ದೆಹಲಿ, ಜುಲೈ 14: ಪ್ರಧಾನಿ ನರೇಂದ್ರ ಮೋದಿ (Narendra Modi) ಅತ್ಯಂತ ಪ್ರಭಾವಿ ನಾಯಕರಿಲ್ಲಿ ಒಬ್ಬರು. ದಿನದಿಂದ ದಿನಕ್ಕೆ ಅವರ ವರ್ಚಸ್ಸು ಹೆಚ್ಚುತ್ತಲೇ ಇದೆ. ಪ್ರಧಾನಿ ಆದ ಬಳಿಕ ವಿಶ್ವದ ಜನಪ್ರಿಯ ನಾಯಕರಲ್ಲಿ ಒಬ್ಬರಾಗಿದ್ದಾರೆ. ಪ್ರಧಾನಿ ಮೋದಿ ಅವರು ಇದೀಗ ತಮ್ಮ ಸೋಶಿಯಲ್ ಮೀಡಿಯಾ (Social media) ಮೂಲಕ ಹೊಸದೊಂದು ಮೈಲಿಗಲ್ಲು ಸಾಧಿಸಿದ್ದಾರೆ. ಎಕ್ಸ್ನಲ್ಲಿ (ಟ್ವಿಟರ್) 100 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಆ ಮೂಲಕ ವಿಶ್ವ ನಾಯಕರಾಗಿ ಮೋದಿ ಹೊರಹೊಮ್ಮಿದ್ದಾರೆ.
ಈ ಬಗ್ಗೆ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದು, ಎಕ್ಸ್ನಲ್ಲಿ ನೂರು ಮಿಲಿಯನ್! ಈ ರೋಮಾಂಚಕ ಮಾಧ್ಯಮದಲ್ಲಿರುವುದಕ್ಕೆ ಸಂತೋಷವಾಗಿದೆ. ಮೆಚ್ಚುಗೆ, ನಿರ್ಧಾರ, ಚರ್ಚೆ, ಒಳನೋಟ, ಜನರ ಆಶೀರ್ವಾದ, ರಚನಾತ್ಮಕ ಟೀಕೆ ಇತ್ಯಾದಿ. ಭವಿಷ್ಯದಲ್ಲೂ ಅಷ್ಟೇ ಆಸಕ್ತಿದಾಯಕ ಸಮಯವನ್ನು ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ವಿವಿಧ ಭಾರತೀಯ ರಾಜಕಾರಣಿಗಳ ಸಾಮಾಜಿಕ ಮಾಧ್ಯಮಗಳ ಫಾಲೋವರ್ಸ್ಗಳಿಗೆ ಹೋಲಿಸಿದಾಗ ಪ್ರಧಾನಿ ಮೋದಿ ಅವರು ಅತೀ ಹೆಚ್ಚು ಫಾಲೋವರ್ಸ್ಗಳನ್ನು ಹೊಂದಿರುವುದು ಗಮನಾರ್ಹ ವಿಷಯವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 26.4 ಮಿಲಿಯನ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 27.5 ಮಿಲಿಯನ್, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ 19.9 ಮಿಲಿಯನ್ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 7.4 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.
A hundred million on @X!
Happy to be on this vibrant medium and cherish the discussion, debate, insights, people’s blessings, constructive criticism and more.
Looking forward to an equally engaging time in the future as well. pic.twitter.com/Gcl16wsSM5
— Narendra Modi (@narendramodi) July 14, 2024
ಆರ್ಜೆಡಿಯ ಲಾಲು ಪ್ರಸಾದ್ ಯಾದವ್ 6.3 ಮಿಲಿಯನ್, ತೇಜಸ್ವಿ ಯಾದವ್ 5.2 ಮಿಲಿಯನ್ ಫಾಲೋವರ್ಸ್ ಹೊಂದಿದ್ದರೆ, ಎಸ್ಸಿಪಿ ಮುಖ್ಯಸ್ಥ ಶರದ್ ಪವಾರ್ 2.9 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.
ಇದನ್ನೂ ಓದಿ: ವಿಶ್ವ ನಾಯಕರ ನಡುವೆ ಮಿಂಚಿದ ಪ್ರಧಾನಿ ಮೋದಿ
ಇನ್ನು 38.1 ಮಿಲಿಯನ್ ಫಾಲೋವರ್ಸ್ ಹೊಂದಿರುವ ಯುಎಸ್ ಅಧ್ಯಕ್ಷ ಜೋ ಬೈಡನ್, ದುಬೈನ ಹೆಚ್ಹೆಚ್ ಶೇಖ್ ಮೊಹಮ್ಮದ್ 11.2 ಮಿಲಿಯನ್ ಮತ್ತು ಪೋಪ್ ಫ್ರಾನ್ಸಿಸ್ ಅವರಂತಹ ಇತರೆ ವಿಶ್ವ ನಾಯಕರಿಗಿಂತ ಪ್ರಧಾನಿ ಮೋದಿ ಬಹಳ ಮುಂದಿದ್ದಾರೆ.
ಎಕ್ಸ್ನಲ್ಲಿ ಪ್ರಧಾನಿ ಮೋದಿಯವರ ಜನಪ್ರಿಯತೆ ಕಂಡು ವಿಶ್ವ ನಾಯಕರು ಸೋಶಿಯಲ್ ಮೀಡಿಯಾದಲ್ಲಿ ಮೋದಿಯವರೊಂದಿಗೆ ತೊಡಗಿಸಿಕೊಳ್ಳಲು ಉತ್ಸುಕರಾಗಿದ್ದಾರೆ. ಏಕೆಂದರೆ ಅವರೊಂದಿಗೆ ಸಂಪರ್ಕ ಸಾಧಿಸುವುದರಿಂದ ಅವರ ಸ್ವಂತ ಫಾಲೋವರ್ಸ್ಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.
ಇದನ್ನೂ ಓದಿ: ಕಳೆದ 3-4 ವರ್ಷಗಳಲ್ಲಿ 8 ಕೋಟಿ ಹೊಸ ಉದ್ಯೋಗ ಸೃಷ್ಟಿಯಾಗಿದೆ: ಪ್ರಧಾನಿ ಮೋದಿ
ವಿರಾಟ್ ಕೊಹ್ಲಿ 64.1 ಮಿಲಿಯನ್, ಬ್ರೆಜಿಲಿಯನ್ ಫುಟ್ಬಾಲ್ ಆಟಗಾರ ನೇಮರ್ ಜೂನಿಯರ್ 63.6 ಮಿಲಿಯನ್ ಮತ್ತು ಅಮೆರಿಕದ ಬಾಸ್ಕೆಟ್‌ಬಾಲ್ ಆಟಗಾರ ಲೆಬ್ರಾನ್ ಜೇಮ್ಸ್ 52.9 ಮಿಲಿಯನ್ ಫಾಲೋವರ್ಸ್ಳಂತಹ ಕೆಲವು ಸಕ್ರಿಯ ಜಾಗತಿಕ ಕ್ರೀಡಾಪಟುಗಳಿಗೆ ಹೋಲಿಸಿದರೆ ಪ್ರಧಾನಿ ಮೋದಿ ಹೆಚ್ಚು ಫಾಲೋವರ್ಸ್ಗಳನ್ನು ಹೊಂದಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:24 pm, Sun, 14 July 24