ದೇಶದಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ ಮಾತನಾಡಿದ ಮೋದಿ, ನಾವು ಏಕಕಾಲದಲ್ಲಿ ಎರಡು ವಿಷಯಗಳಲ್ಲಿ ಕೆಲಸ ಮಾಡಿದ್ದೇವೆ. ಮೊದಲನೆಯದಾಗಿ, ಬ್ಯಾಂಕಿಂಗ್ ವ್ಯವಸ್ಥೆಯನ್ನು ಸುಧಾರಿಸುವುದು...

ದೇಶದಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Oct 16, 2022 | 12:54 PM

ದೆಹಲಿ: ದೇಶದಲ್ಲಿ ಆರ್ಥಿಕ ಒಳಗೊಳ್ಳುವಿಕೆಯನ್ನು ಉತ್ತೇಜಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ದೇಶಾದ್ಯಂತ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ (DBU) ಚಾಲನೆ ನೀಡಿದ್ದಾರೆ. ಡಿಬಿಯು ಗ್ರಾಹಕರಿಗೆ ಕಾಗದರಹಿತ, ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಸೈಬರ್ ಸುರಕ್ಷತೆ ಕುರಿತು ಆರ್ಥಿಕ ಸಾಕ್ಷರತೆ ಮತ್ತು ಗ್ರಾಹಕರಿಗೆ ಶಿಕ್ಷಣವನ್ನು ಹರಡುತ್ತವೆ. ದೇಶಾದ್ಯಂತ ಈ ಆರ್ಥಿಕ ವರ್ಷದಲ್ಲಿ ಡಿಬಿಯುಗಳ ಸ್ಥಾಪನೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ಘೋಷಿಸಿದರು. ಡಿಬಿಯು ಡಿಜಿಟಲ್ ಬ್ಯಾಂಕಿಂಗ್ ಸವಲತ್ತುಗಳನ್ನು ಒದಗಿಸುತ್ತಿದ್ದು, ಉಳಿತಾಯ ಖಾತೆ ತೆರೆಯುವುದು, ಬ್ಯಾಲೆನ್ಸ್-ಚೆಕ್, ಪ್ರಿಂಟ್ ಪಾಸ್‌ಬುಕ್, ಹಣ ವರ್ಗಾವಣೆ, ಸ್ಥಿರ ಠೇವಣಿಗಳಲ್ಲಿ ಹೂಡಿಕೆ, ಸಾಲದ ಅರ್ಜಿಗಳು, ನೀಡಿದ ಚೆಕ್‌ಗಳಿಗೆ ಪಾವತಿಯನ್ನು ನಿಲ್ಲಿಸುವ ಸೂಚನೆಗಳು, ಕ್ರೆಡಿಟ್/ಡೆಬಿಟ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಕೆ, ಖಾತೆಯ ವಿವರ ನೋಡುವುದು , ತೆರಿಗೆಗಳನ್ನು ಪಾವತಿ, ಬಿಲ್‌ಗಳನ್ನು ಪಾವತಿ ಮೊದಲಾದ ಬ್ಯಾಂಕಿಂಗ್ ಸೌಲಭ್ಯಗಳನ್ನು ಒದಗಿಸುತ್ತವೆ.

ಪತ್ರಿಕಾ ಪ್ರಕಟಣೆಯ ಪ್ರಕಾರ ಡಿಬಿಯುಗಳು ವರ್ಷಪೂರ್ತಿ ಬ್ಯಾಂಕಿಂಗ್ ಉತ್ಪನ್ನಗಳು ಮತ್ತು ಸೇವೆಗಳ ಬಗ್ಗೆ ಅನುಕೂಲಕರ ಪ್ರವೇಶ ಮತ್ತು ವರ್ಧಿತ ಡಿಜಿಟಲ್ ಅನುಭವವನ್ನು ಒದಗಿಸುವ ಗುರಿಯನ್ನು ಹೊಂದಿವೆ. ಇದು ಡಿಜಿಟಲ್ ಆರ್ಥಿಕ ಸಾಕ್ಷರತೆಯನ್ನು ಹರಡುವ ಜವಾಬ್ದಾರಿಯನ್ನು ಹೊಂದಿದ್ದು, ಸೈಬರ್ ಭದ್ರತೆಯ ಜಾಗೃತಿ ಮತ್ತು ಸುರಕ್ಷತೆಗಳ ಮೇಲೆ ಗ್ರಾಹಕರ ಶಿಕ್ಷಣಕ್ಕಾಗಿ ವಿಶೇಷ ಒತ್ತು ನೀಡುತ್ತದೆ.

75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ ಮಾತನಾಡಿದ ಮೋದಿ, ನಾವು ಏಕಕಾಲದಲ್ಲಿ ಎರಡು ವಿಷಯಗಳಲ್ಲಿ ಕೆಲಸ ಮಾಡಿದ್ದೇವೆ. ಮೊದಲನೆಯದಾಗಿ, ಬ್ಯಾಂಕಿಂಗ್ ವ್ಯವಸ್ಥೆಯನ್ನು ಸುಧಾರಿಸುವುದು, ಅದನ್ನು ಬಲಪಡಿಸುವುದು ಮತ್ತು ಪಾರದರ್ಶಕತೆ ತರುವುದು. ಎರಡನೆಯದಾಗಿ, ನಾವು ಆರ್ಥಿಕತೆಯನ್ನು ಒಳಗೊಳ್ಳುವ ಕೆಲಸ ಮಾಡಿದ್ದೇವೆ. ಡಿಜಿಟಲೀಕರಣದ ಮೂಲಕ ಸಾಮಾಜಿಕ ಭದ್ರತೆಯನ್ನು ಖಾತರಿಪಡಿಸುವಲ್ಲಿ ಭಾರತವು ಮುಂಚೂಣಿಯಲ್ಲಿದೆ ಎಂದು ವಿಶ್ವ ಬ್ಯಾಂಕ್ ಹೇಳಿದೆ. ತಂತ್ರಜ್ಞಾನ ಕ್ಷೇತ್ರದ ಅತ್ಯಂತ ಯಶಸ್ವಿ ವ್ಯಕ್ತಿಗಳು, ಟೆಕ್ ಪ್ರಪಂಚದ ತಜ್ಞರು ಸಹ ಭಾರತದಲ್ಲಿ ಈ ವ್ಯವಸ್ಥೆಯನ್ನು ಶ್ಲಾಘಿಸುತ್ತಿದ್ದಾರೆ. ಅದರ ಯಶಸ್ಸಿನಿಂದ ಅವರೂ ಅಚ್ಚರಿಗೊಂಡಿದ್ದಾರೆ ಎಂದು ಮೋದಿ  ಹೇಳಿದ್ದಾರೆ.

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್