AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್​ ಶಾ, ರಾಜನಾಥ್​ ಸಿಂಗ್​ ಜತೆ ಪ್ರಧಾನಿ ನರೇಂದ್ರ ಮೋದಿ ಸಭೆ; ಏನದು ಮಹತ್ವದ ವಿಷಯ?

ಇಂದು ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಅಮಿತ್​ ಶಾ, ರಾಜನಾಥ್​ ಸಿಂಗ್​ ಜತೆ ನಿರ್ಮಲಾ ಸೀತಾರಾಮನ್​, ಪಿಯೂಷ್​ ಗೋಯೆಲ್​ ಕೂಡ ಭಾಗವಹಿಸಿದ್ದರು.

ಅಮಿತ್​ ಶಾ, ರಾಜನಾಥ್​ ಸಿಂಗ್​ ಜತೆ ಪ್ರಧಾನಿ ನರೇಂದ್ರ ಮೋದಿ ಸಭೆ; ಏನದು ಮಹತ್ವದ ವಿಷಯ?
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Jun 20, 2021 | 4:13 PM

Share

ಪ್ರಧಾನಿ ನರೇಂದ್ರ ಮೋದಿಯವರು ಇಂದು ಗೃಹ ಸಚಿವ ಅಮಿತ್​ ಶಾ, ರಕ್ಷಣಾ ಸಚಿವ ರಾಜನಾಥ್​​ ಸಿಂಗ್​​ ಸೇರಿ ಹಲವು ಕೇಂದ್ರ ಸಚಿವರೊಂದಿಗೆ ತಮ್ಮ ನಿವಾಸದಲ್ಲಿ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿದೆ. ಈ ತಿಂಗಳ ಆರಂಭದಿಂದಲೂ ಪ್ರಧಾನಿ ಮೋದಿಯವರು ಕೇಂದ್ರ ಸಚಿವರೊಂದಿಗೆ ಸಭೆ ನಡೆಸುತ್ತಲೇ ಇದ್ದಾರೆ. ಎಲ್ಲರೊಂದಿಗೂ ಒಂದೇ ಬಾರಿ ನಡೆಸದೆ, ನಾಲ್ಕೈದು ಸಚಿವರಂತೆ ಚರ್ಚೆ ನಡೆಸುತ್ತಿದ್ದಾರೆ. ಇದುವರೆಗೂ ಇಂಥ ಐದು ಸಭೆಗಳು ನಡೆದಿವೆ.

ಪ್ರಧಾನಿ ನರೇಂದ್ರ ಮೋದಿಯವರು ಶೀಘ್ರದಲ್ಲೇ ಅಂದರೆ ಈ ತಿಂಗಳ ಕೊನೆ ಅಥವಾ ಜುಲೈ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳ ಕಾರ್ಯವೈಖರಿಯನ್ನೂ ಖುದ್ದಾಗಿ ಪರಿಶೀಲಿಸುತ್ತಿದ್ದಾರೆ. ಆಯಾ ಸಚಿವರೊಟ್ಟಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಕ್ಯಾಬಿನೆಟ್​ ವಿಸ್ತರಣೆ ಬಳಿಕ ಈಗಿನ ಕೆಲವರು ಸಚಿವರನ್ನು ಕೈಬಿಡುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದ್ದು, ಜ್ಯೋತಿರಾದಿತ್ಯ ಸಿಂಧಿಯಾ ಸೇರಿ ಹಲವು ಮೋದಿ ಸಂಪುಟ ಸೇರಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಹಾಗೇ, ಜೂನ್​ 24ರಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಜಮ್ಮು-ಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಉನ್ನತಮಟ್ಟದ ಸಭೆ ನಡೆಸಲಿದ್ದು, ಆ ಸಂಬಂಧ ಕೂಡ ಇಂದು ಅಮಿತ್ ಶಾ, ರಾಜನಾಥ್​ ಸಿಂಗ್​ ಜತೆ ಚರ್ಚೆ ನಡೆಸಿರಬಹುದು ಎನ್ನಲಾಗಿದೆ. ಜಮ್ಮುಕಾಶ್ಮೀರದಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆ ಸಂಬಂಧ ಭೂನಕ್ಷೆ, ಜನಸಂಖ್ಯೆ ಅಧ್ಯಯನ ಇತ್ಯಾದಿ ವಿಚಾರಗಳ ಬಗ್ಗೆ ಚರ್ಚಿಸಲು ಈ ಉನ್ನತ ಮಟ್ಟದ ಸಭೆ ಕರೆಯಲಾಗಿದೆ. ಇಂದಿನ ಸಭೆಯಲ್ಲಿ ಅಮಿತ್​ ಶಾ, ರಾಜನಾಥ್​ ಸಿಂಗ್​ ಜತೆ ನಿರ್ಮಲಾ ಸೀತಾರಾಮನ್​, ಪಿಯೂಷ್​ ಗೋಯೆಲ್​ ಕೂಡ ಭಾಗವಹಿಸಿದ್ದರು.

ಇದನ್ನೂ ಓದಿ: Farmers Protest: ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸ್ಥಳೀಯ ಹಳ್ಳಿಗಳ ಜನರ ಆಕ್ರೋಶ; 10 ದಿನ ಗಡುವು ಕೊಟ್ಟ ಗ್ರಾಮಸ್ಥರು

Follow Us
TV9 Web
TV9 Web

TV9 Kannada

Read More
‘ಪ್ಯಾರಡೈಸ್’ ಸೋಲು: ‘ಮಾರ್ಟಿನ್’ ದಿನಗಳನ್ನು ನೆನಪಿಸಿಕೊಂಡ ಉದಯ್ ಮೆಹ್ತಾ
‘ಪ್ಯಾರಡೈಸ್’ ಸೋಲು: ‘ಮಾರ್ಟಿನ್’ ದಿನಗಳನ್ನು ನೆನಪಿಸಿಕೊಂಡ ಉದಯ್ ಮೆಹ್ತಾ
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ