ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅಭಿನಂದನೆ ಸಲ್ಲಿಸಿದ್ದಾರೆ. ಇವರ ಸಾಧನೆಗಳನ್ನು ಇಡೀ ರಾಷ್ಟ್ರವೇ ಗೌರವಿಸುತ್ತದೆ ಎಂದು ಹೇಳಿದ್ದಾರೆ. ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಎಲ್ಲರಿಗೂ ಅಭಿನಂದನೆಗಳು. ಇಡೀ ರಾಷ್ಟ್ರವೇ ಗೌರವ ಪಡುತ್ತಿದೆ. ಸಮಾಜಕ್ಕೆ ನೀವು ನೀಡಿದ ಕೊಡುಗೆಗಳ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ ಎಂದು ಹೇಳಿದ್ದಾರೆ.
Congratulations to all those who have been conferred the Padma awards. The entire nation cherishes their accomplishments and we are all proud of their contributions to society. https://t.co/ZWp1oyLbUB
— Narendra Modi (@narendramodi) January 25, 2022
ಈ ವರ್ಷ ಒಂದು ಜೋಡಿಗೆ ಸೇರಿ ಒಟ್ಟು 128 ಮಂದಿಗೆ ಪದ್ಮ ಪ್ರಶಸ್ತಿ ನೀಡಲು ರಾಷ್ಟ್ರಪತಿ ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ. ಇವರಲ್ಲಿ ನಾಲ್ಕು ಜನರಿಗೆ ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ. ಪ್ರತಿವರ್ಷವೂ ಗಣರಾಜ್ಯೋತ್ಸವದ ಮುನ್ನಾದಿನ ಈ ಪ್ರಶಸ್ತಿ ಘೋಷಣೆಯಾಗುತ್ತದೆ. ಹಾಗೇ, ಈ ಸಲವೂ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದ್ದು, ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಮಾಜಿ ಸಿಡಿಎಸ್ ಬಿಪಿನ್ ರಾವತ್ ಸೇರಿ ಒಟ್ಟು 13 ಜನರು ಮರಣೋತ್ತರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಿಪಿನ್ ರಾವತ್ಗೆ ಮರಣೋತ್ತದ ಪದ್ಮವಿಭೂಷಣ ಘೋಷಿಸಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 34 ಮಹಿಳೆಯರು ಮತ್ತು 10 ವಿದೇಶಿಯರು ಇದ್ದಾರೆ.
ಪದ್ಮ ಪ್ರಶಸ್ತಿಗಳನ್ನು 1954 ರಲ್ಲಿ ಸ್ಥಾಪಿಸಲಾಯಿತು ಮತ್ತು ಶಿಕ್ಷಣ, ಕಲೆ, ಸಾಹಿತ್ಯ, ವಿಜ್ಞಾನ, ನಟನೆ, ಸಮಾಜ ಸೇವೆ ಮತ್ತು ಸಾರ್ವಜನಿಕ ವ್ಯವಹಾರಗಳು ಸೇರಿದಂತೆ ಚಟುವಟಿಕೆಯ ವಿವಿಧ ಕ್ಷೇತ್ರಗಳಲ್ಲಿ ಅವರ ವಿಶಿಷ್ಟ ಕೊಡುಗೆಗಾಗಿ ಭಾರತದ ನಾಗರಿಕರಿಗೆ ನೀಡಲಾಗುತ್ತದೆ.
ಇದನ್ನೂ ಓದಿ: Republic Day 2022: ಇಂದು 73ನೇ ಗಣರಾಜ್ಯೋತ್ಸವ; ಭಾರತಕ್ಕೆ ಸಂವಿಧಾನ ಬಂದು, ಅಸ್ತಿತ್ವ ರೂಪಿಸಿಕೊಂಡಿದ್ದನ್ನು ಸಾರುವ ಹಬ್ಬ
Published On - 7:39 am, Wed, 26 January 22