ಸಾಧನೆಯ ಖುಷಿಗಾಗಿ ಸಾಮಾಜಿಕ ಜಾಲತಾಣಗಳ ಪ್ರೊಫೈಲ್​ ಫೋಟೋ ಬದಲಿಸಿದ ಪ್ರಧಾನಿ ಮೋದಿ !

ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೆಹಲಿಯ ರಾಮ್​ ಮನೋಹರ್​ ಲೋಹಿಯಾ ಆಸ್ಪತ್ರೆಗೆ ಭೇಟಿಯಾಗಿ ಅಲ್ಲಿನ ಸಿಬ್ಬಂದಿ ಮತ್ತು ಲಸಿಕೆ ಫಲಾನುಭವಿಗಳೊಟ್ಟಿಗೆ ಸಂವಾದ ನಡೆಸಿದ್ದಾರೆ.

ಸಾಧನೆಯ ಖುಷಿಗಾಗಿ ಸಾಮಾಜಿಕ ಜಾಲತಾಣಗಳ ಪ್ರೊಫೈಲ್​ ಫೋಟೋ ಬದಲಿಸಿದ ಪ್ರಧಾನಿ ಮೋದಿ !
ಪ್ರಧಾನಿ ಮೋದಿ
Follow us
TV9 Web
| Updated By: Lakshmi Hegde

Updated on:Oct 22, 2021 | 12:57 PM

ಪ್ರಧಾನಮಂತ್ರಿ ನರೇಂದ್ರ ಮೋದಿ(PM Narendra Modi)ಯವರು ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಯಾವುದೇ ವಿಶೇಷ ಸಮಾರಂಭಗಳು, ಯೋಜನೆಗಳ ಉದ್ಘಾಟನೆಗಳ ಬಗ್ಗೆ ಅಪ್​ಡೇಟ್​ ಕೊಡುತ್ತಾರೆ. ಗಣ್ಯರ ಹುಟ್ಟುಹಬ್ಬಕ್ಕೆ ವಿಶ್​ ಮಾಡುತ್ತಾರೆ. ಇದೀಗ ಪ್ರಧಾನಮಂತ್ರಿ ನರೇಂದ್ರ ತಮ್ಮ ಸೋಷಿಯಲ್​ ಮೀಡಿಯಾಗಳ ಪ್ರೊಫೈಲ್​ ಫೋಟೋ ಬದಲಿಸಿದ್ದಾರೆ. ಭಾರತದಲ್ಲಿ ಕೊರೊನಾ ಲಸಿಕೆ 100 ಕೋಟಿ ಡೋಸ್​ ನೀಡಿ ದಾಖಲೆ ಸೃಷ್ಟಿಸಿದ ಬೆನ್ನಲ್ಲೇ ನರೇಂದ್ರ ಮೋದಿಯವರು ತಮ್ಮ ಟ್ವಿಟರ್​ ಮತ್ತು ಫೇಸ್​​ಬುಕ್​ ಖಾತೆಗಳಲ್ಲಿ ಪ್ರೊಫೈಲ್​ ಫೋಟೊ ಬದಲಿಸಿಕೊಂಡಿದ್ದಾರೆ. 100 ಕೋಟಿ ಡೋಸ್​ ಲಸಿಕೆ  ನೀಡಿದ್ದಕ್ಕೆ ಅಭಿನಂದನೆಗಳು ಭಾರತ ಎಂದು ಹೇಳುವ ಫೋಟೋವೊಂದನ್ನು ಪ್ರೊಫೈಲ್​ಗೆ ಹಾಕಿಕೊಂಡಿದ್ದಾರೆ. 

Twitter Profile

ಸಾಮಾಜಿಕ ಜಾಲತಾಣಗಳ ಪ್ರೊಫೈಲ್​ ಫೋಟೋ ಬದಲಿಸಿದ ಪ್ರಧಾನಿ ಮೋದಿ

ಭಾರತದಲ್ಲಿ ನಿನ್ನೆಗೆ 100 ಕೋಟಿ ಡೋಸ್​ ಲಸಿಕೆ ಕೊಟ್ಟು ಪೂರ್ಣವಾಗಿದೆ. ಈ ಬೆನ್ನಲ್ಲೇ ಟ್ವೀಟ್​ ಮಾಡಿದ್ದ ನರೇಂದ್ರ ಮೋದಿಯವರು, ಭಾರತ ಇಂದು ಇತಿಹಾಸ ಬರೆದಿದೆ. ಭಾರತೀಯ ವಿಜ್ಞಾನ, ಉದ್ಯಮ ಮತ್ತು 130 ಕೋಟಿ ಭಾರತೀಯರ ಒಗ್ಗಟ್ಟಿನ ಸ್ಫೂರ್ತಿಗೆ ನಾವಿಂದು ಸಾಕ್ಷಿಯಾಗಿದ್ದೇವೆ ಎಂದು ಹೇಳಿದ್ದರು.  ಹಾಗೇ ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೆಹಲಿಯ ರಾಮ್​ ಮನೋಹರ್​ ಲೋಹಿಯಾ ಆಸ್ಪತ್ರೆಗೆ ಭೇಟಿಯಾಗಿ ಅಲ್ಲಿನ ಸಿಬ್ಬಂದಿ ಮತ್ತು ಲಸಿಕೆ ಫಲಾನುಭವಿಗಳೊಟ್ಟಿಗೆ ಸಂವಾದ ನಡೆಸಿದ್ದಾರೆ. ಇದುವರೆಗೆ ಶತಕೋಟಿ ಡೋಸ್​ ಲಸಿಕೆ ನೀಡಿದ ದೇಶಗಳ ಸಾಲಿಗೆ ಚೀನಾ ಬಿಟ್ಟರೆ ಸೇರಿದ್ದು ಭಾರತವೇ ಆಗಿದೆ.  ಡಬ್ಲ್ಯೂಎಚ್​ಒ ಮಹಾನಿರ್ದೇಶಕ ಡಾ. ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಮೋದಿ, ವಿಜ್ಞಾನಿಗಳು, ಆರೋಗ್ಯ ಕಾರ್ಯಕರ್ತರು ಮತ್ತು ಭಾರತದ ನಾಗರಿಕರನ್ನು ಅಭಿನಂದಿಸಿದ್ದಾರೆ.

ಕಳೆದ ಮಾರ್ಚ್​​ನಲ್ಲಿ ಕೊರೊನಾ ಸಾಂಕ್ರಾಮಿಕ ಶುರುವಾಗಿ ಮೊದಲ ಲಾಕ್​ಡೌನ್​ ಜಾರಿಯಾಗಿತ್ತು. ಅದಾದ ಬಳಿಕ ಏಪ್ರಿಲ್​ನಲ್ಲಿ ಪ್ರಧಾನಿ ಮೋದಿಯವರು ತಮ್ಮ ಮೂಗು, ಬಾಯಿಯನ್ನು ಗಮ್ಚಾ (ಹತ್ತಿಬಟ್ಟೆಯ ತೆಳುವಾದ ಶಾಲು)ದಿಂದ ಮುಚ್ಚಿಕೊಂಡಿದ್ದ ಫೋಟೋವನ್ನು ಸಾಮಾಜಿಕ ಜಾಲತಾಣಗಳ ಪ್ರೊಫೈಲ್​ ಮಾಡಿಕೊಂಡಿದ್ದರು. ಈ ಮೂಲಕ ಜನರಲ್ಲಿ ಕೊರೊನಾ ನಿಯಂತ್ರಣಕ್ಕೆ ಮಾಸ್ಕ್​ ಕಡ್ಡಾಯ ಎಂಬುದನ್ನು ಸಾರಿದ್ದರು. ಅಲ್ಲಿಂದ ಇಲ್ಲಿಯವರೆಗೆ ಪ್ರೊಫೈಲ್​ ಫೋಟೋ ಬದಲು ಮಾಡಿರಲಿಲ್ಲ. ಇದೀಗ 100 ಕೋಟಿ ಡೋಸ್​ ಲಸಿಕೆ ನೀಡಿದ ಬೆನ್ನಲ್ಲೇ ಸಾಧನೆಯ ಖುಷಿಗೆ ದೇಶಕ್ಕೆ ಅಭಿನಂದನೆ ಸಲ್ಲಿಸಲು ಹೊಸ ಪ್ರೊಫೈಲ್​ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Ananya Pandey: ಆರ್ಯನ್ ಖಾನ್ ಬಂಧನ ಪ್ರಕರಣ; ಎನ್​ಸಿಬಿ ವಿಚಾರಣೆ ವೇಳೆ ಭಯಗೊಂಡು ಕಣ್ಣೀರಿಟ್ಟಿದ್ದ ಅನನ್ಯಾ ಪಾಂಡೆ

Anushka Sharma: ಒಂದೇ ಒಂದು ಚಿತ್ರದಿಂದ ಅಭಿಮಾನಿಗಳ ಮನಗೆದ್ದ ಅನುಷ್ಕಾ; ಅಂಥದ್ದೇನಿದೆ ಅದರಲ್ಲಿ?

Published On - 12:48 pm, Fri, 22 October 21

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ