ಅಮೆರಿಕದಲ್ಲಿ 2 ವಿಮಾನಗಳ ಪತನ, 67 ಮಂದಿ ಸಾವು, ಪ್ರಧಾನಿ ಮೋದಿ ಸಂತಾಪ

ಅಮೆರಿಕದಲ್ಲಿ ಎರಡು ವಿಮಾನಗಳು ಶ್ವೇತನ ಭವನದ ಬಳಿ ಇರುವ ನದಿಯಲ್ಲಿ ಪತನಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಇದು ತೀವ್ರ ದುಃಖದ ಘಟನೆ ಅಮೆರಿಕದ ಜನರೊಂದಿಗೆ ನಾವಿದ್ದೇವೆ ಎಂದು ಹೇಳಿದ್ದಾರೆ. ಈ ಅಪಘಾತದಲ್ಲಿ 67 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ವಿಮಾನದಲ್ಲಿ 64 ಮಂದಿ ಇದ್ದರು. ಇದರಲ್ಲಿ 60 ಮಂದಿ ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು. ಸೇನಾ ಹೆಲಿಕಾಪ್ಟರ್‌ನಲ್ಲಿದ್ದ ಮೂವರು ಸಹ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಅಮೆರಿಕದಲ್ಲಿ 2 ವಿಮಾನಗಳ ಪತನ, 67 ಮಂದಿ ಸಾವು, ಪ್ರಧಾನಿ ಮೋದಿ ಸಂತಾಪ
ನರೇಂದ್ರ ಮೋದಿ
Image Credit source: Business Standard

Updated on: Jan 31, 2025 | 10:12 AM

ಅಮೆರಿಕದ ವಾಷಿಂಗ್ಟನ್​ ಡಿಸಿಯಲ್ಲಿ ಅಮೆರಿಕನ್ ಏರ್​ಲೈನ್ಸ್​ ವಿಮಾನ ಹಾಗೂ ಯುಎಸ್ ಸೇನಾ ಹೆಲಿಕಾಪ್ಟರ್​ ನಡುವೆ ಘರ್ಷಣೆ ಸಂಭವಿಸಿ ವಿಮಾನಗಳು ನದಿಗೆ ಅಪ್ಪಳಿಸಿದ ಪರಿಣಾಮ 67 ಮಂದಿ ಸಾವನ್ನಪ್ಪಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಇದು ತೀವ್ರ ದುಃಖದ ಘಟನೆ ಅಮೆರಿಕದ ಜನರೊಂದಿಗೆ ನಾವಿದ್ದೇವೆ ಎಂದು ಹೇಳಿದ್ದಾರೆ.

ಈ ಅಪಘಾತದಲ್ಲಿ 67 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ವಿಮಾನದಲ್ಲಿ 64 ಮಂದಿ ಇದ್ದರು. 60 ಮಂದಿ ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು. ಸೇನಾ ಹೆಲಿಕಾಪ್ಟರ್‌ನಲ್ಲಿದ್ದ ಮೂವರು ಸಹ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಅಮೆರಿಕನ್ ಏರ್​ಲೈನ್ಸ್​ ವಿಮಾನವು ಮಿಲಿಟರಿ ಹೆಲಿಕಾಪ್ಟರ್​ಗೆ ಡಿಕ್ಕಿ ಹೊಡೆದ ನಂತರ ಎರಡೂ ವಿಮಾನಗಳು ಅಪಘಾತಕ್ಕೀಡಾಗಿ ಸಾವು- ನೋವು ಸಂಭವಿಸಿದೆ. ಅಮೆರಿಕಾದ ರೊನಾಲ್ಡ್ ರೇಗನ್ ವಾಷಿಂಗ್ಟನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಪೊಟೊಮ್ಯಾಕ್ ನದಿಯಲ್ಲಿ ವಿಮಾನ ಬಿದ್ದಿದೆ. ಈ ನದಿಯಲ್ಲಿ ಶವಗಳು ಪತ್ತೆಯಾಗಿವೆ ಎನ್ನುವ ಮಾಹಿತಿ ಕೂಡಾ ದೊರೆತಿದೆ.

ಮೋದಿ ಟ್ವೀಟ್

ಸೇನಾ ಹೆಲಿಕಾಪ್ಟರ್ ಮತ್ತು ವಿಮಾನದ ನಡುವೆ ಡಿಕ್ಕಿ ಸಂಭವಿಸಿದ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಅಷ್ಟಕ್ಕೂ ಸೇನಾ ಹೆಲಿಕಾಪ್ಟರ್ ಹಠಾತ್ತಾಗಿ ಬಂದಿದ್ದು ಹೇಗೆ? ಸೇನಾ ಹೆಲಿಕಾಪ್ಟರ್‌ನಲ್ಲಿದ್ದವರು ಯಾರು? ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ (FAA) ಮತ್ತು ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ (NTSB) ರೊನಾಲ್ಡ್ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ವಾಯುಪ್ರದೇಶದಲ್ಲಿ ನಡೆದ ಘಟನೆಯನ್ನು ತನಿಖೆ ಮಾಡುತ್ತಿದೆ. ಅಪಘಾತದ ನಂತರ, ತುರ್ತು ಪರಿಸ್ಥಿತಿಯಿಂದಾಗಿ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮುಚ್ಚಲಾಗಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ