ವೈಷ್ಣೋದೇವಿ ಭೂಕುಸಿತದಲ್ಲಿ 32 ಜನ ಸಾವು; ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಸಂತಾಪ
ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ ಯಾತ್ರೆಯ ಮಾರ್ಗದಲ್ಲಿ ಮಂಗಳವಾರ ಭೂಕುಸಿತ ಸಂಭವಿಸಿತ್ತು. ಈ ದುರಂತದಲ್ಲಿ ಇದುವರೆಗೂ ಸಾವನ್ನಪ್ಪಿದ ಯಾತ್ರಿಕರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಇದರಲ್ಲಿ 20 ಮಂದಿ ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಕತ್ರಾ ಪಟ್ಟಣದಿಂದ ಬೆಟ್ಟದ ತುದಿಯಲ್ಲಿರುವ ದೇವಾಲಯಕ್ಕೆ ಹೋಗುವ 12 ಕಿ.ಮೀ. ಹಾದಿಯಲ್ಲಿ ಸುಮಾರು ಅರ್ಧ ದಾರಿಯಲ್ಲೇ ಭೂಕುಸಿತ ಸಂಭವಿಸಿದೆ. ವೈಷ್ಣೋದೇವಿ ಮಾರ್ಗದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ನವದೆಹಲಿ, ಆಗಸ್ಟ್ 27: ವೈಷ್ಣೋದೇವಿ ಭೂಕುಸಿತದಲ್ಲಿ (Vaishnodevi Landslide) ಸಂಭವಿಸಿದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು (ಬುಧವಾರ) ದುಃಖ ವ್ಯಕ್ತಪಡಿಸಿದ್ದಾರೆ. ಈ ದುರಂತದಿಂದ ಹಾನಿಗೊಳಗಾದವರಿಗೆ ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಮೋದಿ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಕತ್ರಾ ಪಟ್ಟಣದಿಂದ ಬೆಟ್ಟದ ತುದಿಯಲ್ಲಿರುವ ದೇವಾಲಯಕ್ಕೆ ಹೋಗುವ 12 ಕಿ.ಮೀ. ಹಾದಿಯಲ್ಲಿ ಸುಮಾರು ಅರ್ಧ ದಾರಿಯಲ್ಲೇ ಭೂಕುಸಿತ ಸಂಭವಿಸಿದೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತದಿಂದ ಸಂಭವಿಸಿದ ಜೀವಹಾನಿ ಬಹಳ ದುಃಖಕರವಾಗಿದೆ. ದುಃಖಿತ ಕುಟುಂಬಗಳೊಂದಿಗೆ ನಾವು ಸದಾ ಇರುತ್ತೇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸರ್ಕಾರವು ಎಲ್ಲರಿಗೂ ಸಹಾಯ ಮಾಡುತ್ತಿದೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನನ್ನ ಪ್ರಾರ್ಥನೆಗಳು” ಎಂದಿದ್ದಾರೆ.
The loss of lives due to a landslide on the route to the Shri Mata Vaishno Devi Temple is saddening. My thoughts are with the bereaved families. May the injured recover at the earliest. The administration is assisting all those affected. My prayers for everyone’s safety and…
— Narendra Modi (@narendramodi) August 27, 2025
ಇದನ್ನೂ ಓದಿ: ಜಮ್ಮು ಕಾಶ್ಮೀರ ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ: ಸಾವಿನ ಸಂಖ್ಯೆ 30ಕ್ಕೆ ಏರಿಕೆ
ವೈಷ್ಣೋದೇವಿ ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ನಿರಂತರ ಮಳೆಯಿಂದ ಉಂಟಾದ ಭೂಕುಸಿತದಲ್ಲಿ ಕನಿಷ್ಠ 20 ಜನರು ಗಾಯಗೊಂಡಿದ್ದಾರೆ. ಕತ್ರಾದಿಂದ ದೇಗುಲಕ್ಕೆ ಹೋಗುವ 12 ಕಿ.ಮೀ. ಚಾರಣದ ಅರ್ಧದಾರಿಯಲ್ಲಿ ಭೂಕುಸಿತ ಸಂಭವಿಸಿದೆ. ಈ ದೇಗುಲಕ್ಕೆ ಎರಡು ಮಾರ್ಗಗಳಿವೆ. ಬೆಳಿಗ್ಗೆಯಿಂದ ಹಿಮಕೋಟಿ ಚಾರಣದ ಮಾರ್ಗದಲ್ಲಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಮಧ್ಯಾಹ್ನ 1.30ರವರೆಗೆ ಹಳೆಯ ಮಾರ್ಗದಲ್ಲಿಯೇ ಯಾತ್ರೆ ಸಾಗುತ್ತಿತ್ತು. ಧಾರಾಕಾರ ಮಳೆಯಿಂದಾಗಿ ಮುಂದಿನ ಆದೇಶದವರೆಗೆ ಅದನ್ನು ಸ್ಥಗಿತಗೊಳಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:24 pm, Wed, 27 August 25




