ನಿಮ್ಮ ಸಾಧನೆಯನ್ನು ಇಡೀ ರಾಷ್ಟ್ರ ಗೌರವಿಸುತ್ತದೆ; ಪದ್ಮ ಪ್ರಶಸ್ತಿಗೆ ಭಾಜನರಾದವರಿಗೆ ಪ್ರಧಾನಿ ಮೋದಿ ಅಭಿನಂದನೆ

ಈ ವರ್ಷ ಒಂದು ಜೋಡಿಗೆ ಸೇರಿ ಒಟ್ಟು 128 ಮಂದಿಗೆ ಪದ್ಮ ಪ್ರಶಸ್ತಿ ನೀಡಲು ರಾಷ್ಟ್ರಪತಿ ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ. ಇವರಲ್ಲಿ ನಾಲ್ಕು ಜನರಿಗೆ ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ.

ನಿಮ್ಮ ಸಾಧನೆಯನ್ನು ಇಡೀ ರಾಷ್ಟ್ರ ಗೌರವಿಸುತ್ತದೆ; ಪದ್ಮ ಪ್ರಶಸ್ತಿಗೆ ಭಾಜನರಾದವರಿಗೆ ಪ್ರಧಾನಿ ಮೋದಿ ಅಭಿನಂದನೆ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Follow us
TV9 Web
| Updated By: Lakshmi Hegde

Updated on:Jan 26, 2022 | 7:40 AM

ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅಭಿನಂದನೆ ಸಲ್ಲಿಸಿದ್ದಾರೆ. ಇವರ ಸಾಧನೆಗಳನ್ನು ಇಡೀ ರಾಷ್ಟ್ರವೇ ಗೌರವಿಸುತ್ತದೆ ಎಂದು ಹೇಳಿದ್ದಾರೆ. ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಎಲ್ಲರಿಗೂ ಅಭಿನಂದನೆಗಳು. ಇಡೀ ರಾಷ್ಟ್ರವೇ ಗೌರವ ಪಡುತ್ತಿದೆ. ಸಮಾಜಕ್ಕೆ ನೀವು ನೀಡಿದ ಕೊಡುಗೆಗಳ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ ಎಂದು ಹೇಳಿದ್ದಾರೆ.

ಈ ವರ್ಷ ಒಂದು ಜೋಡಿಗೆ ಸೇರಿ ಒಟ್ಟು 128 ಮಂದಿಗೆ ಪದ್ಮ ಪ್ರಶಸ್ತಿ ನೀಡಲು ರಾಷ್ಟ್ರಪತಿ ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ. ಇವರಲ್ಲಿ ನಾಲ್ಕು ಜನರಿಗೆ ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ. ಪ್ರತಿವರ್ಷವೂ ಗಣರಾಜ್ಯೋತ್ಸವದ ಮುನ್ನಾದಿನ ಈ ಪ್ರಶಸ್ತಿ ಘೋಷಣೆಯಾಗುತ್ತದೆ. ಹಾಗೇ, ಈ ಸಲವೂ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದ್ದು, ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್​ ದುರಂತದಲ್ಲಿ ಮಡಿದ ಮಾಜಿ ಸಿಡಿಎಸ್​ ಬಿಪಿನ್​ ರಾವತ್​ ಸೇರಿ ಒಟ್ಟು 13 ಜನರು ಮರಣೋತ್ತರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಿಪಿನ್​ ರಾವತ್​ಗೆ ಮರಣೋತ್ತದ ಪದ್ಮವಿಭೂಷಣ ಘೋಷಿಸಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 34 ಮಹಿಳೆಯರು ಮತ್ತು 10 ವಿದೇಶಿಯರು ಇದ್ದಾರೆ.

ಪದ್ಮ ಪ್ರಶಸ್ತಿಗಳನ್ನು 1954 ರಲ್ಲಿ ಸ್ಥಾಪಿಸಲಾಯಿತು ಮತ್ತು ಶಿಕ್ಷಣ, ಕಲೆ, ಸಾಹಿತ್ಯ, ವಿಜ್ಞಾನ, ನಟನೆ, ಸಮಾಜ ಸೇವೆ ಮತ್ತು ಸಾರ್ವಜನಿಕ ವ್ಯವಹಾರಗಳು ಸೇರಿದಂತೆ ಚಟುವಟಿಕೆಯ ವಿವಿಧ ಕ್ಷೇತ್ರಗಳಲ್ಲಿ ಅವರ ವಿಶಿಷ್ಟ ಕೊಡುಗೆಗಾಗಿ ಭಾರತದ ನಾಗರಿಕರಿಗೆ ನೀಡಲಾಗುತ್ತದೆ.

ಇದನ್ನೂ ಓದಿ: Republic Day 2022: ಇಂದು 73ನೇ ಗಣರಾಜ್ಯೋತ್ಸವ; ಭಾರತಕ್ಕೆ ಸಂವಿಧಾನ ಬಂದು, ಅಸ್ತಿತ್ವ ರೂಪಿಸಿಕೊಂಡಿದ್ದನ್ನು ಸಾರುವ ಹಬ್ಬ

Published On - 7:39 am, Wed, 26 January 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್