Delhi Flood: ದೆಹಲಿಯ ಪ್ರವಾಹ ಸ್ಥಿತಿ ಕುರಿತು ಫ್ರಾನ್ಸ್​ನಿಂದ ಕರೆ ಮಾಡಿ ಅಮಿತ್ ಶಾ ಬಳಿ ಮಾಹಿತಿ ಪಡೆದ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಫ್ರಾನ್ಸ್ ಪ್ರವಾಸದಲ್ಲಿದ್ದಾರೆ. ಈ ವೇಳೆ ಅವರು ಗೃಹ ಸಚಿವ ಅಮಿತ್ ಶಾ ಅವರಿಗೆ ದೂರವಾಣಿ ಕರೆ ಮಾಡಿ ದೆಹಲಿ ಪ್ರವಾಹ(Delhi Flood) ಪರಿಸ್ಥಿತಿ ಕುರಿತು ಮಾಹಿತಿ ಪಡೆದಿದ್ದಾರೆ. 

Delhi Flood: ದೆಹಲಿಯ ಪ್ರವಾಹ ಸ್ಥಿತಿ ಕುರಿತು ಫ್ರಾನ್ಸ್​ನಿಂದ ಕರೆ ಮಾಡಿ ಅಮಿತ್ ಶಾ ಬಳಿ ಮಾಹಿತಿ ಪಡೆದ ನರೇಂದ್ರ ಮೋದಿ
ಯಮುನಾ ನದಿ
Follow us
ನಯನಾ ರಾಜೀವ್
|

Updated on:Jul 14, 2023 | 9:14 AM

ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಫ್ರಾನ್ಸ್ ಪ್ರವಾಸದಲ್ಲಿದ್ದಾರೆ. ಈ ವೇಳೆ ಅವರು ಗೃಹ ಸಚಿವ ಅಮಿತ್ ಶಾ ಅವರಿಗೆ ದೂರವಾಣಿ ಕರೆ ಮಾಡಿ ದೆಹಲಿ ಪ್ರವಾಹ(Delhi Flood) ಪರಿಸ್ಥಿತಿ ಕುರಿತು ಮಾಹಿತಿ ಪಡೆದಿದ್ದಾರೆ.  ಅಮಿತ್ ಶಾ ಅವರಿಗೆ ಪರಿಸ್ಥಿತಿ ತಿಳಿಗೊಳಿಸಿದ್ದು, ಯಮುನಾ ನದಿಯ ಅಬ್ಬರ ಕಡಿಮೆಯಾಗಲಿದೆ. ಇದಾದ ನಂತರ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಗೃಹ ಸಚಿವರು ಮುಂದಿನ 24 ಗಂಟೆಗಳಲ್ಲಿ ಯಮುನೆಯ ನೀರಿನ ಮಟ್ಟ ಕಡಿಮೆಯಾಗಲಿದ್ದು, ದೆಹಲಿಯಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿಯವರಿಗೆ ಮಾಹಿತಿ ನೀಡಿದ ಗೃಹ ಸಚಿವರು, ಎನ್‌ಡಿಆರ್‌ಎಫ್ ತಂಡವು ಜನರಿಗೆ ಸಹಾಯ ಮಾಡುತ್ತಿದೆ ಎಂದು ಹೇಳಿದರು.

ಅಪಾಯಮಟ್ಟ ಮೀರಿ ಹರಿಯುತ್ತಿದ್ದಾಳೆ ಯಮುನೆ, ದೆಹಲಿಯಲ್ಲಿ ಜನಜೀವನ ಅಸ್ತವ್ಯಸ್ತ

ಗೃಹ ಸಚಿವಾಲಯದ ಟ್ವೀಟ್‌ನಲ್ಲಿ ಮಾಹಿತಿ ನೀಡುತ್ತಾ, ಯಮುನಾ ನದಿಯ ನೀರಿನ ಮಟ್ಟ ಏರಿಕೆಯಿಂದಾಗಿ ದೆಹಲಿಯ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದಾರೆ ಎಂದು ಹೇಳಲಾಗಿದೆ.

ಎಚ್‌ಎಂಒ ಟ್ವೀಟ್‌ನಲ್ಲಿ, ಮುಂದಿನ 24 ಗಂಟೆಗಳಲ್ಲಿ ನೀರಿನ ಮಟ್ಟ ಕಡಿಮೆಯಾಗುವ ಸಾಧ್ಯತೆಯಿದೆ ಮತ್ತು ಅವರು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಗೃಹ ಸಚಿವರು ಪ್ರಧಾನಿ ಮೋದಿಯವರಿಗೆ ತಿಳಿಸಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಮತ್ತು ಅಗತ್ಯವಿರುವವರಿಗೆ ಸಹಾಯ ಮಾಡಲು ಸಾಕಷ್ಟು ಸಂಖ್ಯೆಯ NDRF ತಂಡಗಳನ್ನು ನಿಯೋಜಿಸಲಾಗುತ್ತಿದೆ.

ಮತ್ತಷ್ಟು ಓದಿ: ಅಪಾಯಮಟ್ಟ ಮೀರಿ ಹರಿಯುತ್ತಿದ್ದಾಳೆ ಯಮುನೆ, ದೆಹಲಿಯಲ್ಲಿ ಜನಜೀವನ ಅಸ್ತವ್ಯಸ್ತ

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರ ಬಳಿ ಪ್ರಧಾನಿ ಮೋದಿ ಅವರು ದೆಹಲಿಯ ಜಲಾವೃತ ಮತ್ತು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಮಾಡಲಾಗುತ್ತಿರುವ ಪ್ರಯತ್ನಗಳ ಬಗ್ಗೆ ಕೇಳಿದರು.

ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ಪಡೆದು ದೆಹಲಿಯ ಹಿತದೃಷ್ಟಿಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:13 am, Fri, 14 July 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್