PM Narendra Modi: ಬ್ರಿಟನ್ ಪ್ರಧಾನಿ ಸುನಕ್‌ಗೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ
ಬ್ರಿಟನ್ ಪ್ರಧಾನಿ ರಿಷಿ ಸುನಕ್‌ಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾತ್ರಿ ದೂರವಾಣಿ ಕರೆ ಮಾಡಿ ಮಾತನಾಡಿದ್ದು ವ್ಯಾಪಾರ, ಆರ್ಥಿಕ ಕ್ಷೇತ್ರ ಸೇರಿದಂತೆ ವಿವಿಧ ದ್ವಿಪಕ್ಷೀಯ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು. ಬ್ರಿಟನ್‌ನಲ್ಲಿನ ರಾಯಭಾರ ಕಚೇರಿಗಳ ಮೇಲೆ ನಡೆದ ದಾಳಿಗಳ ಬಗ್ಗೆಯೂ ಮಾತುಕತೆ ವೇಳೆ ಪ್ರಸ್ತಾಪವಾಯಿತು. ಪ್ರಧಾನಿಯವರ ಒತ್ತಾಯವನ್ನು ಕೇಳಿರುವ ಬ್ರಿಟನ್ ಪ್ರಧಾನಿ, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ದ್ವಿಪಕ್ಷೀಯ ಸಂಬಂಧ ವೃದ್ಧಿ ಮತ್ತು ವಿವಿಧ ರೀತಿಯ ಸಮಸ್ಯೆಗಳ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ಕ್ಷಿಪ್ರವಾಗಿ ಕ್ರಮ ಕೈಗೊಳ್ಳುವುದು ಮತ್ತು ಪರಿಹಾರ ನೀಡುವುದನ್ನು ಮಾಡುತ್ತಾರೆ. ಅಲ್ಲದೆ, ಸಮಸ್ಯೆ ಇರುವ ಸಂದರ್ಭದಲ್ಲಿ ತಕ್ಷಣ ಸ್ಪಂದಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ, ಇಲಾಖೆಗಳಿಗೆ ನಿರ್ದೇಶನ ನೀಡುವುದು ಕೂಡ ಅವರ ಕಾರ್ಯವೈಖರಿಯ ಭಾಗವಾಗಿದೆ. ಪ್ರಧಾನಿ ಕಚೇರಿ, ಎರಡು ರಾಷ್ಟ್ರಗಳ ನಡುವಿನ ಬಾಂಧವ್ಯ ವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ಜತೆಗೆ, ಸಮಸ್ಯೆಯನ್ನು ತಕ್ಷಣವೇ ಪರಿಹರಿಸುತ್ತದೆ. ಇದೇ ರೀತಿಯ ಸಂದರ್ಭವೊಂದರಲ್ಲಿ, ಬ್ರಿಟನ್ ಪ್ರಧಾನಿ ರಿಷಿ ಸುನಕ್‌ಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾತ್ರಿ ದೂರವಾಣಿ ಕರೆ ಮಾಡಿ ಮಾತನಾಡಿದ್ದು ವ್ಯಾಪಾರ, ಆರ್ಥಿಕ ಕ್ಷೇತ್ರ ಸೇರಿದಂತೆ ವಿವಿಧ ದ್ವಿಪಕ್ಷೀಯ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು. ಬ್ರಿಟನ್‌ನಲ್ಲಿನ ರಾಯಭಾರ ಕಚೇರಿಗಳ ಮೇಲೆ ನಡೆದ ದಾಳಿಗಳ ಬಗ್ಗೆಯೂ ಮಾತುಕತೆ ವೇಳೆ ಪ್ರಸ್ತಾಪವಾಯಿತು. ಪ್ರಧಾನಿಯವರ ಒತ್ತಾಯವನ್ನು ಕೇಳಿರುವ ಬ್ರಿಟನ್ ಪ್ರಧಾನಿ, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.