Kerala Vande Bharat Express : ಕೇರಳದ ಮೊದಲ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಪ್ರಧಾನಿ ಮೋದಿ ಚಾಲನೆ

ಕೇರಳದ ಮೊದಲ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

Kerala Vande Bharat Express : ಕೇರಳದ ಮೊದಲ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಪ್ರಧಾನಿ ಮೋದಿ ಚಾಲನೆ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on:Apr 25, 2023 | 11:27 AM

ಕೇರಳ(Kerala) ದ ಮೊದಲ ವಂದೇ ಭಾರತ್ ಎಕ್ಸ್​ಪ್ರೆಸ್(Vande Bharat Express)​ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಈ ರೈಲು ಪ್ರಮುಖವಾಗಿ 11 ಜಿಲ್ಲೆಗಳಿಗೆ ಸಂಚರಿಸಲಿದೆ, ರೈಲು ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಳಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಸೇರಿದಂತೆ ವಿವಿಧ ನಗರಗಳನ್ನು ಸಂಪರ್ಕಿಸಲಿದೆ. ಮೊದಲ ಹಂತದ ಅಡಿಯಲ್ಲಿ ಕಾಸರಗೋಡಿನಿಂದ ತಿರುವನಂತಪುರದವರೆಗಿನ ಸಂಪೂರ್ಣ ಹಳಿಯನ್ನು ಗಂಟೆಗೆ 110 ಕಿ.ಮೀ ವೇಗಕ್ಕೆ ಪರಿವರ್ತಿಸಲು 381 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ.

ತಿರುವುಗಳನ್ನು ನೇರಗೊಳಿಸುವುದು ಮತ್ತು ಇತರ ಅಗತ್ಯ ಹೊಂದಾಣಿಕೆಗಳನ್ನು ಒಳಗೊಂಡಿರುವ ಎರಡನೇ ಹಂತವು ಪೂರ್ಣಗೊಳ್ಳಲು ಎರಡರಿಂದ ಮೂರೂವರೆ ವರ್ಷ ಬೇಕಾಗುತ್ತದೆ. ಬಳಿಕ ಈ ಟ್ರ್ಯಾಕ್‌ನ ವೇಗವನ್ನು ಗಂಟೆಗೆ 130 ಕಿಮೀಗೆ ಹೆಚ್ಚಿಸಲಾಗುತ್ತದೆ.

ಮತ್ತಷ್ಟು ಓದಿ: Secunderabad To Bengaluru Vande Bharat Express: ಇನ್ನು 7 ಗಂಟೆಗಳಲ್ಲೇ ಸಿಕಂದರಾಬಾದ್ -ಬೆಂಗಳೂರು ಮಧ್ಯೆ ವಂದೇ ಭಾರತ್ ಟ್ರೈನ್ ಸಂಚರಿಸಲಿದೆ!

ಏಪ್ರಿಲ್ 17 ರಂದು ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು, ತಿರುವನಂತಪುರ ರೈಲು ನಿಲ್ದಾಣದಿಂದ ಬೆಳಗ್ಗೆ 5:10ಕ್ಕೆ ಆರಂಭವಾದ ಪ್ರಾಯೋಗಿಕ ರೈಲು ಓಡಾಟ ಮಧ್ಯಾಹ್ನ 12:30ಕ್ಕೆ ಕಣ್ಣೂರು ತಲುಪಿತ್ತು.

ಆರಂಭಿಕ ಹಂತದಲ್ಲಿ, ವಂದೇ ಭಾರತ್ ಗಂಟೆಗೆ ಕೇವಲ 100 ಕಿಮೀ ವೇಗದಲ್ಲಿ ಪ್ರಯಾಣಿಸಲಿದೆ. ಒಂದು ವರ್ಷದ ಅವಧಿಯಲ್ಲಿ ವಂದೇ ಭಾರತ್ 130 ಕಿಮೀ ವೇಗದಲ್ಲಿ ಓಡಲಿದೆ. ವೇಗದ ಗುರಿಗಳನ್ನು ತಲುಪಲು ರೈಲುಗೆ ಅನುಕೂಲವಾಗುವಂತೆ ಟ್ರ್ಯಾಕ್ ಜೋಡಣೆ ಸಮೀಕ್ಷೆಯು ಸಮಾನಾಂತರವಾಗಿ ನಡೆಯುತ್ತದೆ. ಈ ರೈಲಿನಲ್ಲಿ ಆರಂಭಿಕ ಸವಾರಿಗಾಗಿ 25 ಪ್ರಯಾಣಿಕರನ್ನು ಆಯ್ಕೆ ಮಾಡಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:18 am, Tue, 25 April 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ