ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದಿಲ್ಲವೆಂದು ಲಿಖಿತದಲ್ಲಿ ನೀಡಲಿ: ಕಾಂಗ್ರೆಸ್​ಗೆ ಮೋದಿ ಸವಾಲು

ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ದೀಸಾ ಪಟ್ಟಣದಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಧರ್ಮದ ಹೆಸರಿನಲ್ಲಿ ಮೀಸಲಾತಿಯನ್ನು ಎಂದಿಗೂ ದುರುಪಯೋಗಪಡಿಸಿಕೊಳ್ಳುವುದಿಲ್ಲ, ಸಂವಿಧಾನವನ್ನು ಹಾಳುಮಾಡುವುದಿಲ್ಲ ಅಥವಾ ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ನೀಡುವುದಿಲ್ಲ ಎಂದು ಕಾಂಗ್ರೆಸ ಪ್ರತಿಜ್ಞೆ ಮಾಡಲಿ ಎಂದು ವಾಗ್ದಾಳಿ ಮಾಡಿದ್ದಾರೆ. 

ಗುಜರಾತ್​, ಮೇ 1: ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದಿಲ್ಲ ಎಂದು ಲಿಖಿತದಲ್ಲಿ ನೀಡಲಿ ಮತ್ತು ಸಂವಿಧಾನವನ್ನು ಹಾಳು ಮಾಡುವುದಿಲ್ಲ ಎಂದು ಪ್ರತಿಜ್ಞೆ ಮಾಡಲಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹಾಕಿದ್ದಾರೆ. ಬುಧವಾರ ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ದೀಸಾ ಪಟ್ಟಣದಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ (Congress) ​ನವರಿಗೆ ಧೈರ್ಯವಿದ್ದರೆ, ಧರ್ಮದ ಹೆಸರಿನಲ್ಲಿ ಮೀಸಲಾತಿಯನ್ನು ಎಂದಿಗೂ ದುರುಪಯೋಗ ಪಡಿಸಿಕೊಳ್ಳುವುದಿಲ್ಲ ಎಂದು ಘೋಷಿಸಲಿ. ಸಂವಿಧಾನವನ್ನು ಹಾಳುಮಾಡುವುದಿಲ್ಲ, ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ನೀಡುವುದಿಲ್ಲ ಎಂದು ಪ್ರತಿಜ್ಞೆ ಮಾಡಲಿ ಎಂದು ವಾಗ್ದಾಳಿ ಮಾಡಿದ್ದಾರೆ.

‘ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಯಾವತ್ತು ಕೈ ಹಚ್ಚುವುದಿಲ್ಲ ಕಾಂಗ್ರೆಸ್​ ಘೋಷಣೆ ಮಾಡಲಿ. ಆದರೆ ಅದು ಅವರಿಗೆ ಸಾಧ್ಯವಿಲ್ಲ. ನನಗೆ ಗೊತ್ತಿದೆ ಅವರು ಯಾವತ್ತು ಕೂಡ ಲಿಖಿತ ರೂಪದಲ್ಲಿ ಬರೆದು ಕೊಡುವುದಿಲ್ಲ. ಹಾಗೆಯೇ ನನ್ನ ಈ ಸವಾಲನ್ನು ಕಾಂಗ್ರೆಸ್​ನ ಮೀಡಿಯಾಗಳು ಮುಚ್ಚಿ ಹಾಕುತ್ತವೆ. ಏಕೆಂದರೆ ಅವು ಕಾಂಗ್ರೆಸ್​ನ ರಕ್ಷಣೆಗೆ ನಿಂತಿವೆ’ ಎಂದು ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ: ಕಾಂಗ್ರೆಸ್​ ಶಾಸಕ ರಾಜು ಕಾಗೆ

ಕಾಂಗ್ರೆಸ್ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾದ ಮೀಸಲಾತಿಗಳನ್ನು ಕಸಿದುಕೊಳ್ಳುವ ಗುರಿಯನ್ನು ಹೊಂದಿದ್ದೀರಿ. ಆದರೆ ಸಂವಿಧಾನದ ಹೆಸರಿನಲ್ಲಿ ಮೀಸಲಾತಿಯ ದುರ್ಬಳಕೆಗೆ ನಾನು ಅವಕಾಶ ನೀಡುವುದಿಲ್ಲ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Lok Sabha Polls 2024: ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ಮಾಜಿ ಸಿಎಂ ಕೆಸಿಆರ್​ಗೆ ನಿಷೇಧ

ಇಂದಿಗೂ ಕಾಂಗ್ರೆಸ್‌ಗೆ ಸಮಸ್ಯೆಗಳು ಕಾಣುವುದಿಲ್ಲ. ಏಕೆಂದರೆ ಜನರಿಗಾಗಿ ಕೆಲಸ ಮಾಡುವ ಉತ್ಸಾಹವಿಲ್ಲ. 2014ರಲ್ಲಿ ಕಾಂಗ್ರೆಸ್ ಯಾವ ರೀತಿಯ ಸಮಸ್ಯೆಗಳು ಇದ್ದವು ಎಂಬುದು ನಿಮಗೆ ನೆನಪಿದೆಯೇ? ಚಾಯ್ ವಾಲಾ ಏನು ಮಾಡುತ್ತಾನೆ ಎಂದು ಅವರು ಹೇಳಿದರು? ಆದರೆ ಇಡೀ ದೇಶ ಅವರಿಗೆ ಉತ್ತರ ನೀಡಿತು. 400 ಸ್ಥಾನಗಳನ್ನು ಆಕ್ರಮಿಸಿಕೊಂಡವರನ್ನು 40 ಸ್ಥಾನಗಳಿಗೆ ಇಳಿಸಲಾಯಿತು ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:50 pm, Wed, 1 May 24

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us