ಮಧ್ಯಪ್ರದೇಶ: ವಂದೇ ಭಾರತ್ ಎಕ್ಸ್‌ಪ್ರೆಸ್​​ಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ನಾವು ಭಾರತೀಯ ರೈಲ್ವೆಯನ್ನು ವಿಶ್ವದಲ್ಲೇ ಅತ್ಯುತ್ತಮವಾಗಿಸಲು ಪ್ರಯತ್ನಗಳನ್ನು ಮಾಡುತ್ತಿದ್ದೇವೆ.900 ನಿಲ್ದಾಣಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ವಂದೇ ಭಾರತ್ ಸೂಪರ್ ಹಿಟ್ ಆಗಿದೆ ಎಂದು ಮೋದಿ ಹೇಳಿದ್ದಾರೆ.

ಮಧ್ಯಪ್ರದೇಶ: ವಂದೇ ಭಾರತ್ ಎಕ್ಸ್‌ಪ್ರೆಸ್​​ಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on:Apr 01, 2023 | 5:45 PM

ದೆಹಲಿ: ಮಧ್ಯಪ್ರದೇಶದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಭೋಪಾಲ್-ನವದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು(ಶನಿವಾರ) ರಾಣಿ ಕಮಲಾಪತಿ ನಿಲ್ದಾಣದಲ್ಲಿ ಚಾಲನೆ ನೀಡಿದರು. ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಮಧ್ಯಪ್ರದೇಶದ ರಾಜ್ಯಪಾಲ ಮಂಗು ಭಾಯಿ ಪಟೇಲ್, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್  ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಭೋಪಾಲ್ (Bhopal) ಮತ್ತು ನವದೆಹಲಿ ನಡುವೆ ಸಂಚರಿಸುವ ದೇಶದ 11 ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ನಡುವಿನ ರೈಲು 7.45 ಗಂಟೆಗಳಲ್ಲಿ 708 ಕಿಮೀ ದೂರವನ್ನು ಕ್ರಮಿಸುತ್ತದೆ.ರೈಲ್ವೆ ಇತಿಹಾಸದಲ್ಲಿ ಇಷ್ಟು ಕಡಿಮೆ ಸಮಯದಲ್ಲಿ ಮತ್ತೆ ಪ್ರಧಾನಿ ಮತ್ತೊಮ್ಮೆ ಬಂದಿರುವುದು ಬಲು ಅಪರೂಪ. ವಂದೇ ಭಾರತ್ ಭಾರತದಲ್ಲಿನ ಹೊಸ ಬೆಳವಣಿಗೆಗಳ ಸಂಕೇತವಾಗಿದೆ ಎಂದು ಮೋದಿ ಹೇಳಿದ್ದರೆ.ಈ ದಿನ ಮೋದಿ ಏಪ್ರಿಲ್ ಫೂಲ್ ಮಾಡುತ್ತಾರೆ ಎಂದು ಕಾಂಗ್ರೆಸ್ ಪಕ್ಷ ಹೇಳುತ್ತದೆ. ಆದರೆ ಇಂದು ವಂದೇ ಭಾರತ್ ರೈಲಿಗೆ ಚಾಲನೆ ನೀಡಲಾಗುತ್ತಿದೆ ಎಂದಿದ್ದಾರೆ ಮೋದಿ.

ಹಿಂದಿನ ಸರ್ಕಾರಗಳಲ್ಲಿ ಅವರು ಒಂದೇ ಕುಟುಂಬವನ್ನು ಭಾರತದ ಮೊದಲ ಕುಟುಂಬ ಎಂದು ಭಾವಿಸಿದ್ದರು ಮತ್ತು ಭಾರತದ ಮಧ್ಯಮ ವರ್ಗದ ಕುಟುಂಬಗಳ ಅಗತ್ಯಗಳಿಗೆ ಯಾವುದೇ ಗಮನ ನೀಡಲಿಲ್ಲ, ಭಾರತದ ರೈಲ್ವೆ ಇದಕ್ಕೆ ದೊಡ್ಡ ಉದಾಹರಣೆಯಾಗಿದೆ. ಭಾರತೀಯ ರೈಲು ಸಾಮಾನ್ಯರ ಪ್ರಯಾಣಕ್ಕಿರುವುದು. ಕಳೆದ 9 ವರ್ಷಗಳಲ್ಲಿ, ನಾವು ಭಾರತೀಯ ರೈಲ್ವೆಯನ್ನು ವಿಶ್ವದಲ್ಲೇ ಅತ್ಯುತ್ತಮವಾಗಿಸಲು ಪ್ರಯತ್ನಗಳನ್ನು ಮಾಡುತ್ತಿದ್ದೇವೆ.900 ನಿಲ್ದಾಣಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ವಂದೇ ಭಾರತ್ ಸೂಪರ್ ಹಿಟ್ ಆಗಿದೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ:ರಾಮನವಮಿ ಮೆರವಣಿಗೆಯಲ್ಲಿ ಕೋಮುಗಲಭೆ; ಬಿಹಾರದ ಸಸಾರಾಮ್‌ನಲ್ಲಿ ಅಮಿತ್ ಶಾ ಕಾರ್ಯಕ್ರಮ ರದ್ದು

ರೈಲಿನಲ್ಲಿ ಪ್ರಯಾಣ ಮಾಡುವುದು ಈಗ ಸುರಕ್ಷಿತವಾಗಿದೆ.ಈಗ ರೈಲುಗಳು ಸ್ವಚ್ಛವಾಗಿರುತ್ತವೆ ಮತ್ತು ಸಮಯಕ್ಕೆ ಸರಿ ಬರುತ್ತವೆ. ಹೊಸ ವಂದೇ ಭಾರತ್ ಹೊಸ ಉದ್ಯೋಗ ಅವಕಾಶಗಳನ್ನು ಮತ್ತು ಅಭಿವೃದ್ಧಿಯನ್ನು ತರುತ್ತದೆ ಎಂದು ಅವರು ಹೇಳಿದರು.

ರೈಲಿನಲ್ಲಿ ಪ್ರಧಾನಮಂತ್ರಿಯವರು ‘ಭಾರತೀಯ ರೈಲು’ ವಿಷಯದ ಕುರಿತು ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಯ ಮೂಲಕ ಆಯ್ಕೆಯಾದ 300 ಕ್ಕೂ ಹೆಚ್ಚು ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಪ್ರದೇಶ ರೈಲ್ವೇಗೆ ರೂ 13,000 ಕೋಟಿ ರೈಲ್ವೆ ಬಜೆಟ್ ಅನ್ನು ನಿಗದಿಪಡಿಸಲಾಗಿದೆ, ಈ ಹಿಂದೆ ಕೇವಲ ₹ 600 ಕೋಟಿ ರೈಲ್ವೆ ಬಜೆಟ್ ಅನ್ನು ನಿಗದಿಪಡಿಸಲಾಗಿತ್ತು. ಮಧ್ಯಪ್ರದೇಶ ಹಳೆಯ ದಿನಗಳನ್ನು ಬಿಟ್ಟು ಅಭಿವೃದ್ಧಿಯತ್ತ ಸಾಗುತ್ತಿರುವುದು ಸಂತಸ ತಂದಿದೆ ಎಂದರು.

ಬೆಳಗ್ಗೆ ಭೋಪಾಲ್‌ಗೆ ಆಗಮಿಸಿದ ಪ್ರಧಾನಿ ಮೋದಿ ರೈಲಿಗೆ ಚಾಲನೆ ನೀಡುವ ಮೊದಲು ಸಂಯೋಜಿತ ಕಮಾಂಡರ್‌ಗಳ ಸಮ್ಮೇಳನದಲ್ಲಿ ಪಾಲ್ಗೊಂಡರು.

ಭಾರತೀಯ ಜನತಾ ಪಕ್ಷದ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಈ ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಸ್ಥಳೀಯವಾಗಿ ವಿನ್ಯಾಸಗೊಳಿಸಲಾದ ರೈಲು ಅತ್ಯಾಧುನಿಕ ಪ್ರಯಾಣಿಕ ಸೌಕರ್ಯಗಳನ್ನು ಹೊಂದಿದೆ. ಇದು ರೈಲು ಬಳಕೆದಾರರಿಗೆ ವೇಗವಾದ, ಹೆಚ್ಚು ಆರಾಮದಾಯಕ ಮತ್ತು ಹೆಚ್ಚು ಅನುಕೂಲಕರ ಪ್ರಯಾಣದ ಅನುಭವವನ್ನು ಒದಗಿಸುತ್ತದೆ. ಇದು ಪ್ರವಾಸೋದ್ಯಮವನ್ನು ಮತ್ತು ಪ್ರದೇಶದಲ್ಲಿ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Sat, 1 April 23