AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯನಾಡ್​​ನಲ್ಲಿ ವೈಮಾನಿಕ ಸಮೀಕ್ಷೆ; ಕಲ್ಪಟ್ಟಾದಿಂದ ಚೂರಲ್​​​ಮಲಗೆ ಪ್ರಯಾಣಿಸಿದ ಮೋದಿ

ಭೂಕುಸಿತದಿಂದ ತತ್ತರಿಸಿರುವ ವಯನಾಡಿನ ಮುಂಡಕೈ-ಚೂರಲ್‌ಮಲ ಪ್ರದೇಶದಲ್ಲಿ ಪ್ರಧಾನಿ ನರೇಂದ್ರಮೋದಿ ವೈಮಾನಿಕ ಸಮೀಕ್ಷೆ ನಡೆಸಿದರು. ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಕಲ್ಪೆಟ್ಟಾದಲ್ಲಿ ಎಸ್.ಕೆ.ಎಂ.ಜೆ. ಶಾಲಾ ಮೈದಾನದಲ್ಲಿರುವ ಹೆಲಿಪ್ಯಾಡ್‌ಗೆ ಬಂದಿಳಿದ ಮೋದಿ ಅಲ್ಲಿಂದ ರಸ್ತೆ ಮಾರ್ಗವಾಗಿ ಚೂರಲ್‌ಮಲಗೆ ತೆರಳಿದ್ದಾರೆ.

ವಯನಾಡ್​​ನಲ್ಲಿ ವೈಮಾನಿಕ ಸಮೀಕ್ಷೆ; ಕಲ್ಪಟ್ಟಾದಿಂದ ಚೂರಲ್​​​ಮಲಗೆ ಪ್ರಯಾಣಿಸಿದ ಮೋದಿ
ಮೋದಿ-ಪಿಣರಾಯಿ
ರಶ್ಮಿ ಕಲ್ಲಕಟ್ಟ
|

Updated on:Aug 10, 2024 | 1:25 PM

Share

ಕಲ್ಪಟ್ಟ ಆಗಸ್ಟ್ 10: ವಯನಾಡಿನ (Wayanad) ವಿಪತ್ತು ಪೀಡಿತ ಪ್ರದೇಶಗಳ ವೈಮಾನಿಕ ಕಣ್ಗಾವಲು ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಲ್ಪಟ್ಟಾದಿಂದ ಚೂರಲ್‌ಮಲಗೆ (chooralmala) ರಸ್ತೆ ಮೂಲಕ ಪ್ರಯಾಣಿಸಿದ್ದಾರೆ. ಕಣ್ಣೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಹೆಲಿಕಾಪ್ಟರ್ ಮೂಲಕ ವಯನಾಡ್ ತಲುಪಿದರು. ನಂತರ ಭೂಕುಸಿತ ಸಂಭವಿಸಿದ ಮುಂಡಕೈ- ಚೂರಲ್‌ಮಲ-ಪುಂಚಿರಿಮಟ್ಟಂ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ  ನಡೆಸಲಾಯಿತು. ಪ್ರಧಾನಮಂತ್ರಿಯವರೊಂದಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇಂದ್ರ ಸಚಿವ ಸುರೇಶ್ ಗೋಪಿ ಮತ್ತಿತರರು ಉಪಸ್ಥಿತರಿದ್ದರು. ಶಿಬಿರದಲ್ಲಿರುವವರನ್ನು ಮೋದಿ ಖುದ್ದಾಗಿ ಭೇಟಿ ಮಾಡಿ ಮಾತನಾಡಲಿದ್ದಾರೆ. ಸಂತ್ರಸ್ತರ ಪುನರ್ವಸತಿಗಾಗಿ ಕೇಂದ್ರದಿಂದ 2000 ಕೋಟಿ ವಿಶೇಷ ಪ್ಯಾಕೇಜ್ ಕೋರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇಂದು ಬೆಳಗ್ಗೆ 11 ಗಂಟೆಗೆ ಮೋದಿ ಕಣ್ಣೂರು ವಿಮಾನ ನಿಲ್ದಾಣ ತಲುಪಿದರು. ಶಾಸಕಿ ಕೆ.ಕೆ. ಶೈಲಜಾ, ಮುಖ್ಯ ಕಾರ್ಯದರ್ಶಿ ಡಾ.ವಿ. ವೇಣು, ಡಿಜಿಪಿ ಶೇಖ್ ದರ್ವೇಶ್ ಸಾಹಿಬ್, ಜಿಲ್ಲಾಧಿಕಾರಿ ಅರುಣ್ ಕೆ.ವಿಜಯನ್, ನಗರ ಪೊಲೀಸ್ ಆಯುಕ್ತ ಅಜಿತ್ ಕುಮಾರ್, ಎ.ಪಿ. ಅಬ್ದುಲ್ಲಕುಟ್ಟಿ, ಸಿ.ಕೆ. ಪದ್ಮನಾಭನ್ ಮತ್ತಿತರರು ಕೂಡ ವಿಮಾನ ನಿಲ್ದಾಣದಲ್ಲಿ ಪ್ರಧಾನಿಯನ್ನು ಬರಮಾಡಿಕೊಳ್ಳಲು ಬಂದಿದ್ದರು.

ವೈಮಾನಿಕ ಸಮೀಕ್ಷೆ ನಡೆಸಿದ ಮೋದಿ

ದುರಂತದಲ್ಲಿ ಬದುಕುಳಿದ ಮತ್ತು ಚಿಕಿತ್ಸೆ ಪಡೆಯುತ್ತಿರುವವರನ್ನೂ ಪ್ರಧಾನಿ ಭೇಟಿ ಮಾಡಲಿದ್ದಾರೆ. ಮೇಪ್ಪಾಡಿ ಆಸ್ಪತ್ರೆಯಲ್ಲಿರುವ ಅರುಣ್, ಅನಿಲ್, ಎಂಟು ವರ್ಷದ ಆವಂತಿಕಾ ಮತ್ತು ಒಡಿಶಾದ ಸುಹೃತಿ ಅವರನ್ನು ಮೋದಿ ಭೇಟಿ ಮಾಡುತ್ತಿದ್ದಾರೆ. ಮಣ್ಣಿನ ದಿಬ್ಬದಲ್ಲಿ ಸಿಲುಕಿದ ಗಂಟೆಗಳ ನಂತರ ರಕ್ಷಣಾ ಕಾರ್ಯಕರ್ತರು ಅರುಣ್ ಅವರನ್ನು ರಕ್ಷಿಸಿದ್ದು, ಅನಿಲ್ ಬೆನ್ನುಮೂಳೆಯ ಗಾಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಬಂಧಮುಕ್ತರಾದ ನಂತರ ಮಹಾತ್ಮ ಗಾಂಧಿಯವರ ಸ್ಮಾರಕ, ಹನುಮಾನ್ ಮಂದಿರಕ್ಕೆ ಭೇಟಿ ನೀಡಿದ ಮನೀಶ್ ಸಿಸೋಡಿಯಾ

ಇದಾದ ಬಳಿಕ ಪ್ರಧಾನಿಯವರು ಸಂತ್ರಸ್ತ ಜನರನ್ನು ಭೇಟಿ ಮಾಡಲಿದ್ದಾರೆ. ಪರಿಹಾರ ಶಿಬಿರಗಳು ಮತ್ತು ಆಸ್ಪತ್ರೆಗಳಲ್ಲಿ ಇರುವವರೊಂದಿಗೆ ಅವರು ಮಾತನಾಡಲಿದ್ದಾರೆ. ನಂತರ ವಯನಾಡ್ ಕಲೆಕ್ಟರೇಟ್ ತಲುಪಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. 3.15ಕ್ಕೆ ಕಣ್ಣೂರಿಗೆ ಹಿಂತಿರುಗಲಿದ್ದು  ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 3.55ಕ್ಕೆ ದೆಹಲಿಗೆ ಹೊರಡಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Sat, 10 August 24

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ