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭಾರೀ ಪ್ರವಾಹದಿಂದ 15 ಜನರು ಪ್ರಾಣ ಕಳೆದುಕೊಂಡಿದ್ದಾರೆ. 3 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್ಗಳಲ್ಲಿ ಪ್ರವಾಹಪೀಡಿತ ಸ್ಥಳಗಳಲ್ಲಿ ಸಿಲುಕಿರುವ ಜನರನ್ನು ರಕ್ಷಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಫೋನ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ, ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ನೀಡುವುದಾಗಿಯೂ ಭರವಸೆ ನೀಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ. ಯಾವ ರೀತಿಯ ಸಹಾಯ ಬೇಕಿದ್ದರೂ ಪ್ರಧಾನಿಗಳ ಕಚೇರಿಯನ್ನು ಸಂಪರ್ಕಿಸಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ತಿಳಿಸಿದ್ದಾರೆ.
PM @narendramodi spoke to WB CM @MamataOfficial on the flood situation caused by water discharge from dams in parts of the state. PM assured all possible support from the Centre to help mitigate the situation.
PM Modi prays for the safety and wellbeing of those in affected areas.— PMO India (@PMOIndia) August 4, 2021
ಹೌರಾ ಜಿಲ್ಲೆಯ ಪ್ರವಾಹ ಪೀಡಿತ ಉದಯನಾರಾಯಣಪುರಕ್ಕೆ ಭೇಟಿ ನೀಡಿದ್ದ ಮಮತಾ ಬ್ಯಾನರ್ಜಿ, ಪ್ರವಾಹ ಪರಿಸ್ಥಿತಿಯ ಬಗ್ಗೆ ವೈಮಾನಿಕ ಸಮೀಕ್ಷೆ ಪೂರ್ಣಗೊಳಿಸಿದ ನಂತರ ರಾಜ್ಯದಲ್ಲಿ ಪ್ರವಾಹದಿಂದ ಉಂಟಾದ ಹಾನಿಯ ಬಗ್ಗೆ ವರದಿಯನ್ನು ಕಳುಹಿಸುವುದಾಗಿ ತಿಳಿಸಿದ್ದಾರೆ.
ದಾಮೋದರ್ ವ್ಯಾಲಿ ಕಾರ್ಪೊರೇಷನ್ ಮತ್ತು ದುರ್ಗಾಪುರ ಬ್ಯಾರೇಜ್ ನಿಂದ ಹೆಚ್ಚು ನೀರು ಬಿಡುವ ಕಾರಣದಿಂದಾಗಿ ರಾಜ್ಯದ ಆರು ಜಿಲ್ಲೆಗಳ ದೊಡ್ಡ ಭಾಗಗಳು ಜಲಾವೃತಗೊಂಡಿರುವುದರಿಂದ ಪಶ್ಚಿಮ ಬಂಗಾಳದಲ್ಲಿ 15 ಜನ ಸಾವನ್ನಪ್ಪಿದ್ದಾರೆ. ವಿವಿಧ ಭಾಗಗಳ ಸುಮಾರು 3 ಲಕ್ಷ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.
West Bengal CM Mamata Banerjee visits flood-affected Howrah and interacts with the residents. pic.twitter.com/lXZ8fXNsK3
— ANI (@ANI) August 4, 2021
ಪಶ್ಚಿಮ ಬಂಗಾಳದಲ್ಲಿ ದಾಮೋದರ ಕಣಿವೆ ಮಂಡಳಿ (DVC) ಒಳಗೊಂಡಿರುವ ನಾಲ್ಕು ಅಣೆಕಟ್ಟುಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ, ಪುರ್ಬ ವರ್ಧಮಾನ್, ಪಶ್ಚಿಮ ಬರ್ಧಮಾನ್, ಪಶ್ಚಿಮ ಮೇದಿನಿಪುರ, ಹೂಗ್ಲಿ, ಹೌರಾ ಸಂಪೂರ್ಣವಾಗಿ ಜಲಾವೃತಗೊಂಡಿವೆ. ಇಲ್ಲಿಯವರೆಗೆ ಸುಮಾರು ಮೂರು ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿದೆ. ಹೆಲಿಕಾಪ್ಟರ್ ಮೂಲಕವೂ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ: West bengal: ಟಿಎಂಸಿ ವಿರುದ್ಧ ಟೀಕಾ ಪ್ರಹಾರದ ನಡುವೆಯೇ ಪಶ್ಚಿಮ ಬಂಗಾಳದ ಬಿಜೆಪಿಯಲ್ಲಿ ಭಿನ್ನಮತ?
Uttara Kannada Flood: ಉತ್ತರ ಕನ್ನಡ: ಪ್ರವಾಹ, ಭೂಕುಸಿತದಿಂದ 737 ಕೋಟಿ ಮೌಲ್ಯದ ಮೂಲಭೂತ ಸೌಕರ್ಯಕ್ಕೆ ಹಾನಿ
(Prime Minister Narendra Modi Called CM Mamata Banerjee assures help to mitigate flood situation in West Bengal)