ಪ್ರಧಾನಿ ನರೇಂದ್ರ ಮೋದಿಗೆ ಗಯಾನಾದಲ್ಲಿ ಭಾರತೀಯ ವಲಸಿಗರಿಂದ ಅದ್ದೂರಿ ಸ್ವಾಗತ

ಇಂದು (ಬುಧವಾರ) ಗಯಾನಾಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. 56 ವರ್ಷಗಳ ನಂತರ ಭಾರತದ ಪ್ರಧಾನಿ ನೀಡಿರುವ ಮೊದಲ ಭೇಟಿ ಇದಾಗಿದೆ. ಅವರ ಭೇಟಿಯು ಎರಡೂ ರಾಷ್ಟ್ರಗಳ ನಡುವಿನ ಸ್ನೇಹವನ್ನು ಗಾಢಗೊಳಿಸುತ್ತದೆ ಎಂದು ಹೇಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿಗೆ ಗಯಾನಾದಲ್ಲಿ ಭಾರತೀಯ ವಲಸಿಗರಿಂದ ಅದ್ದೂರಿ ಸ್ವಾಗತ
ಗಯಾನಾಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
Follow us
ಸುಷ್ಮಾ ಚಕ್ರೆ
|

Updated on: Nov 20, 2024 | 2:56 PM

ಜಾರ್ಜ್‌ಟೌನ್: ಗಯಾನಾಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಭಾರತೀಯ ಸಮುದಾಯದವರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಡಯಾಸ್ಪೊರಾ ಸದಸ್ಯರನ್ನು ಶ್ಲಾಘಿಸಿದ್ದಾರೆ. ಅವರಲ್ಲಿ ಹಲವರು 180 ವರ್ಷಗಳ ಹಿಂದೆಯೇ ಭಾರತ ಬಿಟ್ಟು ವಲಸೆ ಬಂದವರು. ಗಯಾನಾದಲ್ಲಿ ಭಾರತೀಯ ಸಮುದಾಯದವರು ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವುದನ್ನು ನೋಡಿ ನನಗೆ ಸಂತೋಷವಾಗಿದೆ ಎಂದು ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿಯವರ ಈ ಭೇಟಿ 56 ವರ್ಷಗಳ ನಂತರ ಗಯಾನಾಗೆ ಭಾರತದ ಮುಖ್ಯಸ್ಥರ ಮೊದಲ ಭೇಟಿಯಾಗಿದೆ. ಅವರು ಮಂಗಳವಾರ ರಾತ್ರಿ ಬ್ರೆಜಿಲ್‌ನಿಂದ ನಿರ್ಗಮಿಸಿದ ನಂತರ ಇಂದು ಬೆಳ್ಳಂಬೆಳಗ್ಗೆ ಗಯಾನಾಗೆ ಆಗಮಿಸಿದರು. ಬಳಿಕ ಹೋಟೆಲ್‌ನಲ್ಲಿ ಭಾರತೀಯ ಡಯಾಸ್ಪೊರಾ ಸದಸ್ಯರೊಂದಿಗೆ ಸಂವಾದ ನಡೆಸಿದರು.

ಇದನ್ನೂ ಓದಿ: ಜರ್ಮನಿಯಲ್ಲಿ ನ್ಯೂಸ್​​9 ಜಾಗತಿಕ ಶೃಂಗಸಭೆಗೆ ವೇದಿಕೆ ಸಿದ್ಧ, ಪ್ರಧಾನಿ ಮೋದಿ ಸೇರಿ ಹಲವು ದಿಗ್ಗಜರು ಭಾಗಿ

“ಹೋಟೆಲ್‌ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಗಯಾನಾದ ಅಧ್ಯಕ್ಷ, ಗ್ರೆನಡಾದ ಪ್ರಧಾನಿ, ಬಾರ್ಬಡೋಸ್‌ನ ಪ್ರಧಾನಿ ಮತ್ತು ಗಯಾನಾದ ಹಲವಾರು ಕ್ಯಾಬಿನೆಟ್ ಮಂತ್ರಿಗಳು ವಿಶೇಷ ಸ್ವಾಗತವನ್ನು ನೀಡಿದರು” ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಎಕ್ಸ್​ ಪೋಸ್ಟ್‌ನಲ್ಲಿ ತಿಳಿಸಿದೆ.

ಗಯಾನಾದಲ್ಲಿ ಸುಮಾರು 3,20,000 ಭಾರತೀಯ ಮೂಲದ ಜನರಿದ್ದಾರೆ. ಭಾರತೀಯ ಮೂಲದ ಜನರನ್ನು ಹೊರತುಪಡಿಸಿ, ಸುಮಾರು 2,000 ಭಾರತೀಯ ಪ್ರಜೆಗಳಿದ್ದಾರೆ. ಮುಖ್ಯವಾಗಿ ಭಾರತೀಯ ಮಿಷನ್ ಭಾರತೀಯ ಮಿಷನ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರ, ಬ್ಯಾಂಕ್ ಆಫ್ ಬರೋಡಾದ ಸಿಬ್ಬಂದಿ ಮತ್ತು ಇತರ ಅಂತಾರಾಷ್ಟ್ರೀಯ ಏಜೆನ್ಸಿಗಳು, ವೈದ್ಯರು, ದಾದಿಯರು, ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಸೀಮಿತವಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಬಿಗಿದಪ್ಪಿ ಬರಮಾಡಿಕೊಂಡ ಗಯಾನಾ ಅಧ್ಯಕ್ಷ ಇರ್ಫಾನ್ ಅಲಿ

ಗಯಾನಾದಲ್ಲಿರುವ ಭಾರತೀಯ ಸಮುದಾಯಕ್ಕೆ ಅವರ ಆತ್ಮೀಯ ಮತ್ತು ಉತ್ಸಾಹಭರಿತ ಸ್ವಾಗತಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು. ನಮ್ಮ ಬೇರುಗಳೊಂದಿಗೆ ಸಂಪರ್ಕದಲ್ಲಿರಲು ದೂರವು ಎಂದಿಗೂ ಅಡ್ಡಿಯಾಗುವುದಿಲ್ಲ ಎಂದು ನೀವು ತೋರಿಸಿದ್ದೀರಿ. ಭಾರತೀಯ ಸಮುದಾಯವು ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳುವುದನ್ನು ನೋಡಲು ಸಂತೋಷವಾಗಿದೆ ”ಎಂದು ಮೋದಿ ಅವರು ಸಂವಾದದ ಕೆಲವು ಫೋಟೋಗಳೊಂದಿಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ