AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೆನ್‌ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಆರೋಗ್ಯ ವಿಚಾರಿಸಿರುವ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್​ನಲ್ಲಿ ಬರೆದಿದ್ದಾರೆ. ಹೇಮಂತ್ ಸೊರೆನ್ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಮೋದಿ ಹಾರೈಸಿದ್ದಾರೆ. ಅನಾರೋಗ್ಯದಿಂದ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೆನ್‌ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಚಂಪೈ ಸೋರೆನ್
ಸುಷ್ಮಾ ಚಕ್ರೆ
|

Updated on: Oct 07, 2024 | 6:25 PM

Share

ರಾಂಚಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ರಕ್ತದಲ್ಲಿನ ಸಕ್ಕರೆ ಸಂಬಂಧಿತ ಏರುಪೇರಿನ ಸಮಸ್ಯೆಗಳಿಂದ ಶನಿವಾರ ಜೆಮ್‌ಶೆಡ್‌ಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಚಂಪೈ ಸೊರೆನ್ ಅವರೊಂದಿಗೆ ಮಾತನಾಡಿ ಅವರ ಆರೋಗ್ಯ ವಿಚಾರಿಸಿದರು. ಶನಿವಾರ ರಾತ್ರಿ 9 ಗಂಟೆಗೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕುಸಿದಿದ್ದರಿಂದ ತಲೆಸುತ್ತಿ, ಚಂಪೈ ಸೊರೆನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ತಮ್ಮ ಆರೋಗ್ಯ ವಿಚಾರಿಸಿದ್ದಕ್ಕೆ ಚಂಪೈ ಸೊರೆನ್ ಅವರು ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ ಎಂದು ಅವರ ಸ್ನೇಹಿತರೊಬ್ಬರು ತಿಳಿಸಿದ್ದಾರೆ. ಚಂಪೈ ಸೊರೆನ್ ಈಗ ಆರೋಗ್ಯವಾಗಿದ್ದಾರೆ ಮತ್ತು ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮುಂಬೈ ಮೆಟ್ರೋ ಹತ್ತಿ ಪ್ರಯಾಣಿಕರ ಜೊತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಮೋದಿ ಪೋಸ್ಟ್ ಮಾಡಿದ್ದು, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. “ನಾನು ಮರಂಗ್ ಬುರು (ಬುಡಕಟ್ಟು ಜನಾಂಗದ ದೇವತೆ) ಚಂಪೈ ದಾ ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ಅವರ ದೀರ್ಘಾಯುಷ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಾಲ್ಡೀವ್ಸ್ ತೊಂದರೆಗೆ ಒಳಗಾದಾಗಲೆಲ್ಲಾ ಭಾರತ ಯಾವಾಗಲೂ ಮೊದಲು ಪ್ರತಿಕ್ರಿಯಿಸುತ್ತದೆ: ಮೋದಿ

ಚಂಪೈ ಸೊರೆನ್ ಅವರ ಸ್ಥಿತಿ ಸುಧಾರಿಸುತ್ತಿದ್ದು, ಅವರು ಸುಧಾರಿಸುತ್ತಿದ್ದಾರೆ ಎಂದು ಅವರು ದಾಖಲಾಗಿರುವ ಆಸ್ಪತ್ರೆಯ ಅಧಿಕಾರಿ ತಿಳಿಸಿದ್ದಾರೆ. 67 ವರ್ಷದ ಚಂಪೈ ಸೊರೆನ್ ಅವರು ಆಗಸ್ಟ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಫೆಬ್ರವರಿ 2ರಂದು ಜಾರಿ ನಿರ್ದೇಶನಾಲಯ (ED) ಹೇಮಂತ್ ಸೋರೆನ್ ಅವರನ್ನು ಬಂಧಿಸಿದ ನಂತರ ಮತ್ತು ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಚಂಪೈ ಸೋರೆನ್ ಅವರನ್ನು ಜಾರ್ಖಂಡ್ ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಆದರೆ, ಹೇಮಂತ್ ಸೋರೆನ್ ಜೈಲಿನಿಂದ ಬಿಡುಗಡೆಯಾದ ನಂತರ ಜುಲೈ 3ರಂದು ಅವರು ಸಿಎಂ ಸ್ಥಾನವನ್ನು ತೊರೆಯಬೇಕಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ
ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ