AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಕ್ಸ್​​ನಲ್ಲಿ 100 ಮಿಲಿಯನ್​ ತಲುಪಿದ ಪ್ರಧಾನಿ ಮೋದಿ ಫಾಲೋವರ್ಸ್: ಹೊಸ ಮೈಲಿಗಲ್ಲು ಸೃಷ್ಟಿಸಿದ ನಮೋ

ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ 100 ಮಿಲಿಯನ್ ಫಾಲೋವರ್ಸ್​ಗಳನ್ನು ಹೊಂದುವ ಮೂಲಕ ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆ. ಆ ಮೂಲಕ ಎಕ್ಸ್​ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದುವ ಮೂಲಕ ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಸುಮಾರು 30 ಮಿಲಿಯನ್ ಫಾಲೋವರ್ಸ್​ಗಳನ್ನು ಹೊಂದುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಎಕ್ಸ್​​ನಲ್ಲಿ 100 ಮಿಲಿಯನ್​ ತಲುಪಿದ ಪ್ರಧಾನಿ ಮೋದಿ ಫಾಲೋವರ್ಸ್: ಹೊಸ ಮೈಲಿಗಲ್ಲು ಸೃಷ್ಟಿಸಿದ ನಮೋ
ಎಕ್ಸ್​​ನಲ್ಲಿ 100 ಮಿಲಿಯನ್​ ತಲುಪಿದ ಪ್ರಧಾನಿ ಮೋದಿ ಫಾಲೋವರ್ಸ್: ಹೊಸ ಮೈಲಿಗಲ್ಲು ಸೃಷ್ಟಿಸಿದ ನಮೋ
ಗಂಗಾಧರ​ ಬ. ಸಾಬೋಜಿ
|

Updated on:Jul 14, 2024 | 10:03 PM

Share

ದೆಹಲಿ, ಜುಲೈ 14: ಪ್ರಧಾನಿ ನರೇಂದ್ರ ಮೋದಿ (Narendra Modi) ಅತ್ಯಂತ ಪ್ರಭಾವಿ ನಾಯಕರಿಲ್ಲಿ ಒಬ್ಬರು. ದಿನದಿಂದ ದಿನಕ್ಕೆ ಅವರ ವರ್ಚಸ್ಸು ಹೆಚ್ಚುತ್ತಲೇ ಇದೆ. ಪ್ರಧಾನಿ ಆದ ಬಳಿಕ ವಿಶ್ವದ ಜನಪ್ರಿಯ ನಾಯಕರಲ್ಲಿ ಒಬ್ಬರಾಗಿದ್ದಾರೆ. ಪ್ರಧಾನಿ ಮೋದಿ ಅವರು ಇದೀಗ ತಮ್ಮ ಸೋಶಿಯಲ್​ ಮೀಡಿಯಾ (Social media) ಮೂಲಕ ಹೊಸದೊಂದು ಮೈಲಿಗಲ್ಲು ಸಾಧಿಸಿದ್ದಾರೆ. ಎಕ್ಸ್​ನಲ್ಲಿ (ಟ್ವಿಟರ್​) 100 ಮಿಲಿಯನ್​​ ಫಾಲೋವರ್ಸ್​​​ ಹೊಂದಿದ್ದಾರೆ. ಆ ಮೂಲಕ ವಿಶ್ವ ನಾಯಕರಾಗಿ ಮೋದಿ ಹೊರಹೊಮ್ಮಿದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿ ಅವರು ಟ್ವೀಟ್​ ಮಾಡಿದ್ದು, ಎಕ್ಸ್​ನಲ್ಲಿ ನೂರು ಮಿಲಿಯನ್! ಈ ರೋಮಾಂಚಕ ಮಾಧ್ಯಮದಲ್ಲಿರುವುದಕ್ಕೆ ಸಂತೋಷವಾಗಿದೆ. ಮೆಚ್ಚುಗೆ, ನಿರ್ಧಾರ, ಚರ್ಚೆ, ಒಳನೋಟ, ಜನರ ಆಶೀರ್ವಾದ, ರಚನಾತ್ಮಕ ಟೀಕೆ ಇತ್ಯಾದಿ. ಭವಿಷ್ಯದಲ್ಲೂ ಅಷ್ಟೇ ಆಸಕ್ತಿದಾಯಕ ಸಮಯವನ್ನು ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಯಾರಿಗೆ ಎಷ್ಟೆಷ್ಟು ಫಾಲೋವರ್ಸ್​?

ವಿವಿಧ ಭಾರತೀಯ ರಾಜಕಾರಣಿಗಳ ಸಾಮಾಜಿಕ ಮಾಧ್ಯಮಗಳ ಫಾಲೋವರ್ಸ್​​ಗಳಿಗೆ ಹೋಲಿಸಿದಾಗ ಪ್ರಧಾನಿ ಮೋದಿ ಅವರು ಅತೀ ಹೆಚ್ಚು ಫಾಲೋವರ್ಸ್​ಗಳನ್ನು ಹೊಂದಿರುವುದು ಗಮನಾರ್ಹ ವಿಷಯವಾಗಿದೆ. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ 26.4 ಮಿಲಿಯನ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 27.5 ಮಿಲಿಯನ್, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ 19.9 ಮಿಲಿಯನ್ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 7.4 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್​ 

ಆರ್​ಜೆಡಿಯ ಲಾಲು ಪ್ರಸಾದ್ ಯಾದವ್ 6.3 ಮಿಲಿಯನ್, ತೇಜಸ್ವಿ ಯಾದವ್ 5.2 ಮಿಲಿಯನ್ ಫಾಲೋವರ್ಸ್ ಹೊಂದಿದ್ದರೆ, ಎಸ್​ಸಿಪಿ ಮುಖ್ಯಸ್ಥ ಶರದ್ ಪವಾರ್ 2.9 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.

ಇದನ್ನೂ ಓದಿ: ವಿಶ್ವ ನಾಯಕರ ನಡುವೆ ಮಿಂಚಿದ ಪ್ರಧಾನಿ ಮೋದಿ

ಇನ್ನು 38.1 ಮಿಲಿಯನ್ ಫಾಲೋವರ್ಸ್ ಹೊಂದಿರುವ​ ಯುಎಸ್ ಅಧ್ಯಕ್ಷ ಜೋ ಬೈಡನ್, ದುಬೈನ ಹೆಚ್​​ಹೆಚ್​​ ಶೇಖ್ ಮೊಹಮ್ಮದ್ 11.2 ಮಿಲಿಯನ್ ಮತ್ತು ಪೋಪ್ ಫ್ರಾನ್ಸಿಸ್ ಅವರಂತಹ ಇತರೆ ವಿಶ್ವ ನಾಯಕರಿಗಿಂತ ಪ್ರಧಾನಿ ಮೋದಿ ಬಹಳ ಮುಂದಿದ್ದಾರೆ.

ಎಕ್ಸ್​​ನಲ್ಲಿ ಪ್ರಧಾನಿ ಮೋದಿಯವರ ಜನಪ್ರಿಯತೆ ಕಂಡು ವಿಶ್ವ ನಾಯಕರು ಸೋಶಿಯಲ್​ ಮೀಡಿಯಾದಲ್ಲಿ ಮೋದಿಯವರೊಂದಿಗೆ ತೊಡಗಿಸಿಕೊಳ್ಳಲು ಉತ್ಸುಕರಾಗಿದ್ದಾರೆ. ಏಕೆಂದರೆ ಅವರೊಂದಿಗೆ ಸಂಪರ್ಕ ಸಾಧಿಸುವುದರಿಂದ ಅವರ ಸ್ವಂತ ಫಾಲೋವರ್ಸ್​ಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಕಳೆದ 3-4 ವರ್ಷಗಳಲ್ಲಿ 8 ಕೋಟಿ ಹೊಸ ಉದ್ಯೋಗ ಸೃಷ್ಟಿಯಾಗಿದೆ: ಪ್ರಧಾನಿ ಮೋದಿ

ವಿರಾಟ್ ಕೊಹ್ಲಿ 64.1 ಮಿಲಿಯನ್, ಬ್ರೆಜಿಲಿಯನ್ ಫುಟ್ಬಾಲ್ ಆಟಗಾರ ನೇಮರ್ ಜೂನಿಯರ್ 63.6 ಮಿಲಿಯನ್ ಮತ್ತು ಅಮೆರಿಕದ ಬಾಸ್ಕೆಟ್‌ಬಾಲ್ ಆಟಗಾರ ಲೆಬ್ರಾನ್ ಜೇಮ್ಸ್ 52.9 ಮಿಲಿಯನ್ ಫಾಲೋವರ್ಸ್​ಳಂತಹ ಕೆಲವು ಸಕ್ರಿಯ ಜಾಗತಿಕ ಕ್ರೀಡಾಪಟುಗಳಿಗೆ ಹೋಲಿಸಿದರೆ ಪ್ರಧಾನಿ ಮೋದಿ ಹೆಚ್ಚು ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:24 pm, Sun, 14 July 24

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್