AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangladesh Crisis: ಬಾಂಗ್ಲಾದೇಶದ ಹಿಂಸಾಚಾರದ ಬಗ್ಗೆ ಪ್ರಧಾನಿ ನಿವಾಸದಲ್ಲಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ

ಬಾಂಗ್ಲಾದೇಶದಲ್ಲಿ ನಡೆದಿರುವ ಹಿಂಸಾಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ನಿವಾಸದಲ್ಲಿ ಇಂದು ಸಂಜೆ ಮಹತ್ವದ ಸಭೆ ನಡೆದಿದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಕೇಂದ್ರ ಗೃಹಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಸುಬ್ರಹ್ಮಣ್ಯಂ ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಹಲವು ಹಿರಿಯ ಸಚಿವರು ಭಾಗಿಯಾಗಿದ್ದಾರೆ.

Bangladesh Crisis: ಬಾಂಗ್ಲಾದೇಶದ ಹಿಂಸಾಚಾರದ ಬಗ್ಗೆ ಪ್ರಧಾನಿ ನಿವಾಸದಲ್ಲಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ
ಪ್ರಧಾನಿ ನಿವಾಸದಲ್ಲಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ
ಸುಷ್ಮಾ ಚಕ್ರೆ
|

Updated on: Aug 05, 2024 | 10:22 PM

Share

ನವದೆಹಲಿ: ನೆರೆಯ ದೇಶವಾದ ಬಾಂಗ್ಲಾದೇಶದ ಬಿಕ್ಕಟ್ಟಿನ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ಸಂಜೆ ಉನ್ನತ ಮಟ್ಟದ ಸಭೆ ನಡೆದಿದೆ. ಈ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಮೋದಿ ಹಲವು ಸಚಿವರೊಂದಿಗೆ ಚರ್ಚಿಸಿದರು. ಈ ಸಭೆಯಲ್ಲಿ ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಕೆಲವು ಸಚಿವರು ಭಾಗವಹಿಸಿದ್ದರು. ಅದಕ್ಕೂ ಮುನ್ನ ಮೋದಿ ಅವರೊಂದಿಗೆ ವಿಶೇಷ ಸಭೆ ನಡೆಸಿದ ವಿದೇಶಾಂಗ ಸಚಿವ ಜೈ ಶಂಕರ್ ಬಾಂಗ್ಲಾದೇಶದ ಬಿಕ್ಕಟ್ಟಿನ ಬಗ್ಗೆ ವಿವರಿಸಿದರು.

ಇಂದು ಪ್ರಧಾನಿಯ ನಿವಾಸದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಬಾಂಗ್ಲಾದೇಶದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿಗೆ ಮಾಹಿತಿ ನೀಡಲಾಯಿತು. ಇಂದು ಸಂಜೆ ಬಾಂಗ್ಲಾದೇಶದ ಮಾಜಿ ಪಿಎಂ ಶೇಖ್ ಹಸೀನಾ ಲಂಡನ್‌ಗೆ ತೆರಳುತ್ತಿದ್ದಾಗ ತನ್ನ ದೇಶದಲ್ಲಿನ ಪ್ರಕ್ಷುಬ್ಧತೆಯ ನಡುವೆ ಘಜಿಯಾಬಾದ್ ಬಳಿಯ ಹಿಂಡನ್ ವಾಯುನೆಲೆಗೆ ಬಂದಿಳಿದ ಬಳಿಕ ವಿದೇಶಾಂಗ ಸಚಿವ ಜೈಶಂಕರ್ ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದರು. ಜೈಶಂಕರ್ ಅವರು ನೆರೆಯ ದೇಶದ ಪರಿಸ್ಥಿತಿಯ ಬಗ್ಗೆ ಮೋದಿಗೆ ವಿವರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: 49 ವರ್ಷಗಳ ಹಿಂದೆಯೂ ಶೇಖ್ ಹಸೀನಾಗೆ ಆಶ್ರಯ ನೀಡಿ ಪ್ರಾಣ ಉಳಿಸಿತ್ತು ಭಾರತ; ಆಗ ನಡೆದಿದ್ದೇನು?

ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೂ ಬಾಂಗ್ಲಾದೇಶದ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಹಿಂಡನ್ ವಾಯುನೆಲೆಗೆ ಬಂದ ಶೇಖ್ ಹಸೀನಾ ಅವರನ್ನು NSA ಅಜಿತ್ ದೋವಲ್ ಭೇಟಿಯಾಗಿ, ಅವರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ನಡೆದಿದ್ದೇನು?:

ಬಾಂಗ್ಲಾದೇಶವು ಹಲವು ವರ್ಷಗಳಿಂದ ಮೀಸಲಾತಿ ವಿರೋಧಿ ಚಳವಳಿಯೊಂದಿಗೆ ಹೋರಾಡುತ್ತಿದೆ. ಒಂದೆಡೆ ಆಡಳಿತಾರೂಢ ಅವಾಮಿ ಲೀಗ್ ಕಾರ್ಯಕರ್ತರು, ಮತ್ತೊಂದೆಡೆ ಚಳವಳಿಗಾರರು ಬಾಂಗ್ಲಾದೇಶವನ್ನು ರಣರಂಗವನ್ನಾಗಿ ಮಾಡಿದ್ದಾರೆ. ಈ ಸಂಘರ್ಷಕ್ಕೆ ಉತ್ತೇಜನ ನೀಡುವ ಮೂಲಕ ಸರ್ಕಾರ ವಿಶ್ವವಿದ್ಯಾಲಯಗಳನ್ನು ಮುಚ್ಚಿದೆ. ಇದರೊಂದಿಗೆ ಪ್ರತಿಭಟನೆಯ ಜ್ವಾಲೆ ಮತ್ತಷ್ಟು ಭುಗಿಲೆದ್ದಿತು. ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ದಂಗೆದ್ದು, ಏಕಕಾಲಕ್ಕೆ ಜಿಲ್ಲಾ ಕಾರಾಗೃಹಕ್ಕೆ ಬೆಂಕಿ ಹಚ್ಚಿ, ಕೈದಿಗಳನ್ನು ಬಿಡುಗಡೆಗೊಳಿಸಿ, ರಾಷ್ಟ್ರೀಯ ಟಿವಿ ವಾಹಿನಿಯೊಂದರ ಮೇಲೆ ದಾಳಿ ನಡೆಸಿ ರಾಷ್ಟ್ರವ್ಯಾಪಿ ಸಂಚಲನ ಮೂಡಿಸಿದರು.

ಇದನ್ನೂ ಓದಿ: Bangladesh Crisis: ಬಾಂಗ್ಲಾದೇಶದ ಪ್ರಧಾನಿ ಬಂಗಲೆಗೆ ನುಗ್ಗಿ ಶೇಖ್ ಹಸೀನಾ ಸೀರೆ, ಚಿಕನ್, ಸೋಫಾ, ಸೂಟ್​ಕೇಸ್ ಲೂಟಿ ಮಾಡಿದ ಜನರು

ಈ ವೇಳೆ ಬಾಂಗ್ಲಾದೇಶದ ಪ್ರಧಾನಿ ಕಚೇರಿ ಮತ್ತು ಸೆಂಟ್ರಲ್ ಬ್ಯಾಂಕ್ ಮೇಲೆ ದಾಳಿ ನಡೆಯಿತು. ಈ ಪ್ರತಿಭಟನೆ ಬಾಂಗ್ಲಾದೇಶದ 64 ಜಿಲ್ಲೆಗಳಲ್ಲಿ 47 ಜಿಲ್ಲೆಗಳಿಗೆ ವ್ಯಾಪಿಸಿತು. ಒಂದು ತಿಂಗಳ ಹಿಂದೆ ಪ್ರಾರಂಭವಾದ ಘರ್ಷಣೆಯಲ್ಲಿ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ನೂರಾರು ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸತ್ತವರಲ್ಲಿ ಹತ್ತಾರು ಪೊಲೀಸರು ಕೂಡ ಸೇರಿದ್ದಾರೆ. ಸಿರಾಜ್‌ಗಂಜ್ ಪೊಲೀಸ್ ಠಾಣೆಯ ಮೇಲೆ ಗುಂಪೊಂದು ನಡೆಸಿದ ದಾಳಿಯಲ್ಲಿ 13 ಪೊಲೀಸರು ಸಜೀವ ದಹನವಾಗಿದ್ದರು.

ಶೇಖ್ ಹಸೀನಾ ನೇತೃತ್ವದ ಸರ್ಕಾರದ ವಿರೋಧಿ ಪ್ರತಿಭಟನೆಯ ನಂತರ ಇಂದು (ಸೋಮವಾರ) ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಲಂಡನ್‌ಗೆ ಹೋಗುವ ಯೋಜನೆಯ ಭಾಗವಾಗಿ ಭಾರತದ ಘಜಿಯಾಬಾದ್‌ನ ಹಿಂಡನ್ ವಾಯುನೆಲೆಗೆ ಬಂದಿಳಿದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ