ಪ್ರಧಾನಮಂತ್ರಿ ಸೂರ್ಯೋದಯ ಯೋಜನೆಗೆ ಚಾಲನೆ ನೀಡುವ ಸಭೆಯ ಅಧ್ಯಕ್ಷತೆ ವಹಿಸಿ ಮೋದಿ ಹೇಳಿದ್ದೇನು?
ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ”ಗೆ ಚಾಲನೆ ನೀಡುವ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಧಾನಿ ಮೋದಿ, ಜನರು ತಮ್ಮ ವಿದ್ಯುತ್ ಬಿಲ್‌ಗಳನ್ನು ಕಡಿಮೆ ಮಾಡಲು ಮತ್ತು ವಿದ್ಯುತ್ ಅಗತ್ಯಗಳಿಗಾಗಿ ಜನರನ್ನು ನಿಜವಾದ ಆತ್ಮನಿರ್ಭರ್ ಮಾಡಲು ಸೂರು ಹೊಂದಿರುವ ಪ್ರತಿ ಮನೆಯವರು ಸೂರ್ಯನ ಶಕ್ತಿಯನ್ನು ಬಳಸಿಕೊಳ್ಳಬಹುದು ಎಂದು ಹೇಳಿದರು.
ದೆಹಲಿ ಜನವರಿ 22: ರಾಮಮಂದಿರದಲ್ಲಿ (Ram Mandir) ರಾಮಲಲ್ಲಾ ಪ್ರಾಣಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಮಹತ್ವದ ಸಭೆಯೊಂದರ ಅಧ್ಯಕ್ಷತೆ ವಹಿಸಿದ್ದಾರೆ. 1 ಕೋಟಿ ಮನೆಗಳಿಗೆ ಮೇಲ್ಛಾವಣಿ ಸೌರಶಕ್ತಿ ಅಳವಡಿಸುವ ಗುರಿಯೊಂದಿಗೆ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ”ಗೆ (Pradhanmantri Suryodaya Yojana)ಚಾಲನೆ ನೀಡುವ ಸಭೆಯಾಗಿತ್ತು ಅದು. ಈ ಸಭೆಯಲ್ಲಿ ಮಾತನಾಡಿದ ಮೋದಿ, ಜನರು ತಮ್ಮ ವಿದ್ಯುತ್ ಬಿಲ್‌ಗಳನ್ನು ಕಡಿಮೆ ಮಾಡಲು ಮತ್ತು ವಿದ್ಯುತ್ ಅಗತ್ಯಗಳಿಗಾಗಿ ಜನರನ್ನು ನಿಜವಾದ ಆತ್ಮನಿರ್ಭರ್ ಮಾಡಲು ಸೂರು ಹೊಂದಿರುವ ಪ್ರತಿ ಮನೆಯವರು ಸೂರ್ಯನ ಶಕ್ತಿಯನ್ನು ಬಳಸಿಕೊಳ್ಳಬಹುದು ಎಂದು ಹೇಳಿದರು.
ಪ್ರಧಾನಮಂತ್ರಿ ಸೂರ್ಯೋದಯ ಯೋಜನೆಯು ಕಡಿಮೆ ಮತ್ತು ಮಧ್ಯಮ-ಆದಾಯದ ವ್ಯಕ್ತಿಗಳಿಗೆ ಸೌರ ಮೇಲ್ಛಾವಣಿ ಸ್ಥಾಪನೆಗಳ ಮೂಲಕ ವಿದ್ಯುತ್ ಅನ್ನು ಒದಗಿಸುವ ಗುರಿಯನ್ನು ಹೊಂದಿದೆ, ಜೊತೆಗೆ ಹೆಚ್ಚುವರಿ ವಿದ್ಯುತ್ ಉತ್ಪಾದನೆಗೆ ಹೆಚ್ಚುವರಿ ಆದಾಯವನ್ನು ನೀಡುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಮೇಲ್ಛಾವಣಿ ಸೌರಶಕ್ತಿಯನ್ನು ಅಳವಡಿಸಿಕೊಳ್ಳಲು ವಸತಿ ವಿಭಾಗದ ಗ್ರಾಹಕರನ್ನು ಸಜ್ಜುಗೊಳಿಸಲು ಬೃಹತ್ ರಾಷ್ಟ್ರೀಯ ಅಭಿಯಾನವನ್ನು ಪ್ರಾರಂಭಿಸಬೇಕು ಎಂದು ಪ್ರಧಾನಮಂತ್ರಿ ನಿರ್ದೇಶನ ನೀಡಿದ್ದಾರೆ.
ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರವು 1 ಕೋಟಿ ಮನೆಗಳಿಗೆ ಮೇಲ್ಛಾವಣಿಯ ಸೋಲಾರ್ ಅನ್ನು ಸ್ಥಾಪಿಸುವ ಗುರಿಯೊಂದಿಗೆ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ” ಅನ್ನು ಪ್ರಾರಂಭಿಸುತ್ತದೆ. ಇದು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪ್ರಧಾನಿ ಅವರು ಅಯೋಧ್ಯೆಯಿಂದ ಹಿಂದಿರುಗಿದ ನಂತರ ಇಲ್ಲಿ ಅಧಿಕಾರಿಗಳೊಂದಿಗೆ ಯೋಜನೆಯ ಕುರಿತು ಚರ್ಚಿಸುತ್ತಿರುವ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
सूर्यवंशी भगवान श्री राम के आलोक से विश्व के सभी भक्तगण सदैव ऊर्जा प्राप्त करते हैं।
आज अयोध्या में प्राण-प्रतिष्ठा के शुभ अवसर पर मेरा ये संकल्प और प्रशस्त हुआ कि भारतवासियों के घर की छत पर उनका अपना सोलर रूफ टॉप सिस्टम हो।
अयोध्या से लौटने के बाद मैंने पहला निर्णय लिया है कि… pic.twitter.com/GAzFYP1bjV
— Narendra Modi (@narendramodi) January 22, 2024
ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭ
ಇದಕ್ಕೂ ಮುನ್ನ ಅಯೋಧ್ಯೆಯ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಅಧ್ಯಕ್ಷತೆಯನ್ನು ಪ್ರಧಾನಿ ವಹಿಸಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಯುಪಿ ಗವರ್ನರ್ ಆನಂದಿಬೆನ್ ಪಟೇಲ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ದೇವಾಲಯದ ಗರ್ಭಗುಡಿಯಲ್ಲಿ ನಡೆದ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ:
ಇದು ಭಾರತದ ಸಮಯ ಮತ್ತು ಭಾರತವು ಮುಂದುವರಿಯಲಿದೆ. ಶತಮಾನಗಳು ಕಾದ ನಂತರ ನಾವು ಇಲ್ಲಿಗೆ ತಲುಪಿದ್ದೇವೆ. ನಾವೆಲ್ಲರೂ ಈ ಯುಗ, ಈ ಅವಧಿಗಾಗಿ ಕಾಯುತ್ತಿದ್ದೇವೆ. ಈಗ ನಾವು ನಿಲ್ಲುವುದಿಲ್ಲ. ನಾವು ಅಭಿವೃದ್ಧಿಯ ಎತ್ತರವನ್ನು ತಲುಪುತ್ತೇವೆ ಕಾರ್ಯಕ್ರಮದ ನಂತರ ಮಾತನಾಡಿದ ಪ್ರಧಾನಿ ಹೇಳಿದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ