ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು 71,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತರಿಸಿದ್ದಾರೆ. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇದು ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣದಲ್ಲಿ ಭಾಗವಹಿಸಲು ಯುವಜನರಿಗೆ ಅರ್ಥಪೂರ್ಣ ಅವಕಾಶಗಳನ್ನು ಒದಗಿಸುತ್ತದೆ ಎಂದಿದ್ದಾರೆ. ದೇಶಾದ್ಯಂತ 45 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆಯಲಿದೆ. ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ನೇಮಕಾತಿಗಳು ನಡೆಯುತ್ತಿವೆ.
ಕಳೆದ 18 ತಿಂಗಳ ಅವಧಿಯಲ್ಲಿ ಸುಮಾರು 10 ಲಕ್ಷ ಜನರಿಗೆ ಖಾಯಂ ಸರ್ಕಾರಿ ಉದ್ಯೋಗ ನೀಡುವ ಮೂಲಕ ನಮ್ಮ ಸರ್ಕಾರ ದಾಖಲೆ ಸ್ಥಾಪಿಸಿದೆ. ಕಳೆದ 1ರಿಂದ 1.5 ವರ್ಷಗಳಲ್ಲಿ ನಮ್ಮ ಸರ್ಕಾರವು ಸುಮಾರು 10 ಲಕ್ಷ ಯುವಕರಿಗೆ ಶಾಶ್ವತ ಸರ್ಕಾರಿ ಉದ್ಯೋಗಗಳನ್ನು ನೀಡಿದೆ. ಇದು ಸ್ವತಃ ಬಹಳ ದೊಡ್ಡ ದಾಖಲೆಯಾಗಿದೆ. ಹಿಂದಿನ ಯಾವುದೇ ಸರ್ಕಾರದ ಅಧಿಕಾರಾವಧಿಯಲ್ಲಿ ಯುವಕರು ಶಾಶ್ವತ ಸರ್ಕಾರಿ ಉದ್ಯೋಗಗಳನ್ನು ಪಡೆದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿಗೆ ಕುವೈತ್‌ನ ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಪ್ರದಾನ
#WATCH | Prime Minister Narendra Modi says “I have returned from Kuwait late last night. There I had a long meeting with the youth and professionals of India. Now after coming here, my first program is being held with the youth of the country. It is a very pleasant occasion that… https://t.co/pz1VjynJ5O pic.twitter.com/CBHN2NBHMS
— ANI (@ANI) December 23, 2024
ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 71,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ಹೊಸದಾಗಿ ನೇಮಕಗೊಂಡವರಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನಾನು ನಿನ್ನೆ ತಡರಾತ್ರಿ ಕುವೈತ್‌ನಿಂದ ಹಿಂತಿರುಗಿದ್ದೇನೆ. ಅಲ್ಲಿ ನಾನು ಭಾರತದ ಯುವಕರು ಮತ್ತು ವೃತ್ತಿಪರರೊಂದಿಗೆ ಸುದೀರ್ಘ ಸಭೆ ನಡೆಸಿದ್ದೇನೆ. ಈಗ ಇಲ್ಲಿಗೆ ಬಂದ ನಂತರ, ನನ್ನ ಮೊದಲ ಕಾರ್ಯಕ್ರಮವನ್ನು ಯುವಜನರೊಂದಿಗೆ ನಡೆಸುತ್ತಿದ್ದೇನೆ. ದೇಶದ ಸಾವಿರಾರು ಯುವಕರ ಬಹುದಿನಗಳ ಕನಸು ನನಸಾಗುತ್ತಿರುವುದು ಅತ್ಯಂತ ಸಂತಸದ ಸಂದರ್ಭವಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ನನ್ನ ಮುಂದೆ ಮಿನಿ ಇಂಡಿಯಾ ಹೊರಹೊಮ್ಮಿದೆ: ಕುವೈತ್ನಲ್ಲಿ ಪ್ರಧಾನಿ ಮೋದಿ ಮಾತು
ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳವು ಒಂದು ಹೆಜ್ಜೆಯಾಗಿದೆ. ಇದು ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣದಲ್ಲಿ ಭಾಗವಹಿಸಲು ಯುವಜನರಿಗೆ ಅವಕಾಶಗಳನ್ನು ಒದಗಿಸುತ್ತದೆ. ದೇಶಾದ್ಯಂತ 45 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆಯಲಿದೆ. ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ನೇಮಕಾತಿಗಳು ನಡೆಯುತ್ತಿವೆ. ದೇಶಾದ್ಯಂತ ಆಯ್ಕೆಯಾದ ಹೊಸ ನೇಮಕಾತಿಗಳು, ಗೃಹ ಸಚಿವಾಲಯ, ಅಂಚೆ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ ಸೇರಿದಂತೆ ವಿವಿಧ ಸಚಿವಾಲಯಗಳು, ಇಲಾಖೆಗಳಿಗೆ ಸೇರಿಕೊಳ್ಳಲಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ