ರಾಂಚಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ರಕ್ತದಲ್ಲಿನ ಸಕ್ಕರೆ ಸಂಬಂಧಿತ ಏರುಪೇರಿನ ಸಮಸ್ಯೆಗಳಿಂದ ಶನಿವಾರ ಜೆಮ್‌ಶೆಡ್‌ಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಚಂಪೈ ಸೊರೆನ್ ಅವರೊಂದಿಗೆ ಮಾತನಾಡಿ ಅವರ ಆರೋಗ್ಯ ವಿಚಾರಿಸಿದರು. ಶನಿವಾರ ರಾತ್ರಿ 9 ಗಂಟೆಗೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕುಸಿದಿದ್ದರಿಂದ ತಲೆಸುತ್ತಿ, ಚಂಪೈ ಸೊರೆನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ತಮ್ಮ ಆರೋಗ್ಯ ವಿಚಾರಿಸಿದ್ದಕ್ಕೆ ಚಂಪೈ ಸೊರೆನ್ ಅವರು ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ ಎಂದು ಅವರ ಸ್ನೇಹಿತರೊಬ್ಬರು ತಿಳಿಸಿದ್ದಾರೆ. ಚಂಪೈ ಸೊರೆನ್ ಈಗ ಆರೋಗ್ಯವಾಗಿದ್ದಾರೆ ಮತ್ತು ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
स्वास्थ्य संबंधित परेशानियों की वजह से आज वीर भूमि भोगनाडीह में आयोजित “मांझी परगना महासम्मेलन” में वीडियो कॉन्फ्रेंसिंग के माध्यम से शामिल रहूंगा।
डॉक्टरों के अनुसार चिंता की कोई खास बात नहीं है। मैं शीघ्र पुर्णतः स्वस्थ होकर, आप सभी के बीच वापस आऊंगा।
जोहार ! pic.twitter.com/rUrCzCd7lK
— Champai Soren (@ChampaiSoren) October 6, 2024
ಇದನ್ನೂ ಓದಿ: ಮುಂಬೈ ಮೆಟ್ರೋ ಹತ್ತಿ ಪ್ರಯಾಣಿಕರ ಜೊತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಮೋದಿ ಪೋಸ್ಟ್ ಮಾಡಿದ್ದು, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. “ನಾನು ಮರಂಗ್ ಬುರು (ಬುಡಕಟ್ಟು ಜನಾಂಗದ ದೇವತೆ) ಚಂಪೈ ದಾ ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ಅವರ ದೀರ್ಘಾಯುಷ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಅವರು ಹೇಳಿದ್ದಾರೆ.
ईश्वर तथा पुरखों की कृपा, डॉक्टरों के अथक प्रयास और आप सभी की प्रार्थना एवं आशीर्वाद से मुझे अस्पताल से छुट्टी मिल गई है।
शुभेच्छाओं के लिए आप सभी को धन्यवाद !
— Champai Soren (@ChampaiSoren) October 7, 2024
ಇದನ್ನೂ ಓದಿ: ಮಾಲ್ಡೀವ್ಸ್ ತೊಂದರೆಗೆ ಒಳಗಾದಾಗಲೆಲ್ಲಾ ಭಾರತ ಯಾವಾಗಲೂ ಮೊದಲು ಪ್ರತಿಕ್ರಿಯಿಸುತ್ತದೆ: ಮೋದಿ
ಚಂಪೈ ಸೊರೆನ್ ಅವರ ಸ್ಥಿತಿ ಸುಧಾರಿಸುತ್ತಿದ್ದು, ಅವರು ಸುಧಾರಿಸುತ್ತಿದ್ದಾರೆ ಎಂದು ಅವರು ದಾಖಲಾಗಿರುವ ಆಸ್ಪತ್ರೆಯ ಅಧಿಕಾರಿ ತಿಳಿಸಿದ್ದಾರೆ. 67 ವರ್ಷದ ಚಂಪೈ ಸೊರೆನ್ ಅವರು ಆಗಸ್ಟ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಫೆಬ್ರವರಿ 2ರಂದು ಜಾರಿ ನಿರ್ದೇಶನಾಲಯ (ED) ಹೇಮಂತ್ ಸೋರೆನ್ ಅವರನ್ನು ಬಂಧಿಸಿದ ನಂತರ ಮತ್ತು ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಚಂಪೈ ಸೋರೆನ್ ಅವರನ್ನು ಜಾರ್ಖಂಡ್ ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಆದರೆ, ಹೇಮಂತ್ ಸೋರೆನ್ ಜೈಲಿನಿಂದ ಬಿಡುಗಡೆಯಾದ ನಂತರ ಜುಲೈ 3ರಂದು ಅವರು ಸಿಎಂ ಸ್ಥಾನವನ್ನು ತೊರೆಯಬೇಕಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ