ಅಫ್ಘಾನಿಸ್ತಾನ ಬೆಳವಣಿಗೆ ಬಗ್ಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ
ಅಫ್ಘಾನಿಸ್ತಾನವು ತಾಲಿಬಾನ್ ವಶಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸಂಭಾವ್ಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ನಡೆಸಿದರು.
ದೆಹಲಿ: ಅಫ್ಘಾನಿಸ್ತಾನವು ತಾಲಿಬಾನ್ ವಶಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸಂಭಾವ್ಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಜೈಶಂಕರ್ ಅವರೊಂದಿಗೆ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತದ ನಾಗರಿಕರನ್ನು ಸ್ಥಳಾಂತರಿರುವ ಪ್ರಕ್ರಿಯೆಯ ಬಗ್ಗೆಯೂ ಮೋದಿ ಮಾಹಿತಿ ಪಡೆದುಕೊಂಡರು. ಸೋಮವಾರ ತಡರಾತ್ರಿಯವರೆಗೂ ಮೋದಿ ಸಮಾಲೋಚನೆ ನಡೆಸುತ್ತಿದ್ದರು ಎಂದು ಹಲವು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಅಫ್ಘಾನಿಸ್ತಾನದಲ್ಲಿ ಸಿಲುಕಿದ್ದ ಭಾರತೀಯ ದೂತಾವಾಸ ಮತ್ತು ಭದ್ರತಾ ಸಿಬ್ಬಂದಿಯ ಸ್ಥಳಾಂತರದ ಬಗ್ಗೆ ಮತ್ತು ವಾಯುಪಡೆಯ ಸಿ-17 ವಿಮಾನದ ಕಾರ್ಯಾಚರಣೆಯ ಬಗ್ಗೆ ಮೋದಿ ಪಡೆದುಕೊಂಡರು. ವಿಮಾನವು ಜಾಮ್ನಗರದಲ್ಲಿ ಇಳಿದ ತಕ್ಷಣ ಅದರಲ್ಲಿರುವ ಎಲ್ಲರಿಗೂ ಆಹಾರ ಪೂರೈಸಬೇಕು ಎಂದು ಮೋದಿ ಸೂಚಿಸಿದ್ದರು.
ಭಾರತದಲ್ಲಿ ಲ್ಯಾಂಡ್ ಆಯ್ತು ವಾಯುಪಡೆ ವಿಮಾನ ತಾಲಿಬಾನ್ ಉಗ್ರರು ಅಫ್ಘಾನಿಸ್ತಾನ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಆಫ್ಘಾನ್ನಲ್ಲಿ ಸಿಲುಕಿದ್ದ ಭಾರತೀಯ ನಾಗರಿಕರ ಏರ್ಲಿಫ್ಟ್ ಕಾರ್ಯಾಚರಣೆ ಮುಂದುವರಿದಿದೆ. ಅಫ್ಘಾನಿಸ್ತಾನದಿಂದ ಭಾರತೀಯ ದೂತಾವಾಸ ಸಿಬ್ಬಂದಿಯನ್ನು ಕರೆತಂದಿದ್ದ ವಿಮಾನವು ಗಾಜಿಯಾಬಾದ್ನ ಹಿಂಡನ್ ವಾಯುನೆಲೆಯಲ್ಲಿ ಲ್ಯಾಂಡ್ ಆಗಿದೆ. ಅಫ್ಘಾನಿಸ್ತಾನದಲ್ಲಿ ಭಾರತದ ರಾಯಭಾರಿ ಸೇರಿದಂತೆ 120 ಮಂದಿ ಈ ವಿಮಾನದ ಮೂಲಕ ಭಾರತಕ್ಕೆ ಹಿಂದಿರುಗಿದ್ದಾರೆ.
(PM Narendra Modi Calls for an Emergency Meeting to Discuss Afghanistan Developments)
ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಕಾಶ್ಮೀರದಲ್ಲಿ ಭಯೋತ್ಪಾದನೆ ಹೆಚ್ಚುವ ಆತಂಕ
ಇದನ್ನೂ ಓದಿ: ಅಮೆರಿಕವೆಂಬ ವಿದೇಶಿ ಶಕ್ತಿಯನ್ನು ಓಡಿಸಿದ ತಾಲಿಬಾನಿಗಳದ್ದು ನಿಜವಾದ ದೇಶಭಕ್ತಿ; ಸುಧೀಂದ್ರ ಕುಲಕರ್ಣಿ